ಮಂಗಳವಾರ, ಸೆಪ್ಟೆಂಬರ್ 16, 2025
ಅನಾಮಧೇಯ ಮೃತ ವ್ಯಕ್ತಿ; ವಾರಸುದಾರರ ಪತ್ತೆಗೆ ಮನವಿ
ಬಳ್ಳಾರಿ,ಸೆ.16(ಕರ್ನಾಟಕ ವಾರ್ತೆ):
ನಗರದ ಎಪಿಎಂಸಿ ಯಾರ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ಕೆ.ಎಸ್.ಆರ್.ಟಿ.ಸಿ ಹೊಸ ಬಸ್ ನಿಲ್ದಾಣದಲ್ಲಿ ಅಂದಾಜು 35-40 ವರ್ಷದ ಅನಾಮಧೇಯ ವ್ಯಕ್ತಿಯು ಸೆ.12 ರಂದು ಮೃತಪಟ್ಟಿದ್ದು, ಈ ಕುರಿತು ಪ್ರಕರಣ ದಾಖಲಾಗಿದ್ದು, ಮೃತನ ವಾರಸುದಾರರ ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಠಾಣಾಧಿಕಾರಿ ಮನವಿ ಮಾಡಿದ್ದಾರೆ.
ಮೃತನ ಚಹರೆ: ಎತ್ತರ ಅಂದಾಜು 5.5 ಅಡಿ, ದುಂಡು ಮುಖ, ಎಣ್ಣೆಗೆಂಪು ಮೈ ಬಣ್ಣ, ತಲೆಯಲ್ಲಿ ಅಂದಾಜು 2-1/2 ಇಂಚು ಉದ್ದದÀ ಕಪ್ಪು ಬಣ್ಣದ ಕೂದಲು, 1 ಇಂಚು ಉದ್ದದ ಕಪ್ಪು ಮೀಸೆ ಮತ್ತು 1/4 ಇಂಚು ಉದ್ದದ ಕಪ್ಪು ಗಡ್ಡ ಇರುತ್ತದೆ. ಮೃತನ ಮೈಮೇಲೆ ಬಿಳಿ ಬಣ್ಣದ ಕಪ್ಪು ಬಣ್ಣದ ಚುಕ್ಕೆಗಳಿರುವ ಅರ್ಧ ತೋಳಿನ ಅಂಗಿ ಮತ್ತು ಕಪ್ಪು ಬಣ್ಣದ ಜೀನ್ಸ್ ಪ್ಯಾಂಟ್ ಹೊಂದಿರುತ್ತಾನೆ.
ಈ ಮೇಲ್ಕಂಡ ಚಹರೆ ಗುರುತುಗಳುಳ್ಳ ವ್ಯಕ್ತಿಯ ವಾರಸುದಾರರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಎಪಿಎಂಸಿ ಯಾರ್ಡ್ ಪೊಲೀಸ್ ಠಾಣೆಯ ದೂ.08392-250033, ಮೊ.9480803096 ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ:08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
---------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ