ಮಂಗಳವಾರ, ಸೆಪ್ಟೆಂಬರ್ 23, 2025
ಬಳ್ಳಾರಿ: ನೋಂದಣಿಯಾಗಿ ಚಾಲನೆಯಲ್ಲಿರದ ರಾಜಕೀಯ ಪಕ್ಷದ ವಿಚಾರಣೆ
ಬಳ್ಳಾರಿ,ಸೆ.23(ಕರ್ನಾಟಕ ವಾರ್ತೆ):
ಜಿಲ್ಲೆಯಲ್ಲಿ ನೋಂದಣಿಯಾಗಿ ಚಾಲನೆಯಲ್ಲಿರದ ರಾಜಕೀಯ ಪಕ್ಷದ ವಿಚಾರಣೆ ನಡೆಸಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ತಿಳಿಸಿದ್ದಾರೆ.
ಬಳ್ಳಾರಿ ಜಿಲ್ಲೆಯಲ್ಲಿ ನೋಂದಾಯಿತ, ಮಾನ್ಯತೆ ಪಡೆಯದ ರಾಜಕೀಯ ಪಕ್ಷವಾದ ‘ಚಾಲೆಂಜರ್ಸ್ ಪಾರ್ಟಿ’ ಪಕ್ಷವು ಅಧಿಕೃತ ಪ್ರತಿನಿಧಿಯು ಇಚ್ಛಿಸಿದಲ್ಲಿ ಮುಖ್ಯ ಚುನಾವಣಾಧಿಕಾರಿಗಳು, ಕರ್ನಾಟಕ, ಬೆಂಗಳೂರು ಇವರಿಗೆ 2025ರ ಅಕ್ಟೋಬರ್ 14 ರೊಳಗಾಗಿ ತಮ್ಮ ಲಿಖಿತ ಮನವಿಯನ್ನು ಸಲ್ಲಿಸಬಹುದು.
ಈ ರಾಜಕೀಯ ಪಕ್ಷದ ವಿಚಾರಣೆಯನ್ನು ಅಕ್ಟೋಬರ್ 14 ರಂದು ನಿಗದಿಪಡಿಸಲಾಗಿದ್ದು, ವಿಚಾರಣೆಗೆ ಪಕ್ಷದ ಮುಖ್ಯಸ್ಥರು/ಅಧ್ಯಕ್ಷರು/ಪ್ರಧಾನ ಕಾರ್ಯದರ್ಶಿಗಳು ಕಡ್ಡಾಯವಾಗಿ ಹಾಜರಿರಬೇಕು.
ಒಂದು ವೇಳೆ ನಿಗದಿತ ಸಮಯದೊಳಗೆ ಪಕ್ಷದಿಂದ ಯಾವುದೇ ಲಿಖಿತ ಮನವಿ ಸ್ವೀಕೃತವಾಗದೇ ಇದ್ದಲ್ಲಿ ಪಕ್ಷದ ಯಾವುದೇ ಹೇಳಿಕೆ ಇರುವುದಿಲ್ಲವೆಂದು ಪರಿಗಣಿಸಿ, ಪಕ್ಷವನ್ನು ಸಂಪರ್ಕಿಸದೇ ಚುನಾವಣಾ ಆಯೋಗದಿಂದ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ