ಸೋಮವಾರ, ಸೆಪ್ಟೆಂಬರ್ 15, 2025
ವ್ಯಕ್ತಿ ಕಾಣೆ: ಪತ್ತೆಗೆ ಮನವಿ
ಬಳ್ಳಾರಿ,ಸೆ.15(ಕರ್ನಾಟಕ ವಾರ್ತೆ):
ಸಂಡೂರು ತಾಲ್ಲೂಕಿನ ಭುಜಂಗನಗರ ಗ್ರಾಮದ 02 ನೇ ವಾರ್ಡ್ನ ನಿವಾಸಿಯಾದ ಕೆ.ಕಲ್ಲೇಶಿ ಎನ್ನುವ 55 ವರ್ಷದ ವ್ಯಕ್ತಿಯು ಸೆ.08 ರಂದು ಕಾಣೆಯಾಗಿರುವ ಕುರಿತು ಸಂಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಠಾಣಾಧಿಕಾರಿ ಮನವಿ ಮಾಡಿದ್ದಾರೆ.
ಚಹರೆ ಗುರುತು: ಅಂದಾಜು 5.2 ಅಡಿ ಎತ್ತರ, ದುಂಡು ಮುಖ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಮುಖದಲ್ಲಿ ಕಪ್ಪು ಚುಕ್ಕೆ ಗುರುತು ಇವೆ. ಕಾಣೆಯಾದ ಸಂದರ್ಭದಲ್ಲಿ ಕೇಸರಿ ಬಣ್ಣದ ತುಂಬು ತೋಳಿನ ಅಂಗಿ ಮತ್ತು ಕಡು ನೀಲಿ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ ಭಾಷೆ ಮಾತನಾಡುತ್ತಾನೆ.
ಕಾಣೆಯಾದ ವ್ಯಕ್ತಿಯ ಬಗ್ಗೆ ಸುಳಿವು ಸಿಕ್ಕಲ್ಲಿ ಸಂಡೂರು ಪೊಲೀಸ್ ಠಾಣೆಯ ಪಿ.ಎಸ್.ಐ ಮೊ.9480803061, 8548080429 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ