ಗುರುವಾರ, ಸೆಪ್ಟೆಂಬರ್ 18, 2025
ಸೆ.20 ರಂದು ಹೆಚ್.ಟಿ., ಇ.ಹೆಚ್.ಟಿ ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ
ಬಳ್ಳಾರಿ,ಸೆ.18(ಕರ್ನಾಟಕ ವಾರ್ತೆ):
ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗದ ವ್ಯಾಪ್ತಿಗೆ ಬರುವ ನಗರ ಉಪ ವಿಭಾಗದ 1, 2 ರ ಎಲ್ಲಾ ಹೆಚ್.ಟಿ ಮತ್ತು ಇ.ಹೆಚ್.ಟಿ ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆಯನ್ನು ಸೆ.20 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಹೆಚ್.ಆರ್ ಗವಿಯಪ್ಪ ವೃತ್ತದ ಬುಡಾ ಕಚೇರಿ ಹಿಂಭಾಗದ ಜೆಸ್ಕಾಂ ವಲಯ ಕಚೇರಿಯ ಮೊದಲ ಮಹಡಿಯ ಸಭಾ ಭವನದಲ್ಲಿ ನಡೆಯಲಿದೆ.
ಸಂಬAಧಿತ ಬಳ್ಳಾರಿ ನಗರ ಜೆಸ್ಕಾಂ ಉಪ ವಿಭಾಗದ-1 ರ ಎಲ್ಲಾ ಹೆಚ್.ಟಿ ಮತ್ತು ಇ.ಹೆಚ್.ಟಿ ವಿದ್ಯುತ್ ಗ್ರಾಹಕರು ಸಭೆಯಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ