ಬುಧವಾರ, ಸೆಪ್ಟೆಂಬರ್ 17, 2025
ಸೆ.20 ರಂದು ಹೆಚ್.ಟಿ, ಇ.ಹೆಚ್.ಟಿ ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ
ಬಳ್ಳಾರಿ,ಸೆ.17(ಕರ್ನಾಟಕ ವಾರ್ತೆ):
ಬಳ್ಳಾರಿ ನಗರ ಮತ್ತು ಗ್ರಾಮೀಣ ಜೆಸ್ಕಾಂ ವಿಭಾಗದ ವ್ಯಾಪ್ತಿಗೆ ಬರುವ ಬಳ್ಳಾರಿ ಗ್ರಾಮೀಣ, ಕುರುಗೋಡು, ಸಂಡೂರು, ಸಿರುಗುಪ್ಪ, ಕಂಪ್ಲಿ ಉಪವಿಭಾಗ ಮತ್ತು ಬಳ್ಳಾರಿ ನಗರ ಉಪ ವಿಭಾಗ 1, 2 ರ ಎಲ್ಲಾ ಹೆಚ್.ಟಿ ಮತ್ತು ಇ.ಹೆಚ್.ಟಿ ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆಯನ್ನು ಜೆಸ್ಕಾಂ ನ ಕಾರ್ಯ ಮತ್ತು ಪಾಲನ ವೃತ್ತ ಕಚೇರಿಯ ಅಧೀಕ್ಷಕ ಅಭಿಯಂತರರ ಅಧ್ಯಕ್ಷತೆಯಲ್ಲಿ ಸೆ.20 ರಂದು ನಗರದ ಹೆಚ್.ಆರ್ ಗವಿಯಪ್ಪ ವೃತ್ತದ ಬುಡಾ ಕಚೇರಿ ಹಿಂಭಾಗದ ಜೆಸ್ಕಾಂ ವಲಯ ಕಚೇರಿಯ ಮೊದಲ ಮಹಡಿಯ ಸಭಾಭವನದಲ್ಲಿ ನಡೆಯಲಿದೆ.
ಸಂಬAಧಿತ ತಾಲ್ಲೂಕುಗಳ ಎಲ್ಲಾ ಹೆಚ್.ಟಿ ಮತ್ತು ಇ.ಹೆಚ್.ಟಿ ವಿದ್ಯುತ್ ಗ್ರಾಹಕರು ಸಭೆಯಲ್ಲಿ ಪಾಲ್ಗೊಳ್ಳಬೇಕು ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂ ಕಾರ್ಯ ಮತ್ತು ಪಾಲನಾ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ