ಸೋಮವಾರ, ಸೆಪ್ಟೆಂಬರ್ 15, 2025

ಮಹಿಳೆ ಕಾಣೆ: ಪತ್ತೆಗೆ ಮನವಿ

ಬಳ್ಳಾರಿ,ಸೆ.15(ಕರ್ನಾಟಕ ವಾರ್ತೆ): ಸಂಡೂರು ತಾಲ್ಲೂಕಿನ ಸುಶೀಲಾನಗರ ಗ್ರಾಮದ 1ನೇ ವಾರ್ಡ್ನ ನಿವಾಸಿ ಲಕ್ಷಿö್ಮÃಬಾಯಿ ಎನ್ನುವ 25 ವರ್ಷದ ಮಹಿಳೆಯು ಆ.27 ರಂದು ಹೊಟ್ಟೆನೋವು ಚಿಕಿತ್ಸೆಗಾಗಿ ಆಸ್ಪತ್ರೆಗೆ ಹೋಗಿಬರುತ್ತೇನೆ ಎಂದು ಹೇಳಿ ಮರಳಿಬಾರದೇ ಕಾಣೆಯಾಗಿದ್ದು, ಈ ಕುರಿತು ಸಂಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಠಾಣಾಧಿಕಾರಿ ಮನವಿ ಮಾಡಿದ್ದಾರೆ. ಚಹರೆ ಗುರುತು: ಅಂದಾಜು 4.9 ಅಡಿ ಎತ್ತರ, ಎಣ್ಣೆಗೆಂಪು ಮೈಬಣ್ಣ, ದುಂಡು ಮುಖ, ಅಗಲವಾದ ಹಣೆ, ಸಾಧಾರಣ ಮೈಕಟ್ಟು ಹೊಂದಿರುತ್ತಾಳೆ. ಮೇಲ್ಭಾಗದ ಹಲ್ಲುಗಳು ಚಿಕ್ಕದಾಗಿದ್ದು, 10 ಇಂಚು ಕಪ್ಪು ಕೂದಲು ಇವೆ. ಕಾಣೆಯಾದ ಸಂದರ್ಭದಲ್ಲಿ ಪಾಚಿ ಹಸಿರು ಬಣ್ಣದ ಸೀರೆ ಮತ್ತು ಬ್ಲೌಸ್ ಧರಿಸಿರುತ್ತಾಳೆ. ಕನ್ನಡ ಮತ್ತು ಲಂಬಾಣಿ ಭಾಷೆ ಮಾತನಾಡುತ್ತಾಳೆ. ಕಾಣೆಯಾದ ಮಹಿಳೆಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಸಂಡೂರು ಪೊಲೀಸ್ ಠಾಣೆ ಪಿ.ಎಸ್.ಐ ಮೊ.9480803061, 8548080429 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ. -------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ