ಗುರುವಾರ, ಸೆಪ್ಟೆಂಬರ್ 4, 2025
ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ: ಅರ್ಜಿ ಆಹ್ವಾನ
ಬಳ್ಳಾರಿ,ಸೆ.04(ಕರ್ನಾಟಕ ವಾರ್ತೆ):
ಜಿಲ್ಲಾ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ 2025-26ನೇ ಸಾಲಿನ ಅಲ್ಪಸಂಖ್ಯಾತರ ಯುವಕ ಮತ್ತು ಯುವತಿಯರಿಗೆ ನವೋದ್ಯಮಗಳನ್ನು ಪ್ರಾರಂಭಿಸಲು ಉತ್ತೇಜನ ನೀಡುವ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ.
ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ಮತ್ತು ಆಂಗ್ಲೋ ಇಂಡಿಯನ್ಸ್ ಫಲಾನುಭವಿಗಳು ಆನ್‌ಲೈನ್ ಮೂಲಕ ನಿಗಮದ ವೆಬ್‌ಸೈಟ್ eitbt.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದು. ಸೆ.15 ಅರ್ಜಿ ಸಲ್ಲಿಸಲು ಕೊನೆಯ ದಿನ.
ಹೆಚ್ಚಿನ ಮಾಹಿತಿಗಾಗಿ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರ ಹತ್ತಿರದ ಮೌಲಾನಾ ಆಜಾದ್ ಭವನದ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿ ಅಥವಾ ದೂ. 08392-294370 ಗೆ ಸಂಪರ್ಕಿಸಬಹುದು ಎಂದು ಕನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ