ಶನಿವಾರ, ಸೆಪ್ಟೆಂಬರ್ 20, 2025

ಬಳ್ಳಾರಿ: ಲಿಂಗತ್ವ ಅಲ್ಪಸಂಖ್ಯಾತರು ಸಮೀಕ್ಷೆಯಲ್ಲಿ ಪಾಲ್ಗೊಳ್ಳಿ

ಬಳ್ಳಾರಿ,ಸೆ.20(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಈಗಾಗಲೇ ಆರಂಭಗೊAಡಿರುವ ಲಿಂಗತ್ವ ಅಲ್ಪಸಂಖ್ಯಾತರ ಮೂಲಹಂತದ ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಫಲಾನುಭವಿಗಳು ತಪ್ಪದೇ ಪಾಲ್ಗೊಳ್ಳಬೇಕು ಎಂದು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ ನಾಯಕ ಅವರು ತಿಳಿಸಿದ್ದಾರೆ. ಸಮೀಕ್ಷೆಯು ಈಗಾಗಲೇ ಜಿಲ್ಲಾ ಮತ್ತು ತಾಲ್ಲೂಕು ಸರ್ಕಾರಿ ಆಸ್ಪತ್ರೆಗಳಲ್ಲಿ ನಡೆಯುತ್ತಿದ್ದು, ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಲಿಂಗತ್ವ ಅಲ್ಪಸಂಖ್ಯಾತರು ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ತಮ್ಮ ಹೆಸರು ಹಾಗೂ ವಿವರಗಳನ್ನು ನೋಂದಾಯಿಸಿಕೊಳ್ಳಬೇಕು. ರಾಜ್ಯ ಸರ್ಕಾರವು ಲಿಂಗತ್ವ ಅಲ್ಪಸಂಖ್ಯಾತರಿಗೆ ಪುನರ್ವಸತಿ ಕಲ್ಪಿಸುವ ನಿಟ್ಟಿನಲ್ಲಿ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಗತಿ ಕುರಿತಂತೆ ನಿಖರ ಮಾಹಿತಿ ಸಂಗ್ರಹಿಸಲು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ವತಿಯಿಂದ ಮೊದಲ ಬಾರಿಗೆ ರಾಜ್ಯಾದಾದ್ಯಂತ ಲಿಂಗತ್ವ ಅಲ್ಪಸಂಖ್ಯಾತರ ಮೂಲಹಂತದ ಸಮೀಕ್ಷೆ ನಡೆಸಲಾಗುತ್ತಿದೆ. ಸಮೀಕ್ಷೆ ಕುರಿತಂತೆ ಯಾವುದೇ ಸಹಾಯ, ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 18005992025 ಗೆ ಕರೆಮಾಡಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ