ಸೋಮವಾರ, ಸೆಪ್ಟೆಂಬರ್ 15, 2025
ವಿವಿಧ ಕಾರ್ಯಕ್ರಮ ಆಯೋಜನೆ | ಬಳ್ಳಾರಿಯಲ್ಲಿ ಸಂಭ್ರಮದ ಅಂತರಾಷ್ಟಿçÃಯ ದಿನಾಚರಣೆ | ಸಂವಿಧಾನದಿAದ ದೇಶ ಭದ್ರ: ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅಭಿಮತ
ಬಳ್ಳಾರಿ,ಸೆ.15(ಕರ್ನಾಟಕ ವಾರ್ತೆ):
ಭಾರತ ಸಂವಿಧಾನವನ್ನು ನಾವೆಲ್ಲರೂ ಎಷ್ಟು ಗೌರವಿಸುತ್ತೇವೆಯೋ, ಅಷ್ಟೇ ಮುಂಬರುವ ದಿನಗಳಲ್ಲಿ ಅಭಿವೃದ್ಧಿ ಹೊಂದಿದ ಭಾರತ ಕಾಣುತ್ತೇವೆ. ಆದರೆ ತಿರಸ್ಕಾರ ಮನೋಭಾವ ಕಂಡಾಗ ರಾಷ್ಟçದ ಅವನತಿಯ ಹಾದಿಯೂ ಸಹ ಅಷ್ಟೇ ಸಮೀಪಿಸುತ್ತದೆ ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಅಭಿಪ್ರಾಯ ಪಟ್ಟರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ‘ನನ್ನ ಮತ-ನಮ್ಮ ಹಕ್ಕು’ ಎಂಬ ಧ್ಯೇಯವಾಕ್ಯದೊಂದಿಗೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದಲ್ಲಿ ಸೋಮವಾರ ಏರ್ಪಡಿಸಿದ್ದ ಅಂತರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಡಾ.ಬಾಬು ಜಗನ್‌ಜೀವನ್ ರಾಮ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಈಗಿನ ಪೀಳಿಗೆಯು ಪ್ರಸ್ತುತ ದಿನಮಾನಗಳಲ್ಲಿ ನಡೆಯುವ ಆಗು-ಹೋಗುಗಳನ್ನು ಗಮನಿಸಬೇಕಿದೆ. ರಾಷ್ಟçದ ವ್ಯವಸ್ಥೆ, ಕಾನೂನುಗಳ ಪರಿಪೂರ್ಣತೆ, ಕಾನೂನು ಅನುಷ್ಟಾನವಾಗದಿದ್ದರೆ ಆಗುವ ಘಟನೆಗಳನ್ನು ಗಮನಿಸಬೇಕು. ಹಾಗಾಗಿ ವಿದ್ಯಾರ್ಥಿಗಳು ಆಳವಾದ ಅಧ್ಯಯನ ನಡೆಸಬೇಕು ಎಂದು ಕಿವಿಮಾತು ಹೇಳಿದರು.
ಸ್ವಾತಂತ್ರö್ಯದ ನಂತರದ ದೇಶದ ಅಭಿವೃದ್ಧಿ ಮತ್ತು ಮುಂದಿನ ಪೀಳಿಗೆಯ ಭವಿಷ್ಯಕ್ಕಾಗಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಭಾರತಕ್ಕೆ ಅತ್ಯುತ್ತಮ ಆಡಳಿತ ವ್ಯವಸ್ಥೆ ನೀಡಬೇಕೆಂದು ಗಣರಾಜ್ಯ ಹಾಗೂ ಪ್ರಜಾಪ್ರಭುತ್ವ ಕಲ್ಪನೆಯನ್ನು ರೂಪಿಸಿ ಅದನ್ನು ಸಂವಿಧಾನದಲ್ಲಿ ಅಳವಡಿಸಿ, ಅದೇರೀತಿಯಾದ ಆಡಳಿತ ರೂಪಿಸಿ, ಆ ವ್ಯವಸ್ಥೆಯನ್ನು ಅಂಗೀಕರಿಸಿ, ನಮಗೆ ನಾವೇ ಅರ್ಪಿಸಿಕೊಂಡಿದ್ದೇವೆ ಎಂದು ತಿಳಿಸಿದರು.
ಡಾ.ಬಿ.ಆರ್.ಅಂಬೇಡ್ಕರ್ ಅವರು ಅಪಾರ ಜ್ಞಾನಿಗಳಾಗಿದ್ದರು. ಅವರು ಎಲ್ಲಾ ಕಾನೂನುಗಳನ್ನು ಅರಿತುಕೊಂಡಿದ್ದರು. ಜಗತ್ತಿನ ಎಲ್ಲಾ ವ್ಯವಸ್ಥೆಗಳನ್ನು ಅರಿತುಕೊಂಡ ಬಾಬಾ ಸಾಹೇಬರು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಸಂವಿಧಾನದ ಮೂಲಕ ಕಲ್ಪಿಸಿಕೊಟ್ಟರು. ಯಾವುದೇ ಒಂದು ದೇಶದ ಅಭಿವೃದ್ಧಿಯು ಅಲ್ಲಿನ ಆಡಳಿತ ವ್ಯವಸ್ಥೆ ಮೇಲೆ ಅವಲಂಬಿತವಾಗಿರುತ್ತದೆ. ಅಂತಹ ಉತ್ತಮ ಆಡಳಿತ ವ್ಯವಸ್ಥೆಯನ್ನು ನಮ್ಮ ದೇಶದಲ್ಲಿ ಕಾಣಬಹುದಾಗಿದೆ ಎಂದರು.
ವಿಶ್ವದಲ್ಲಿಯೇ ಎರಡನೇ ಅತಿದೊಡ್ಡ ಜನಸಂಖ್ಯೆ ಹೊಂದಿದ ರಾಷ್ಟç ಭಾರತ. ಪ್ರಜಾಪ್ರಭುತ್ವ ಹೊಂದಿದ ರಾಷ್ಟçವಾಗಿದೆ. ಜನಪ್ರತಿನಿಧಿಗಳಿಂದಲೇ ಕಾನೂನು ರೂಪಿಸಲಾಗುತ್ತದೆ. ಜನರಿಗಾಗಿಯೇ ಅನುಷ್ಠಾನಗೊಳಿಸಲಾಗುತ್ತದೆ. ಹಾಗಾಗಿ ವಿಶ್ವವೇ ಅಭಿವೃದ್ಧಿ ಹೊಂದುತ್ತಿರುವ ನಮ್ಮ ರಾಷ್ಟçದತ್ತ ನೋಡುತ್ತಿದೆ ಎಂದು ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ಮಾತನಾಡಿ, ಇಂದಿನ ಯುವ-ಪೀಳಿಗೆಯೇ ಪ್ರಜಾಪ್ರಭುತ್ವ ಭವಿಷ್ಯವಾಗಿದೆ. ಈಗಿನ ಯುವ ಮನಸ್ಕರು ಸಂವಿಧಾನ ಹಕ್ಕುಗಳು ಮತ್ತು ಮೂಲಭೂತ ಕರ್ತವ್ಯಗಳ ಅರಿವು ಹೊಂದಬೇಕಿದೆ. ಉದಾತ್ತ ಗುರಿ ಹೊಂದುವುದರ ಮೂಲಕ ದೇಶಕ್ಕೆ ಅಭಿವೃದ್ಧಿಯ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು.
ವಿಶೇಷ ಉಪನ್ಯಾಸಕರಾಗಿ ಭಾಗವಹಿಸಿದ್ದ ಕಂಪ್ಲಿಯ ಉಪನ್ಯಾಸಕರಾದ ರಮೇಶ್ ಛಲವಾದಿ ಅವರು ಮಾತನಾಡಿ, ಜನರ ಆರ್ಥಿಕ ಮತ್ತು ಸಾಮಾಜಿಕ ಜೀವನದಲ್ಲಿ ಯಾವುದೇ ರಕ್ತಕ್ರಾಂತಿಯಿಲ್ಲದೇ, ಕ್ರಾಂತಿಕಾರಕ ಬದಲಾವಣೆ ತರುವುದೇ, ಪ್ರಜಾಪ್ರಭುತ್ವ ಸರ್ಕಾರವಾಗಿದೆ. ಪ್ರಜಾಪ್ರಭುತ್ವವು ನಮಗೆ ಸಿಕ್ಕಿರುವ ವರದಾನವಾಗಿದೆ ಎಂದು ಹೇಳಿದರು.
ಪ್ರಜಾಪ್ರಭುತ್ವದ ತಾಯಿ ಬೇರು ಮತದಾನ. ಅದನ್ನು ಹೇಗೆ ಬಳಸಿಕೊಳ್ಳಬೇಕು ಎಂಬುದನ್ನು ನಾವು ಅರಿತುಕೊಂಡರೆ, ಅಂದುಕೊAಡAತಹ ಅಭಿವೃದ್ಧಿ ದೇಶವನ್ನು ಕಾಣಬಹುದಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮ ಆರಂಭಕ್ಕೂ ಮುನ್ನ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಸಂವಿಧಾನ ಪ್ರಸ್ತಾವನೆಯನ್ನು ಬೋಧಿಸಿದರು. ಇಂದಿನಿAದ ಅಕ್ಟೋಬರ್ ಅಂತ್ಯದವರೆಗೆ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಭಾಷಣ, ಚರ್ಚಾಸ್ಪರ್ಧೆ, ಚಿತ್ರಕಲೆ ಮತ್ತು ಫೋಟೋಗ್ರಫಿ ಸ್ಪರ್ಧೆಗಳಿಗೆ ಚಾಲನೆ ನೀಡಲಾಯಿತು. ನ.26 ರಂದು ವಿಜೇತರಾದವನ್ನು ಸನ್ಮಾನಿಸಲಾಗುತ್ತದೆ.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚಿದಾನಂದಪ್ಪ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಲಾಲಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ ನಾಯ್ಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ಡಿಡಿಪಿಯು ನಾಗಲಿಂಗಯ್ಯ ಸ್ವಾಮಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬಳ್ಳಾರಿ ಜಿಲ್ಲಾ ಅಧ್ಯಕ್ಷ ಆಸೀಫ್ ಸೇರಿದಂತೆ ವಿವಿಧ ಸಂಘ-ಸAಸ್ಥೆಗಳ ಪದಾಧಿಕಾರಿಗಳು, ಶಾಲಾ-ಕಾಲೇಜು ಮಕ್ಕಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.
*ಆಕರ್ಷಕ ಸೈಕಲ್ ರ‍್ಯಾಲಿ:*
ಅಂತರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ನಗರದಲ್ಲಿ ಸೋಮವಾರ ನೂತನ ಜಿಲ್ಲಾಡಳಿತ ಭವನದಿಂದ ಆಕರ್ಷಕ ಸೈಕಲ್ ರ‍್ಯಾಲಿ ನಡೆಯಿತು. ‘ನನ್ನ ಮತ-ನಮ್ಮ ಹಕ್ಕು’ ಎಂಬ ಘೋಷಣೆ ಕೂಗಲಾಯಿತು. ಚಿಗುರು ಕಲಾತಂಡದ ಹುಲುಗಪ್ಪ ಸಂಗಡಿಗರಿAದ ಮತದಾನ ಜಾಗೃತಿ ಗೀತೆಗಳನ್ನು ಪ್ರಸ್ತುತಪಡಿಸಿದರು.
ಬಳಿಕ ಸೈಕಲ್ ರ‍್ಯಾಲಿಗೆ ಜಿಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಅವರು ಸೈಕಲ್ ಸವಾರಿ ಮಾಡುವ ಮೂಲಕ ಚಾಲನೆ ನೀಡಿದರುರ‍್ಯಾಲಿಯು ನೂತನ ಜಿಲ್ಲಾಡಳಿತ ಭವನದಿಂದ ಆರಂಭಗೊAಡು ಗಡಿಗಿ ಚೆನ್ನಪ್ಪ ವೃತ್ತ- ಕನಕ ದುರ್ಗಮ್ಮ ದೇವಸ್ಥಾನ ವೃತ್ತ- ಎಸ್.ಪಿ ವೃತ್ತ- ಹೆಚ್.ಆರ್.ಗವಿಯಪ್ಪ ವೃತ್ತದ ಮಾರ್ಗವಾಗಿ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದ ವೇದಿಕೆ ಕಾರ್ಯಕ್ರಮದವರೆಗೆ ಸಾಗಿಬಂದಿತು.
---------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)













ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ