ಗುರುವಾರ, ಸೆಪ್ಟೆಂಬರ್ 18, 2025

ಸೆ.23 ರಂದು ಇಂಕ್ಯುಬೇಶನ್ ಯೋಜನೆ ಕುರಿತು ಒಂದು ದಿನದ ಜಾಗೃತಿ ಕಾರ್ಯಾಗಾರ

ಬಳ್ಳಾರಿ,ಸೆ.18(ಕರ್ನಾಟಕ ವಾರ್ತೆ): ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಮತ್ತು ಜಿಲ್ಲಾ ಕೈಗಾರಿಕಾ ಕೇಂದ್ರ ವತಿಯಿಂದ ಆರ್‌ಎಎಂಪಿ ಯೋಜನೆಯಡಿ ಇಂಕ್ಯುಬೇಶನ್ ಯೋಜನೆಯ ಕುರಿತು ಸೆ.23 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಕಂಟೋನ್‌ಮೆAಟ್ ನ ರಾವ್ ಬಹದ್ದೂರ್ ವೈ ಮಹಾಬಳೇಶ್ವರಪ್ಪ ಇಂಜಿನಿಯರಿAಗ್ ಕಾಲೇಜ್ ಸಭಾಂಗಣದಲ್ಲಿ ಒಂದು ದಿನದ ಜಾಗೃತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಸೋಮಶೇಖರ್ ಅವರು ತಿಳಿಸಿದ್ದಾರೆ. ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳು ಮತ್ತು ಉದ್ಯಮಿಗಳಲ್ಲಿ ಹಣಕಾಸು, ತಾಂತ್ರಿಕ ಮತ್ತು ಮಾರ್ಗದರ್ಶನ ಬೆಂಬಲದ ಕುರಿತು ಜಾಗೃತಿ ಮೂಡಿಸಲಾಗುತ್ತದೆ. ಇದು ಇನ್‌ಕ್ಯುಬೇಶನ್ ಸೌಲಭ್ಯಗಳನ್ನು ಪ್ರದರ್ಶಿಸುತ್ತದೆ. ಯಶಸ್ಸಿನ ಕಥೆಗಳನ್ನು ಹಂಚಿಕೊಳ್ಳುತ್ತದೆ ಮತ್ತು ನೆಟ್ ವರ್ಕಿಂಗ್‌ಗಾಗಿ ತಜ್ಞರು, ಅಧಿಕಾರಿಗಳು ಮತ್ತು ಉದ್ಯಮಿಗಳೊಂದಿಗೆ ಸಂಪರ್ಕ ಸಾಧಿಸಲು ಅವಕಾಶಗಳನ್ನು ಒದಗಿಸಿಕೊಡುತ್ತದೆ. ಹಾಗಾಗಿ ಆಸಕ್ತ ವಿದ್ಯಾರ್ಥಿಗಳು, ಉದ್ದಿಮೆದಾರರು ಕಾರ್ಯಾಗಾರಲ್ಲಿ ಭಾಗವಹಿಸಬಹುದು ಎಂದು ಅವರು ತಿಳಿಸಿದ್ದಾರೆ. --------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ