ಶುಕ್ರವಾರ, ಸೆಪ್ಟೆಂಬರ್ 12, 2025
ವ್ಯಕ್ತಿ ಕಾಣೆ: ಪತ್ತೆಗೆ ಮನವಿ
ಬಳ್ಳಾರಿ,ಸೆ.12(ಕರ್ನಾಟಕ ವಾರ್ತೆ):
ಸಿರುಗುಪ್ಪ ಪಟ್ಟಣದ ಡ್ರೆöÊವರ್ ಕಾಲೋನಿಯ 18ನೇ ವಾರ್ಡ್ನ ಮೇಸ್ತಿç ಕೆಲಸ ಮಾಡುತ್ತಿದ್ದ ಶೀನ ಎನ್ನುವ 34 ವರ್ಷದ ವ್ಯಕ್ತಿಯು ಮಾ.15 ರಂದು ಕೆಲಸಕ್ಕೆ ಹೋಗಿಬರುತ್ತೇನೆ ಎಂದು ಮರಳಿ ಬಾರದೇ ಕಾಣೆಯಾಗಿದ್ದು, ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಸಿರುಗುಪ್ಪ ಠಾಣಾಧಿಕಾರಿ ಮನವಿ ಮಾಡಿದ್ದಾರೆ.
ಚಹರೆ ಗುರುತು: ಅಂದಾಜು 5.5 ಅಡಿ ಎತ್ತರ, ಗೋಧಿಮೈಬಣ್ಣ, ಕೋಲು ಮುಖ, ಸಾಧಾರಣ ಮೈಕಟ್ಟು ಹೊಂದಿದ್ದು, ಬಲ ಕೈಗೆ ಹಚ್ಚೆಯ ಗುರುತು ಇರುತ್ತದೆ.
ಕಾಣೆಯಾದ ಸಂದರ್ಭದಲ್ಲಿ ಹಸಿರು ಬಣ್ಣದ ಅರ್ಧತೋಳಿನ ಅಂಗಿ ಮತ್ತು ನೀಲಿ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ, ತೆಲುಗು, ತಮಿಳು ಭಾಷೆ ಮಾತನಾಡುತ್ತಾನೆ.
ಕಾಣೆಯಾದ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಎಸ್‌ಪಿ ಕಚೇರಿ ದೂ.08392-258400, ಸಿರುಗುಪ್ಪ ಪೊಲೀಸ್ ಠಾಣೆಯ ಪಿಎಸ್‌ಐ ದೂ.08396-220333, ಸಿರುಗುಪ್ಪ ವೃತ್ತದ ಸಿಪಿಐ ದೂ.08396-220003 ಅಥವಾ ಸಿರುಗುಪ್ಪ ಉಪ ವಿಭಾಗದ ಡಿಎಸ್‌ಪಿ ದೂ.08396-276000 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
-------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ