ಮಂಗಳವಾರ, ಸೆಪ್ಟೆಂಬರ್ 16, 2025

ಅನಾಮಧೇಯ ಮೃತ ವ್ಯಕ್ತಿ; ವಾರಸುದಾರರ ಪತ್ತೆಗೆ ಮನವಿ

ಬಳ್ಳಾರಿ,ಸೆ.16(ಕರ್ನಾಟಕ ವಾರ್ತೆ): ನಗರದ ಎಪಿಎಂಸಿ ಯಾರ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ಅಂದಾಜು 35-40 ವರ್ಷದ ಅನಾಮಧೇಯ ವ್ಯಕ್ತಿಯನ್ನು ಅಪರಿಚಿತ ವ್ಯಕ್ತಿಗಳಿಂದ ಯಾವುದೋ ಉದ್ದೇಶಕ್ಕಾಗಿ ಕಲ್ಲುಗಳಿಂದ ಹೊಡೆದು ಸೆ.04 ರಂದು ಕೊಲೆ ಮಾಡಿದ್ದು, ಈ ಕುರಿತು ಪ್ರಕರಣ ದಾಖಲಾಗಿದ್ದು, ಮೃತನ ವಾರಸುದಾರರ ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮನವಿ ಮಾಡಿದ್ದಾರೆ. ಮೃತನ ಚಹರೆ: ಎತ್ತರ ಅಂದಾಜು 5.7 ಅಡಿ, ದುಂಡು ಮುಖ, ಗೋಧಿ ಮೈ ಬಣ್ಣ, ತಲೆಯಲ್ಲಿ ಅಂದಾಜು 3-1/2 ಇಂಚು ಉದ್ದದ ಬಿಳಿ ಮಿಶ್ರಿತ ಕಪ್ಪು ಬಣ್ಣದ ಕೂದಲು, ಅರ್ಧ ಇಂಚು ಉದ್ದದ ಕಪ್ಪು ಮೀಸೆ ಮತ್ತು 1 ಇಂಚು ಉದ್ದದ ಕಪ್ಪು ಮಿಶ್ರಿತ ಬಿಳಿ ಗಡ್ಡ ಇರುತ್ತದೆ. ಮೃತನ ಬಲಗಡೆ ಕಣ್ಣಿನ ಮೇಲೆ ಮತ್ತು ಹಣೆಯ ಎಡಭಾಗದ ಮೇಲೆ ಭಾರಿಗಾಯ ಇರುತ್ತದೆ. ಮೃತನ ಮೈಮೇಲೆ ಮಾಸಿದ ಕೆಂಪು ಮತ್ತು ಕಪ್ಪು ಬಣ್ಣದ ಬಿಳಿ ಗೆರೆಗಳುಳ್ಳ ಪಟ್ಟಿ ಅಂಗಿ ಹಾಗೂ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಹೊಂದಿರುತ್ತಾನೆ. ಈ ಮೇಲ್ಕಂಡ ಚಹರೆ ಗುರುತುಗಳುಳ್ಳ ವ್ಯಕ್ತಿಯ ವಾರಸುದಾರರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಎಪಿಎಂಸಿ ಯಾರ್ಡ್ ಪೊಲೀಸ್ ಠಾಣೆಯ ದೂ.08392-250033, ಮೊ.9480803096 ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ:08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ. ---------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ