ಗುರುವಾರ, ಸೆಪ್ಟೆಂಬರ್ 4, 2025

ಮೃತ ಅನಾಮಧೇಯ ವ್ಯಕ್ತಿ ವಾರಸುದಾರರ ಪತ್ತೆಗೆ ಮನವಿ

ಬಳ್ಳಾರಿ,ಸೆ.04(ಕರ್ನಾಟಕ ವಾರ್ತೆ): ಬಳ್ಳಾರಿ ಗಾಂಧಿನಗರ ಪೋಲಿಸ್ ಠಾಣೆ ವ್ಯಾಪ್ತಿಯ ರೈಲು ನಿಲ್ದಾಣ ಮುಂಭಾಗದಲ್ಲಿ ಸುಮಾರು 55-60 ವರ್ಷದ ಅನಾಮಧೇಯ ವ್ಯಕ್ತಿಯು ಅಸ್ವಸ್ಥನಾಗಿ ಬಿದ್ದಿದ್ದು, ಚಿಕಿತ್ಸೆಗಾಗಿ ಬಿಎಂಸಿಆರ್‌ಸಿ ಆಸ್ಪತ್ರೆಗೆ ದಾಖಲಿಸಲಾಗಿ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು, ಮೃತನ ವಾರಸುದಾರರು ತಿಳಿದಿರುವುದಿಲ್ಲ. ಈ ಕುರಿತು ಪ್ರಕರಣ ದಾಖಲಾಗಿದ್ದು, ಮೃತನ ವಾರಸುದಾರರ ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಠಾಣಾಧಿಕಾರಿ ಮನವಿ ಮಾಡಿದ್ದಾರೆ. ಚಹರೆ ಗುರುತು: ಎತ್ತರ 5.5 ಅಡಿ, ಕೋಲು ಮುಖ, ಗೋದಿ ಮೈಬಣ್ಣ, ತೆಳುವಾದ ಮೈಕಟ್ಟು ಹೊಂದಿದ್ದು, ತಲೆಯಲ್ಲಿ ಬಿಳಿ ಕೂದಲು ಬಿಳಿ ಗಡ್ಡ ಮತ್ತು ಮೀಸೆ ಬಿಟ್ಟಿರುತ್ತಾನೆ. ಮೃತನು ಪಾಚಿ ಕಲರ್ ಟಿ-ಶರ್ಟ್ ಮತ್ತು ಬ್ರೌನ್ ಪ್ಯಾಂಟ್ ಧರಿಸಿರುತ್ತಾನೆ. ಮೇಲ್ಕಂಡ ಚಹರೆ ಗುರುತುಗಳುಳ್ಳ ಮೃತ ವ್ಯಕ್ತಿಯ ವಾರಸುದಾರರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100, ಅಥವಾ ಗಾಂಧಿನಗರ ಪೊಲೀಸ್ ಠಾಣೆಯ ದೂ.08392-272192, ಪಿ.ಐ ಮೊ.9480803046 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ