ಶುಕ್ರವಾರ, ಅಕ್ಟೋಬರ್ 31, 2025
ನ.02 ರಂದು ಕೆ-ಸೆಟ್ ಪರೀಕ್ಷೆ; ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿ ಸುತ್ತ-ಮುತ್ತ ನಿರ್ಬಂಧ
ಬಳ್ಳಾರಿ,ಅ.31(ಕರ್ನಾಟಕ ವಾರ್ತೆ):
ನಗರದ 20 ಪರೀಕ್ಷಾ ಕೇಂದ್ರಗಳಲ್ಲಿ ನ.02 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 01 ಗಂಟೆಯವರೆಗೆ ಕೆ-ಸೆಟ್-2025 ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ಭಾರತೀಯ ನಾಗರೀಕ ಸುರಕ್ಷಾ ಸಂಹಿತಾ 2023 ರ ಕಲಂ 163 ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ನಿರ್ಭಂಧಿತ ಪ್ರದೇಶ ಎಂದು ಘೋಷಿಸಿ ಜಿಲ್ಲಾ ದಂಡಾಧಿಕಾರಿಯೂ ಆದ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಆದೇಶಿಸಿದ್ದಾರೆ.
ಪರೀಕ್ಷಾ ಕೇಂದ್ರಗಳ ಸುತ್ತಲೂ ಇರುವ ಜೆರಾಕ್ಸ್ ಸೆಂಟರ್ ಮತ್ತು ಇಂಟರ್‌ನೆಟ್ ಸೆಂಟರ್‌ಗಳನ್ನು ಕಾರ್ಯನಿರ್ವಹಿಸದಂತೆ ಪ್ರತಿಬಂಧಿಸಲು ಆದೇಶಿಸಿದ್ದು, ಆ ಪ್ರದೇಶದಲ್ಲಿ ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶ ನಿಷೇಧಿಸಲಾಗಿದೆ.
ಈ ಆದೇಶವು ಪರೀಕ್ಷೆಯ ಮೇಲ್ವಿಚಾರಣೆ ಕಾರ್ಯನಿರ್ವಹಿಸುವ ಸಿಬ್ಬಂದಿಯವರಿಗೆ ಅನ್ವಯಿಸುವುದಿಲ್ಲ ಎಂದು ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.
--------------
ನ.03 ರಂದು ಕುಷ್ಠರೋಗ ಪತ್ತೆ ಹಚ್ಚುವ ಆಂದೋಲನಾ ಸಮೀಕ್ಷೆ ಕಾರ್ಯಕ್ರಮ
ಬಳ್ಳಾರಿ,ಅ.31(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಮಹಾನಗರ ಪಾಲಿಕೆ, ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮ ವಿಭಾಗ ಹಾಗೂ ಮಿಲ್ಲರ್‌ಪೇಟೆ ನಗರ ಆರೋಗ್ಯ ಕೇಂದ್ರ ಬಳ್ಳಾರಿ ಇವರ ಸಂಯುಕ್ತಾಶ್ರಯದಲ್ಲಿ ನ.03 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಮಿಲ್ಲರ್ ಪೇಟೆಯ ವಾರ್ಡ್ ನಂ.13 ರಲ್ಲಿ ರಾಷ್ಟಿçÃಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದಡಿ (ನ.03 ರಿಂದ ನ.19 ರವರೆಗೆ 14 ದಿನಗಳ ಕಾಲ) ಕುಷ್ಠರೋಗ ಪತ್ತೆ ಹಚ್ಚುವ ಅಂದೋಲನಾ ಸಮೀಕ್ಷೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮಹಾನಗರ ಪಾಲಿಕೆಯ ಸದಸ್ಯ ಇಬ್ರಾಹಿಂಬಾಬು ಅವರು ಕಾರ್ಯಕ್ರಮ ಉದ್ಘಾಟಿಸುವರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ವೀರೇಂದ್ರ ಕುಮಾರ್ ಅವರು ಪ್ರಾಸ್ತಾವಿಕವಾಗಿ ಮಾತನಾಡುವರು.
ಜಿಲ್ಲಾ ಶಸ್ತçಚಿಕಿತ್ಸಕ ಡಾ.ಎನ್.ಬಸರೆಡ್ಡಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ತುಕಾರಾಂ ರಾವ್ ಬಿ.ವಿ., ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಹಾಗೂ ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಆರ್.ಅಬ್ದುಲ್ಲಾ, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ.ಮರಿಯಂಬಿ ವಿ.ಕೆ., ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮ ಅನುಷ್ಟಾನ ಅಧಿಕಾರಿ ಡಾ.ಪೂರ್ಣಿಮ ಕಟ್ಟಿಮನಿ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಇಂದ್ರಾಣಿ.ವಿ., ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಹನುಮಂತಪ್ಪ, ಮಿಲ್ಲರ್ ಪೇಟೆಯ ವೈದ್ಯಾಧಿಕಾರಿಗಳಾದ ಡಾ.ನವೀನ್ ಕುಮಾರ್, ಡಾ.ಶೋಭ, ಡಾ.ಹರೀಶ್ ಸೇರಿದಂತೆ ಇತರರು ಮುಖ್ಯ ಅಥಿಗಳಾಗಿ ಭಾಗವಹಿಸುವರು.
ಪ್ರಭಾರಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಖುರ್ಶಿದ್ ಬೇಗಮ್ ಸ್ವಾಗತ ಮತ್ತು ನಿರೂಪಣೆ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.
----------------
ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್ ಬಳ್ಳಾರಿಗೆ
ಬಳ್ಳಾರಿ,ಅ.31(ಕರ್ನಾಟಕ ವಾರ್ತೆ):
ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್ ಅವರು ನ.01 ರಂದು ಬೆಳಿಗ್ಗೆ 09 ಗಂಟೆಗೆ ನಗರದ ಡಾ.ರಾಜ್ ಕುಮಾರ್ ರಸ್ತೆಯ ಸರ್ಕಾರಿ (ಮಾಪು) ಪದವಿಪೂರ್ವ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತ ವತಿಯಿಂದ ಹಮ್ಮಿಕೊಂಡಿರುವ 70 ನೇ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಧ್ವಜಾರೋಹಣಾ ಕಾರ್ಯಕ್ರಮದಲ್ಲಿಭಾಗವಹಿಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಡಾ.ಕೆ.ಮುರಳಿಧರ ಅವರು ತಿಳಿಸಿದ್ದಾರೆ.
---------------
ಕರ್ನಾಟಕ ವಿಧಾನಪರಿಷತ್ ಈಶಾನ್ಯ ಶಿಕ್ಷಕರ ಚುನಾವಣೆಗೆ ಮತದಾರರ ಪಟ್ಟಿ ಸಿದ್ಧಪಡಿಸುವಿಕೆ | ಜಿಲ್ಲಾ ಮಟ್ಟದ ಮೇಲ್ವಿಚಾರಣೆಗಾಗಿ ನೋಡೆಲ್ ಅಧಿಕಾರಿಗಳ ನೇಮಕ
ಬಳ್ಳಾರಿ,ಅ.31(ಕರ್ನಾಟಕ ವಾರ್ತೆ):
ಕರ್ನಾಟಕ ವಿಧಾನಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ-2026 ಗೆ ಹೊಸದಾಗಿ ಮತದಾರರ ಪಟ್ಟಿ ಸಿದ್ಧಪಡಿಸಲು ಅರ್ಹ ಮತದಾರರನ್ನು ಗುರುತಿಸಿ ಅವರನ್ನು ಪಟ್ಟಿಯಲ್ಲಿ ನೋಂದಾಯಿಸಲು ಈ ಪ್ರಕ್ರಿಯೆಯ ಜಿಲ್ಲಾ ಮಟ್ಟದ ಮೇಲ್ವಿಚಾರಣೆಗಾಗಿ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಜಿಲ್ಲಾ ನೋಡೆಲ್ ಅಧಿಕಾರಿಗಳಾಗಿ ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ತಿಳಿಸಿದ್ದಾರೆ.
*ಅಧಿಕಾರಿಗಳ ಹುದ್ದೆ, ವಹಿಸಲಾದ ಕಾರ್ಯಭಾರ:*
ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯ ಕುಲಪತಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಮತ್ತು ಆಯಾ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು- ತಮ್ಮ ಅಧೀನದಲ್ಲಿ ಬರುವ ಇಲಾಖೆ, ಕಚೇರಿ, ಸಂಸ್ಥೆಗಳ ಕಾರ್ಯ ವ್ಯಾಪ್ತಿಯಲ್ಲಿ ಬರುವ ಶಿಕ್ಷಣ ಸಂಸ್ಥೆಗಳಲ್ಲಿನ ಅರ್ಹ ಮತದಾರರನ್ನು ಗುರುತಿಸಿ ನೋಂದಾಯಿಸುವ ಪ್ರಕ್ರಿಯೆಯಲ್ಲಿನ ನೋಡೆಲ್ ಅಧಿಕಾರಿಯಾಗಿರುತ್ತಾರೆ.
ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದ ಪ್ರಾಂಶುಪಾಲರು- ಜಿಲ್ಲೆಯಲ್ಲಿನ ಸರ್ಕಾರಿ, ಅನುದಾನಿತ, ಅನುದಾನ ರಹಿತ ಮೆಡಿಕಲ್ ಕಾಲೇಜು, ಡೆಂಟಲ್ ಕಾಲೇಜು, ನರ್ಸಿಂಗ್ ಕಾಲೇಜು ಶಿಕ್ಷಣ ಸಂಸ್ಥೆಗಳಲ್ಲಿನ ಅರ್ಹ ಮತದಾರರನ್ನು ಗುರುತಿಸಿ ನೋಂದಾಯಿಸುವ ಪ್ರಕ್ರಿಯೆಯ ನೋಡೆಲ್ ಅಧಿಕಾರಿಯಾಗಿರುತ್ತಾರೆ.
ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು(ಸ್ವಾಯತ್ತ)ನ ಪ್ರಾಂಶುಪಾಲರು- ಜಿಲ್ಲೆಯಲ್ಲಿ ಬರುವ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪದವಿ ಶಿಕ್ಷಣ ಸಂಸ್ಥೆಗಳಲ್ಲಿನ ಅರ್ಹ ಮತದಾರರನ್ನು ಗುರುತಿಸಿ ನೋಂದಾಯಿಸುವ ಪ್ರಕ್ರಿಯೆಯಲ್ಲಿನ ನೋಡೆಲ್ ಅಧಿಕಾರಿಯಾಗಿರುತ್ತಾರೆ.
ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರು- ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪಾಲಿಟೆಕ್ನಿಕ್ ಕಾಲೇಜು ಶಿಕ್ಷಣ ಸಂಸ್ಥೆಗಳಲ್ಲಿನ ಅರ್ಹ ಮತದಾರರನ್ನು ಗುರುತಿಸಿ ನೋಂದಾಯಿಸುವ ಪ್ರಕ್ರಿಯೆಯಲ್ಲಿನ ನೋಡೆಲ್ ಅಧಿಕಾರಿಯಾಗಿರುತ್ತಾರೆ.
ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರು- ಜಿಲ್ಲಾ ವ್ಯಾಪ್ತಿಯಲ್ಲಿನ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿನ ಅರ್ಹ ಮತದಾರರನ್ನು ಗುರುತಿಸಿ ನೋಂದಾಯಿಸುವ ಪ್ರಕ್ರಿಯೆಯಲ್ಲಿನ ನೋಡೆಲ್ ಅಧಿಕಾರಿಯಾಗಿರುತ್ತಾರೆ.
ತಾರಾನಾಥ ಆಯುರ್ವೇದ ಕಾಲೇಜಿನ ಪ್ರಾಂಶುಪಾಲರು- ಜಿಲ್ಲಾ ವ್ಯಾಪ್ತಿಯಲ್ಲಿನ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಆಯುಷ್, ಹೋಮಿಯೋಪತಿ, ಯುನಾನಿ, ಸಂಸ್ಥೆಗಳಲ್ಲಿನ ಅರ್ಹ ಮತದಾರರನ್ನು ಗುರುತಿಸಿ ನೋಂದಾಯಿಸುವ ಪ್ರಕ್ರಿಯೆಯಲ್ಲಿನ ನೋಡೆಲ್ ಅಧಿಕಾರಿಯಾಗಿರುತ್ತಾರೆ.
ಬಳ್ಳಾರಿ ತಾಲ್ಲೂಕಿಗೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ, ಸಂಡೂರು ತಾಲ್ಲೂಕಿಗೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ, ಸಿರುಗುಪ್ಪ ತಾಲ್ಲೂಕಿಗೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು, ಕಂಪ್ಲಿ ತಾಲ್ಲೂಕಿಗೆ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಕುರುಗೋಡು ತಾಲ್ಲೂಕಿಗೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ- ಮೇಲ್ಕಂಡ ಎಲ್ಲಾ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನಿತ ರಹಿತ ಪದವಿ ಪೂರ್ವ ಕಾಲೇಜುಗಳಿಗೆ ಭೇಟಿ ನೀಡಿ ನಮೂನೆ-19 ಸ್ವೀಕೃತಿಯಾದ ಬಗ್ಗೆ ಮತ್ತು ಭರ್ತಿ ಮಾಡಿ ಮರು ಸಲ್ಲಿಸಿರುವ ಬಗ್ಗೆ ಪರಿಶೀಲಿಸಿ ನಿಗದಿತ ನಮೂನೆಯಲ್ಲಿ ಮಾಹಿತಿ ನೀಡಲಿದ್ದಾರೆ.
ಈ ಮೇಲಿನಂತೆ ನೇಮಕಗೊಂಡಿರುವ ಮೇಲ್ವಿಚಾರಣಾಧಿಕಾರಿಗಳು ಅವರವರ ಇಲಾಖೆಯ, ಕಚೇರಿ, ಸಂಸ್ಥೆಗಳ ಕಾರ್ಯ ವ್ಯಾಪ್ತಿಯಲ್ಲಿ ಬರುವ ಶಿಕ್ಷಣ ಸಂಸ್ಥೆಗಳಲ್ಲಿನ ಅರ್ಹ ಮತದಾರರನ್ನು ಗುರುತಿಸಿ ನೋಂದಾಯಿಸುವಲ್ಲಿ ಕ್ರಿಯಾತ್ಮಕವಾಗಿ ಕಾರ್ಯನಿರ್ವಹಿಸಬೇಕು. ಜಿಲ್ಲೆಯಲ್ಲಿ ಬರುವ ನ.03 ರಂದು ವಿಶೇಷ ಮಿಂಚಿನ ನೋಂದಣಿ ಕಾರ್ಯಕ್ರಮ ಹಮ್ಮಿಕೊಂಡು ಸ್ವೀಕೃತಿಯಾದ ನಮೂನೆ-19 ಅರ್ಹ ಮತದಾರರ ಪಟ್ಟಿಯ ಸಂಖ್ಯೆಯೊAದಿಗೆ ನಿಗದಿತ ನಮೂನೆಯಲ್ಲಿ ಮಾಹಿತಿ ಪಡೆಯಬೇಕು.
ಅರ್ಜಿ ಸಲ್ಲಿಸಲು ನ.06 ಕೊನೆಯ ದಿನವಾಗಿರುವುದರಿಂದ ಯಾವುದೇ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಕ್ರಮವಹಿಸಬೇಕು ಎಂದು ಎಂದು ಜಿಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಅವರು ತಿಳಿಸಿದ್ದಾರೆ.
---------------
ಏಕೀಕರಣದ ರೂವಾರಿ ಸರ್ದಾರ್ ವಲ್ಲಭಭಾಯಿ ಪಟೇಲ್: ಡಾ.ಧೂಪಂ ಸತೀಶ್
ಬಳ್ಳಾರಿ,ಅ.31(ಕರ್ನಾಟಕ ವಾರ್ತೆ):
ಸ್ವತಂತ್ರ ಭಾರತ ಏಕೀಕರಣದ ರೂವಾರಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ಆಗಿದ್ದರು. ಅವರ ಜನ್ಮ ವಾರ್ಷಿಕೋತ್ಸವವನ್ನು ಪ್ರತಿ ವರ್ಷ ಅಕ್ಟೋಬರ್ 31 ರಂದು ರಾಷ್ಟಿçÃಯ ಏಕತಾ ದಿನವನ್ನಾಗಿ ಆಚರಿಸಲಾಗುತ್ತದೆ ಎಂದು ಅಲ್ಲಂ ಸುಮಂಗಳಮ್ಮ ಸ್ಮಾರಕ ಮಹಿಳಾ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಧೂಪಂ ಸತೀಶ್ ಅವರು ಹೇಳಿದರು.
ಕೇಂದ್ರ ಸಂವಹನ ಇಲಾಖೆ ಹಾಗೂ ವೀರಶೈವ ವಿದ್ಯಾವರ್ಧಕ ಸಂಘದ ಶ್ರೀಮತಿ ಅಲ್ಲಂ ಸುಮಂಗಳಮ್ಮ ಸ್ಮಾರಕ ಮಹಿಳಾ ಮಹಾವಿದ್ಯಾಲಯ, ವಿದ್ಯಾಲಯದ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ವಿಭಾಗದ ರೇಂಜರ್ ಯೂನಿಟ್ ಮತ್ತು ರಾಜ್ಯಶಾಸ್ತç ವಿಭಾಗ ಸಹಯೋಗದಲ್ಲಿ ರಾಷ್ಟಿçÃಯ ಏಕತಾ ದಿನದ ಅಂಗವಾಗಿ ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮತನಾಡಿದರು.
ಭಾರತದ ಸ್ವಾತಂತ್ರö್ಯ ಹೋರಾಟದಲ್ಲಿ ಪ್ರಮುಖ ವ್ಯಕ್ತಿ ಮತ್ತು ಭಾರತದ ಮೊದಲ ಉಪ ಪ್ರಧಾನ ಮಂತ್ರಿ ಮತ್ತು ಗೃಹ ಸಚಿವ ಆಗಿದ್ದರು ಎಂದು ಸ್ಮರಿಸಿದರು.
ಕೇಂದ್ರ ಸಂವಹನ ಇಲಾಖೆಯ ಅಧಿಕಾರಿ ರಾಮಕೃಷ್ಣ ಅವರು ರಾಷ್ಟಿçÃಯ ಏಕತಾ ದಿನಾಚರಣೆಯ ಮಹತ್ವ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು.
ಕಾರ್ಯಕ್ರಮದಲ್ಲಿ ರಾಷ್ಟಿçÃಯ ಏಕತಾ ದಿನದ ಪ್ರತಿಜ್ಞಾ ವಿಧಿಯನ್ನು ರೇಂಜರ್ ಲೀಡರ್ ಡಾಕ್ಟರ್ ಮಂಗಳ ಬಿ.ಎನ್ ಅವರು ಭೋದಿಸಿದರು.
ರಾಷ್ಟಿçÃಯ ಏಕತಾ ದಿನದ ಅಂಗವಾಗಿ ಭಾಷಣ ಸ್ಪರ್ಧೆ ಮತ್ತು ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿತ್ತು. ತೀರ್ಪುಗಾರರಾಗಿ ಆಂಗ್ಲ ವಿಭಾಗದ ಉಪನ್ಯಾಸಕರಾದ ನೇತ್ರಾವತಿ, ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಸೌಮ್ಯ.ಐ., ಶೇಕ್ ಯಾಸ್ಮಿನ್, ಪೂರ್ಣಿಮಾ ಅವರು ಕಾರ್ಯ ನಿರ್ವಹಿಸಿದರು.
ಬಳಿಕ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿನಿಯರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದ ನಂತರ ರಾಷ್ಟಿçÃಯ ಏಕತಾ ದಿನದ ಅಂಗವಾಗಿ ಬಳ್ಳಾರಿಯ ಗಾಂಧಿನಗರದ ಪ್ರಮುಖ ರಸ್ತೆಗಳಲ್ಲಿ ಮಹಾವಿದ್ಯಾಲಯದ ವಿದ್ಯಾರ್ಥಿಗಳು, ರೇಂಜರ್ ವಿದ್ಯಾರ್ಥಿಗಳಿಂದ ಕಾಲ್ನಡಿಗೆ ಜಾಥ ನಡೆಯಿತು.
ಈ ಸಂದರ್ಭದಲ್ಲಿ ಕಾಲೇಜಿನ ಐಕ್ಯೂಎಸಿ ಸಂಯೋಜಕ ಡಾ.ಸಾಯಿದಾ ತನ್ವೀರ್, ರಾಜ್ಯಶಾಸ್ತç ವಿಭಾಗದ ಮುಖ್ಯಸ್ಥ ಸುಂದರಮೂರ್ತಿ.ಟಿ., ಇತಿಹಾಸ ವಿಭಾಗದ ಮುಖ್ಯಸ್ಥ ರಾಮಲಿಂಗ.ಟಿ., ಅರ್ಥಶಾಸ್ತç ವಿಭಾಗದ ಮುಖ್ಯಸ್ಥರಾದ ಪೂರ್ಣಿಮಾ.ವೈ., ಬಿಸಿಎ ವಿಭಾಗದ ಮುಖ್ಯಸ್ಥರಾದ ಶೇಕ್ ಯಾಸ್ಮೀನ್, ಎನ್‌ಎಸ್‌ಎಸ್ ಅಧಿಕಾರಿ ಚೋಳೇಂದ್ರ ಭೂಪಾಲ್ ಸೇರಿದಂತೆ ಎಲ್ಲಾ ವಿಭಾಗದ ಉಪನ್ಯಾಸಕರು ಮತ್ತು ರೇಂಜರ್ ವಿದ್ಯಾರ್ಥಿನಿಯರು ಇತರರು ಉಪಸ್ಥಿತರಿದ್ದರು.
ಬಿಎ ವಿಭಾಗದ ವಿದ್ಯಾರ್ಥಿನಿ ಕೆ.ಎಂ.ಚೈತನ್ಯ ಪ್ರಾರ್ಥನ ಗೀತೆ ಪ್ರಸ್ತುತಪಡಿಸಿದರು. ವಿದ್ಯಾರ್ಥಿನಿ ದುರ್ಗಮ್ಮ ಅತಿಥಿಗಳನ್ನು ಸ್ವಾಗತಿಸಿದರು. ವಿದ್ಯಾರ್ಥಿನಿ ಕುಪ್ಪಗಲ್ ಅಖಿಲ ಅವರು ವಂದನಾರ್ಪಣೆ ಮಾಡಿದರು.
----------------
ನ.13 ರಿಂದ 19 ರ ವರೆಗೆ ಬಳ್ಳಾರಿಯಲ್ಲಿ ಅಗ್ನಿವೀರ್ ನೇಮಕಾತಿ ರ‍್ಯಾಲಿ
ಬಳ್ಳಾರಿ,ಅ.31(ಕರ್ನಾಟಕ ವಾರ್ತೆ):
ಬೆಂಗಳೂರು ಪ್ರಧಾನ ಕಚೇರಿ ನೇಮಕಾತಿ ವಲಯದಿಂದ ನವೆಂಬರ್ 13 ರಿಂದ 19 ರ ವರೆಗೆ ಬಳ್ಳಾರಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಅಗ್ನಿವೀರ್ ನೇಮಕಾತಿ ರ‍್ಯಾಲಿ ಏರ್ಪಡಿಸಲಾಗಿದೆ.
ಕರ್ನಾಟಕ, ಕೇರಳ, ಲಕ್ಷದ್ವೀಪ ಮತ್ತು ಮಾಹೆ ರಾಜ್ಯದ ಅಭ್ಯರ್ಥಿಗಳಿಗೆ 30 ಜೂನ್ 2025 ರಿಂದ 10 ಜುಲೈ 2025 ರವರೆಗೆ ನಡೆಸಲಾದ ಆನ್‌ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಗ್ನಿವೀರ್ ವರ್ಗಗಳ ಅರ್ಜಿದಾರರನ್ನು (ಅನ್ವಯವಾಗುವಂತೆ) ವರ್ಗವಾರು ರ‍್ಯಾಲಿಗೆ ಕರೆಯಲಾಗಿದೆ.
*ಶಾರ್ಟ್ ಲಿಸ್ಟ್ ಮಾಡಿದ ಅಭ್ಯರ್ಥಿಗಳ ರಾಜ್ಯ ಮತ್ತು ಜಿಲ್ಲೆಗಳ ವಿವಿಧ ವರ್ಗ:*
*ಅಗ್ನಿವೀರ್ ಸಾಮಾನ್ಯ ಕರ್ತವ್ಯ ಮಾತ್ರ(ಅಗ್ನಿವೀರ್ ಸಾಮಾನ್ಯ ಕರ್ತವ್ಯ ವರ್ಗಕ್ಕೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು):*
ಕರ್ನಾಟಕ ರಾಜ್ಯದ ಬೆಂಗಳೂರು ನಗರ, ಬೆಂಗಳೂರು ಗ್ರಾಮೀಣ, ತುಮಕೂರು, ಮಂಡ್ಯ, ಮೈಸೂರು, ಬಳ್ಳಾರಿ, ಚಾಮರಾಜನಗರ, ರಾಮನಗರ, ಕೊಡಗು, ಕೋಲಾರ, ಚಿಕ್ಕಬಳ್ಳಾಪುರ, ಹಾಸನ, ಚಿತ್ರದುರ್ಗ, ವಿಜಯನಗರ.
*ಅಗ್ನಿವೀರ್ ಜನರಲ್ ಡ್ಯೂಟಿ ವರ್ಗ (ಅಗ್ನಿವೀರ್ ಟೆಕ್ನಿಕಲ್, ಅಗ್ನಿವೀರ್ ಕ್ಲರ್ಕ್/ಸ್ಟೋರ್ ಕೀಪರ್ ಟೆಕ್ನಿಕಲ್, ಅಗ್ನಿವೀರ್ ಟ್ರೇಡ್ಸ್ಮ್ಯಾನ್ (10ನೇ ಪಾಸ್) ಮತ್ತು ಅಗ್ನಿವೀರ್ (8ನೇ ತೇರ್ಗಡೆ) ಟ್ರೇಡ್ಸ್ಮ್ಯಾನ್ ಹೊರತುಪಡಿಸಿ ಒಂದೇ ವರ್ಗಕ್ಕೆ ಮಾತ್ರ ಅರ್ಜಿ ಸಲ್ಲಿಸಿದ ಎಲ್ಲಾ ಅಭ್ಯರ್ಥಿಗಳಿಗೆ):
ಬೆಂಗಳೂರು ಪ್ರಧಾನ ಕಚೇರಿಯ ಆರ್‌ಓ ವ್ಯಾಪ್ತಿಯ ಕರ್ನಾಟಕ ರಾಜ್ಯದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಮಂಡ್ಯ, ಮೈಸೂರು, ಬಳ್ಳಾರಿ, ಚಾಮರಾಜನಗರ, ರಾಮನಗರ, ಕೊಡಗು, ಕೋಲಾರ, ಚಿಕ್ಕಬಳ್ಳಾಪುರ, ಹಾಸನ, ಚಿತ್ರದುರ್ಗ, ವಿಜಯನಗರ.
*ಬಹು ವಿಭಾಗಗಳಿಗೆ ಅರ್ಜಿ ಸಲ್ಲಿಸಿದ ಎಲ್ಲಾ ಅಭ್ಯರ್ಥಿಗಳು:*
ಎಆರ್‌ಓ ಮಂಗಳೂರು ವ್ಯಾಪ್ತಿಯ ಕರ್ನಾಟಕ ರಾಜ್ಯದ ವಿಜಯಪುರ, ಬಾಗಲಕೋಟೆ, ಗದಗ, ಧಾರವಾಡ, ಉತ್ತರ ಕನ್ನಡ, ಹಾವೇರಿ, ದಾವಣಗೆರೆ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳು.
ಎಆರ್‌ಓ ಕ್ಯಾಲಿಕಟ್ ವ್ಯಾಪ್ತಿಯ ಕ್ಯಾಲಿಕಟ್, ತ್ರಿಶೂರ್, ಕಣ್ಣೂರು, ಪಲ್ಲಕಾಡ್, ಮಲ್ಲಪುರಂ, ಕಾಸರಗೋಡು ಮತ್ತು ಕೇರಳ ರಾಜ್ಯದ ವಯನಾಡ್ ಮತ್ತು ಲಕ್ಷದ್ವೀಪದ ಯು.ಟಿ. ಮತ್ತು ಮಾಹೆ.
ಸೈನ್ಯದಲ್ಲಿ ಎಲ್ಲಾ ವರ್ಗಗಳ ನೋಂದಣಿಗಾಗಿ ರ‍್ಯಾಲಿಯನ್ನು ಆಯೋಜಿಸಲಾಗಿದೆ. ಸೇನೆಯಲ್ಲಿ ನಿರ್ದಿಷ್ಟಪಡಿಸಿದ ವಿಭಾಗಗಳಲ್ಲಿ ದಾಖಲಾತಿಗಾಗಿ ವಯಸ್ಸು, ಶಿಕ್ಷಣ ಅರ್ಹತೆ ಇತರ ಮಾನದಂಡಗಳ ವಿವರಗಳನ್ನು ಜೆಐಅ ವೆಬ್‌ಸೈಟ್‌ನಲ್ಲಿ 12 ಮಾರ್ಚ್ 2025 ರಂದು ಪ್ರಕಟಿಸಲಾದ ಅಧಿಸೂಚನೆಯ ಪ್ರಕಾರ ನೀಡಲಾಗಿದೆ.
www.joinindianarmy.nic.in ನಲ್ಲಿ ಪ್ರಕಟವಾದ ಆನ್‌ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶ, ಪ್ರವೇಶ ಕಾರ್ಡ್ ಗಳನ್ನು ಶಾರ್ಟ್ ಲಿಸ್ಟ್ ಮಾಡಿದ ಅಭ್ಯರ್ಥಿಗಳಿಗೆ ಅವರ ಇಮೇಲ್ ನಲ್ಲಿ ರವಾನಿಸಲಾಗಿದೆ. ಅವರ ವೈಯಕ್ತಿಕ ಖಾತೆ ಮತ್ತು ನೋಂದಾಯಿತ ಇಮೇಲ್ ಐಡಿಯನ್ನು ಲಾಗಿನ್ ಮಾಡುವ ಮೂಲಕ ಪ್ರವೇಶಿಸಬಹುದಾದ ಭಾರತೀಯ ಸೇನೆಯ ವೆಬ್‌ಸೈಟ್‌ನಲ್ಲಿಯೂ ಸಹ ಲಭ್ಯವಿದೆ.
ಅಭ್ಯರ್ಥಿಗಳು ಯಾವುದೇ ವಂಚಕರು ಅಥವಾ ಮಧ್ಯವರ್ತಿಗಳಿಗೆ ಕಿವಿಗೊಡಬಾರದು. ಆನ್‌ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆ ಸಮಯದಲ್ಲಿ ಅಭ್ಯರ್ಥಿಗಳ ಕಾರ್ಯಕ್ಷಮತೆ, ನೇಮಕಾತಿ ರ‍್ಯಾಲಿಯ ಸಮಯದಲ್ಲಿ ನಡೆಸುವ ಪರೀಕ್ಷೆಗಳು ಮತ್ತು ಅಂತಿಮ ಅರ್ಹತೆಯ ಮೇಲೆ ಆಯ್ಕೆ ಮಾಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.
---------------
ವಿಜಯನಗರ ಶ್ರೀಕೃಷ್ಣದೇವರಾಯ ವಿವಿ: ಪ್ರಸಾರಾಂಗದ ಪುಸ್ತಕಗಳಿಗೆ ಶೇ.20ರಷ್ಟು ವಿಶೇಷ ರಿಯಾಯಿತಿ
ಬಳ್ಳಾರಿ,ಅ.31(ಕರ್ನಾಟಕ ವಾರ್ತೆ):
ಕನ್ನಡ ರಾಜ್ಯೋತ್ಸವದ ಅಂಗವಾಗಿ ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಪ್ರಸಾರಾಂಗವು ತಮ್ಮ ಪ್ರಕಟಣೆಯ ಪುಸ್ತಕಗಳಿಗೆ ನವೆಂಬರ್ ತಿಂಗಳಲ್ಲಿ ಪುಸ್ತಕದ ಮುಖಬೆಲೆಯ ಶೇ.20 ರಷ್ಟು ವಿಶೇಷ ರಿಯಾಯತಿ ನೀಡಿದೆ ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯ ಕುಲಪತಿ ಪ್ರೊ. ಎಂ. ಮುನಿರಾಜು ಅವರು ತಿಳಿಸಿದ್ದಾರೆ.
ವಿವಿಯ ಪ್ರಸಾರಾಂಗವು ಇಲ್ಲಿಯವರೆಗೆ 40 ಕ್ಕೂ ಹೆಚ್ಚು ಪುಸ್ತಕಗಳನ್ನು ಹೊರತಂದಿದ್ದು, ಪ್ರಚಾರೋಪನ್ಯಾಸ ಮಾಲೆ, ವಿಶೇಷ ಪುಸ್ತಕಗಳು (ಪಠ್ಯಪುಸ್ತಕಗಳನ್ನು ಹೊರತುಪಡಿಸಿ) ಸೇರಿದಂತೆ ಈ ಕೃತಿಗಳು ಕೈಗೆಟಕುವ ಬೆಲೆಯಲ್ಲಿ ದೊರೆಯಬೇಕೆಂಬ ಉದ್ದೇಶದಿಂದ ಪುಸ್ತಕಗಳ ಮೇಲೆ ಶೇ.20 ರಿಯಾಯತಿಯನ್ನು ವಿವಿಯು ಘೋಷಿಸಿದೆ.
ಪುಸ್ತಕ ಮಾರಾಟಗಾರರು, ಸಾಹಿತ್ಯಾಸಕ್ತರು, ವಿದ್ಯಾರ್ಥಿಗಳು, ಸಂಶೋಧಕರು, ಜನಸಾಮಾನ್ಯರು ಈ ವಿಶೇಷ ರಿಯಾಯಿತಿಯ ಪ್ರಯೋಜನವನ್ನು ಪಡೆದುಕೊಳ್ಳಲು ವಿವಿಯ ಪ್ರಸಾರಾಂಗಕ್ಕೆ ಭೇಟಿ ಅಥವಾ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------------
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ: ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ
ಬಳ್ಳಾರಿ,ಅ.31(ಕರ್ನಾಟಕ ವಾರ್ತೆ):
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪಿಯುಸಿ ಹೊರತುಪಡಿಸಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ‘ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ’ ಕಾರ್ಯಕ್ರಮಗಳ ಸೌಲಭ್ಯಕ್ಕಾಗಿ ಈಗಾಗಲೇ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ನ.15 ರವರೆಗೆ ವಿಸ್ತರಿಸಲಾಗಿದೆ.
ಅರ್ಜಿ ಸಲ್ಲಿಸಲು ಆನ್‌ಲೈನ್ ವೆಬ್‌ಸೈಟ್ https://ssp.postmatric.karnataka.gov.in/ ಗೆ ಭೇಟಿ ನೀಡಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ನಗರದ ಜೋಳದರಾಶಿ ದೊಡ್ಡನಗೌಡ ರಂಗಮAದಿರ ಹತ್ತಿರದ ಡಿ.ದೇವರಾಜು ಅರಸು ಭವನದ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ದೂ.0850770005 ಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
ನ.02 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ,ಅ.31(ಕರ್ನಾಟಕ ವಾರ್ತೆ):
ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 110/11 ಕೆವಿ ಸೌತ್ ವಿದ್ಯುತ್ ವಿತರಣಾ ಕೇಂದ್ರದಿAದ ವಿದ್ಯುತ್ ಸರಬರಾಜಾಗುವ ಎಫ್-25 ಹಾಗೂ ಎಫ್-46 ಫೀಡರ್‌ನಲ್ಲಿ ಲಿಂಕ್ ಲೈನ್ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ನ.02 ರಂದು ಬೆಳಿಗ್ಗೆ 09.30 ಗಂಟೆಯಿAದ ಸಂಜೆ 06 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.
*ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:*
ಆರ್.ಕೆ ಮಿಲ್ ರೋಡ್, ಬಾಪೂಜಿ ನಗರ ಸರ್ಕಲ್, ರಾಣಿತೋಟ, ಕಣೆಕಲ್ ಬಸ್ ಸ್ಟಾö್ಯಂಡ್, ದೊಡ್ಡ ಮಾರ್ಕೆಟ್, ಸಣ್ಣ ಮಾರ್ಕೆಟ್, ಕಾರ್ಕಳ ತೋಟ, ಸಾಯಿ ಕಾಲೋನಿ, ಆರ್.ಆರ್ ಲೇಔಟ್, ಟೋಪಿಗಲ್ಲಿ, ಮರಿಸ್ವಾಮಿ ಮಠ, ಇಂಡಸ್ಟಿçಯಲ್ ಏರಿಯಾ ಹಂತ-1, ಮಾರೆಮ್ಮನ ಗುಡಿ ಹಿಂದುಗಡೆ ಗುಡಿ ಏರಿಯಾ ಸೇರಿದಂತೆ ಇನ್ನೂ ಮುಂತಾದ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಕಾರ್ಯನಿರ್ವಾಹಕ ಅಭಿಯಂತರರು ಸಹಕರಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------------
ರಾಷ್ಟಿçÃಯ ಐಕ್ಯತೆ ಸಾರಿದ ದೇಶ ನಮ್ಮದು: ಎಸ್‌ಪಿ ಡಾ.ಶೋಭಾರಾಣಿ ವಿ.ಜೆ
ಬಳ್ಳಾರಿ,ಅ.31(ಕರ್ನಾಟಕ ವಾರ್ತೆ):
ಭಾರತವು ವಿವಿಧತೆಯಲ್ಲಿ ಏಕತೆ ಹೊಂದಿದ ರಾಷ್ಟçವಾಗಿದ್ದು, ಪ್ರಪಂಚದಾದ್ಯAತ ರಾಷ್ಟಿçÃಯ ಐಕ್ಯತೆ ಸಾರಿದ ದೇಶ ನಮ್ಮದಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ ಅವರು ಹೇಳಿದರು.
ರಾಷ್ಟಿçÃಯ ಐಕ್ಯತಾ ದಿನಾಚರಣೆ ಅಂಗವಾಗಿ ಸ್ವಾತಂತ್ರö್ಯ ಹೋರಾಟಗಾರ, ಏಕೀಕರಣದ ಶಿಲ್ಪಿ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ 150ನೇ ಜನ್ಮದಿನದ ವಾರ್ಷಿಕೋತ್ಸವದ ನಿಮಿತ್ತ ಸಾರ್ವಜನಿಕರಲ್ಲಿ ನಾಗರಿಕರ ಸುರಕ್ಷತೆ ಮತ್ತು ಜವಾಬ್ದಾರಿಗಳ ಕುರಿತು ಅರಿವು ಮೂಡಿಸಲು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ನಗರದ ಡಿಎಆರ್ ಪೊಲೀಸ್ ಕವಾಯತು ಮೈದಾನದಲ್ಲಿ ರನ್-ಫಾರ್-ಯುನಿಟಿ (ಏಕತೆಗಾಗಿ ಓಟ) ಮ್ಯಾರಥಾನ್ ಓಟ ಕಾರ್ಯಕ್ರಮಕ್ಕೆ ಶುಕ್ರವಾರ ಚಾಲನೆ ನೀಡಿ ಅವರು ಮಾತನಾಡಿದರು.
ಅಖಂಡ ಭಾರತ ಒಗ್ಗೂಡುವಿಕೆಗೆ ಕಾರಣೀಭೂತರಾದ ಉಕ್ಕಿನ ಮನುಷ್ಯ ಎಂದೇ ಖ್ಯಾತಿ ಪಡೆದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಸೇವೆ ಅಪಾರವಾಗಿದೆ. ಭಾರತ ದೇಶವು ಸ್ವಾತಂತ್ರö್ಯದ ನಂತರ ಎಲ್ಲಾ ರಾಜ್ಯಗಳನ್ನು ವಿಲೀನಗೊಳಿಸಲು ಹಾಗೂ ಒಕ್ಕೂಟ ವ್ಯವಸ್ಥೆಯನ್ನು ಒಟ್ಟುಗೂಡಿಸಲು ಸಾಕಷ್ಟು ಶ್ರಮಿಸಿದ್ದರು ಎಂದು ತಿಳಿಸಿದರು.
ಭಾರತದಲ್ಲಿ 565 ಕ್ಕೂ ಹೆಚ್ಚು ರಾಜಪ್ರಭುತ್ವದ ಸಂಸ್ಥಾನಗಳನ್ನು ಒಟ್ಟುಗೂಡಿಸಿ ಒಂದೇ ಒಕ್ಕೂಟ ವ್ಯವಸ್ಥೆಯನ್ನು ರಚಿಸಿದರು. ಸರ್ದಾರ್ ವಲ್ಲಭಭಾಯಿ ಪಟೇಲ್ ಉಕ್ಕಿನಂತಹ ದೃಢತೆಯೇ ದೇಶದ ಏಕತೆಗೆ ಕಾರಣವಾಗಿದೆ. ರಾಜಿ ಸಂಧಾನ ಮತ್ತು ಮಿಲಿಟರಿ ಪೋರ್ಸ್ಗಳ ಮೂಲಕ ಏಕತೆಯನ್ನು ಮೂಡಿಸಿದರು. ಹಾಗಾಗಿ ಸ್ವತಂತ್ರ ಭಾರತದ ಮೊದಲ ಉಪಪ್ರಧಾನಿ ಮತ್ತು ಗೃಹ ಸಚಿವರಾದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಗೌರವಾರ್ಥವಾಗಿ ಅಕ್ಟೋಬರ್ 31 ರಂದು ‘ರಾಷ್ಟಿçÃಯ ಏಕತಾ ದಿವಸ’ ವನ್ನಾಗಿ ಆಚರಿಸಲಾಗುತ್ತದೆ ಎಂದರು.
ಸಾರ್ವಜನಿಕರು ಆನ್ ಲೈನ್ ವಂಚನೆಗಳಿಗೆ ಹೆಚ್ಚಾಗಿ ಬಲಿಯಾಗುತ್ತಿದ್ದು, ಯಾರಾದರೂ ಅಪರಿಚಿತ ವ್ಯಕ್ತಿಗಳು ಕರೆ ಮಾಡಿ ವೈಯಕ್ತಿಕ ಮಾಹಿತಿ ಕೇಳಿದರೆ ಉತ್ತರಿಸಬಾರದು. ಯುವ ಸಮುದಾಯ ಮಾದಕ ವಸ್ತುಗಳಿಂದ ದೂರವಿರಬೇಕು ಎಂದು ಕಿವಿಮಾತು ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ಮಾತನಾಡಿ, ಪ್ರಸ್ತುತದಲ್ಲಿ ಯುವ ಸಮುದಾಯ ಆನ್‌ಲೈನ್ ಗೇಮ್, ಆನ್ ಲೈನ್ ವಂಚನೆಗಳಿAದ ದೂರವಿರಬೇಕು. ಮೊಬೈಲ್ ನಲ್ಲಿ ಬರುವ ಯಾವುದೇ ರೀತಿಯ ಗೊತ್ತಿರದ ಫೈಲ್‌ಗಳ ಮೇಲೆ ಕ್ಲಿಕ್ ಮಾಡಬಾರದು. ಇದರಿಂದ ಸೈಬರ್ ವಂಚನೆಗೆ ಒಳಗಾಗುವ ಸಾಧ್ಯತೆ ಹೆಚ್ಚು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಾದಕ ವಸ್ತುಗಳಿಂದ ದೂರ ಉಳಿಯುತ್ತೇನೆ, ಸಂಚಾರಿ ನಿಯಮಗಳನ್ನು ಪಾಲಿಸುತ್ತೇನೆ, ಸಾರ್ವಜನಿಕ ಆಸ್ತಿ-ಪಾಸ್ತಿಗಳನ್ನು ರಕ್ಷಿಸುತ್ತೇನೆ ಹಾಗೂ ವಿವಿಧ ಪಾಲನೆಗಳನ್ನೊಳಗೊಂಡ ಪ್ರತಿಜ್ಞಾ ವಿಧಿ ಕೈಗೊಳ್ಳಲಾಯಿತು ಮತ್ತು ಸಹಿ ಸಂಗ್ರಹ ಅಭಿಯಾನ ಮೂಲಕ ಗಣ್ಯರು ಸಹಿ ಹಾಕಿದರು.
ಮ್ಯಾರಥಾನ್ ಓಟವು ನಗರದ ಡಿಎಆರ್ ಪೊಲೀಸ್ ಕವಾಯತು ಮೈದಾನದಿಂದ ಆರಂಭಗೊAಡು ಇಂದಿರಾ ವೃತ್ತ- ನೂತನ ಜಿಲ್ಲಾಡಳಿತ ಭವನ- ಎಂ.ಜಿ ರಸ್ತೆ- ಅನಂತಪುರ ಬೈಪಾಸ್ ಕ್ರಾಸ್ ನಿಂದ ಮರಳಿ ಎಂ.ಜಿ ವೃತ್ತ- ಇಂದಿರಾ ವೃತ್ತ- ಎಸ್. ಎನ್.ಪೇಟೆ ಕ್ರಾಸ್(ಕೂಲ್ ಕಾರ್ನರ್)- ಡಿಎಆರ್ ಪೊಲೀಸ್ ಕವಾಯತು ಮೈದಾನಕ್ಕೆ ತಲುಪಿ ಮುಕ್ತಾಯಗೊಂಡಿತು.
ಮ್ಯಾರಥಾನ್ ಓಟದಲ್ಲಿ ಭಾಗವಹಿಸಿ ವಿಜೇತರಾದ ಸ್ಪರ್ಧಾಳುಗಳಿಗೆ ಪ್ರಶಸ್ತಿ ಮತ್ತು ನಗದು ಬಹುಮಾನ ನೀಡಿ ಗೌರವಿಸಲಾಯಿತು.
*ವಿಜೇತರು:*
*ಪುರುಷ ವಿಭಾಗ:*
ಪ್ರಥಮ ಬಹುಮಾನ(10 ಸಾವಿರ ನಗದು): ಪುರುಷೋತ್ತಮ ಬಳ್ಳಾರಿ.
ದ್ವಿತೀಯ ಬಹುಮಾನ(5 ಸಾವಿರ ನಗದು): ಶಿವಾನಂದ ಬೆಳಗಾವಿ.
ತೃತೀಯ ಬಹುಮಾನ(3 ಸಾವಿರ ನಗದು): ಸುನೀಲ್ ಬೆಳಗಾವಿ.
*ಮಹಿಳಾ ವಿಭಾಗ:*
ಪ್ರಥಮ ಬಹುಮಾನ(10 ಸಾವಿರ ನಗದು): ಶಾಹೀನ್ ಎಸ್.ಡಿ ಹುಬ್ಬಳ್ಳಿ.
ದ್ವಿತೀಯ ಬಹುಮಾನ(5 ಸಾವಿರ ನಗದು): ಯು.ಶಿರೀಷ ಬಳ್ಳಾರಿ.
ತೃತೀಯ ಬಹುಮಾನ(3 ಸಾವಿರ ನಗದು): ವಿಜಯಲಕ್ಷಿö್ಮ ಧಾರವಾಡ.
ಈ ಸಂದರ್ಭದಲ್ಲಿ ಬಳ್ಳಾರಿ ವಲಯ ಉಪಅರಣ್ಯ ಸಂರಕ್ಷಣಾಧಿಕಾ ಬಸವರಾಜ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಎಸ್.ನವೀನ್ ಕುಮಾರ್, ಡಿಎಸ್‌ಪಿ ಗಳಾದ ನಂದಾರೆಡ್ಡಿ, ಪ್ರಸಾದ್ ಗೋಖಲೆ, ಮಾಲತೇಷ ಕೋನಬೇವು, ತಿಪ್ಪೇಸ್ವಾಮಿ, ಸಂತೋಷ್ ಚವ್ಹಾಣ್, ಸಿಪಿಐ ಗಳಾದ ಅಯ್ಯನಗೌಡ ಪಾಟೀಲ್, ಮಹಾಂತೇಶ್, ರವಿಚಂದ್ರ, ಹನುಮಂತಪ್ಪ, ಚಂದನಗೋಪಾಲ್, ಜಿಲ್ಲಾ ಗೃಹರಕ್ಷಕ ದಳದ ಕಮಾಂಡೆAಟ್ ಶೇಖಸಾಬ್ ಸೇರಿದಂತೆ ಪೊಲೀಸ್ ಅಧಿಕಾರಿಗಳು, ನಿವೃತ್ತ ಯೋಧರು, ಐಎಂಎ ಸದಸ್ಯರು, ಬಳ್ಳಾರಿ ರನ್ನರ್ಸ್ ಅಸೋಷಿಯೇಷನ್ ಹಾಗೂ ರಾಜ್ಯದ ವಿವಿಧೆಡೆಯಿಂದ 1500 ಪುರುಷ, ಮಹಿಳೆಯರು ಭಾಗವಹಿಸಿದ್ದರು.
---------------
ಬಳ್ಳಾರಿ: ಲಿಂಗತ್ವ ಅಲ್ಪಸಂಖ್ಯಾತರ ಮೂಲಹಂತದ ಸಮೀಕ್ಷೆಯ ಅವಧಿ ವಿಸ್ತರಣೆ
ಬಳ್ಳಾರಿ,ಅ.31(ಕರ್ನಾಟಕ ವಾರ್ತೆ):
ಜಿಲ್ಲೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಮೂಲಹಂತದ ಸಮೀಕ್ಷೆಯು ಈಗಾಗಲೇ ಚಾಲ್ತಿಯಲ್ಲಿದ್ದು, ಸಮೀಕ್ಷಾ ಅವಧಿಯನ್ನು ನವೆಂಬರ್ 21 ರ ವರೆಗೆ ವಿಸ್ತರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಲಿಂಗತ್ವ ಅಲ್ಪ ಸಂಖ್ಯಾತರಿಗೆ ಪುನರ್ವಸತಿ ಕಲ್ಪಿಸುವ ಸಲುವಾಗಿ (ಸಾಮಾಜಿಕ ಆರ್ಥಿಕ ಮತ್ತು ಶೈಕ್ಷಣಿಕ) ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿ ಕುರಿತಂತೆ ನಿಖರ ಮಾಹಿತಿಯನ್ನು ಸಂಗ್ರಹಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದಿಂದ ಮೊದಲ ಬಾರಿಗೆ ರಾಜ್ಯಾದ್ಯಾಂತ ಲಿಂಗತ್ವ ಅಲ್ಪಸಂಖ್ಯಾತರ ಮೂಲಹಂತದ ಸಮೀಕ್ಷೆ ನಡೆಸಲಾಗುತ್ತಿದೆ.
ಅರ್ಹ ಲಿಂಗತ್ವ ಅಲ್ಪಸಂಖ್ಯಾತರ ಫಲಾನುಭವಿಗಳು ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ ನೀಡಿ ತಮ್ಮ ಹೆಸರು ಹಾಗೂ ವಿವರಗಳನ್ನು ನೋಂದಾಯಿಸಿಕೊಳ್ಳಬಹುದು.
ಸಮೀಕ್ಷೆ ಸಹಾಯಕ್ಕಾಗಿ ಸಹಾಯವಾಣಿ ಸಂಖ್ಯೆ 18005992025 ಗೆ ಕರೆ ಮಾಡಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------------
ನ.06 ರಂದು ಜಿಲ್ಲಾ ಮೇಲ್ವಿಚಾರಣಾ ಸಮಿತಿ ಸಭೆ
ಬಳ್ಳಾರಿ,ಅ.31(ಕರ್ನಾಟಕ ವಾರ್ತೆ):
ಕರ್ನಾಟಕ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆ (ಯೋಜನೆ ರೂಪಿಸುವುದು, ಆರ್ಥಿಕ ಸಂಪನ್ಮೂಲಗಳ ಹಂಚಿಕೆ ಮತ್ತು ಬಳಕೆ) ಅಧಿನಿಯಮ-2013ರ ಸೆಕ್ಷನ್-11ರ ಪ್ರಕಾರ ಜಿಲ್ಲಾ ಮೇಲ್ವಿಚಾರಣಾ ಸಮಿತಿ ರಚಿಸಿದ್ದು, ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರ ಅಧ್ಯಕ್ಷತೆಯಲ್ಲಿ ನ.06 ರಂದು ಮಧ್ಯಾಹ್ನ 03 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಎಸ್.ಸಿ.ಎಸ್.ಪಿ./ಟಿ.ಎಸ್.ಪಿ ಜಿಲ್ಲಾ ಮೇಲ್ವಿಚಾರಣಾ ಸಮಿತಿಯ ಸಭೆ ಏರ್ಪಡಿಸಲಾಗಿದೆ.
ಸಂಬAಧಿಸಿದ ಇಲಾಖಾ ಅಧಿಕಾರಿಗಳು ಅಗತ್ಯ ಮಾಹಿತಿಗಳೊಂದಿಗೆ ಸಭೆಗೆ ಹಾಜರಾಗಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚಿದಾನಂದಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------------
ಸಿರುಗುಪ್ಪ: ಬೀಜದ ಕಿಟ್ ಪಡೆಯಲು ಅರ್ಜಿ ಆಹ್ವಾನ
ಬಳ್ಳಾರಿ,ಅ.31(ಕರ್ನಾಟಕ ವಾರ್ತೆ):
ಸಿರುಗುಪ್ಪ ತೋಟಗಾರಿಕೆ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಕೆ.ಕೆ.ಆರ್.ಡಿ.ಬಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದವರಿಗೆ ತರಕಾರಿ ಬೀಜದ ಕಿಟ್ ವಿತರಣೆ ಮಾಡಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿಯ ಭೌತಿಕ 200 ಫಲಾನುಭವಿಗಳಿಗೆ ಆರ್ಥಿಕ ರೂ.10 ಲಕ್ಷ ಮತ್ತು ಪರಿಶಿಷ್ಟ ಪಂಗಡದ ಭೌತಿಕ 800 ಫಲಾನುಭವಿಗಳಿಗೆ ಆರ್ಥಿಕ ರೂ.40 ಲಕ್ಷ ಇದೆ.
ಆಸಕ್ತ ರೈತರು ಪ್ರಸಕ್ತ ಸಾಲಿನ ಪಹಣಿ, ಬ್ಯಾಂಕ್ ಖಾತೆಯ ಪುಸ್ತಕ, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್ಗಳೊಂದಿಗೆ ನವೆಂಬರ್ 15 ರೊಳಗಾಗಿ ಆಯಾ ಹೋಬಳಿಯ ಅಧಿಕಾರಿಗಳಿಗೆ ಅಥವಾ ಸಿರುಗುಪ್ಪ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ ಸಂಪರ್ಕಿಸಬಹುದು ಎಂದು ಸಿರುಗುಪ್ಪ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಮಹೇಶ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------------
ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50 ರಿಯಾಯಿತಿ
ಬಳ್ಳಾರಿ,ಅ.31(ಕರ್ನಾಟಕ ವಾರ್ತೆ):
ಕನ್ನಡ ರಾಜ್ಯೋತ್ಸವದ ಅಂಗವಾಗಿ 2025ರ ನವೆಂಬರ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ.50 ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು. ಪುಸ್ತಕ ಪ್ರಿಯರು ಈ ಅವಕಾಶ ಸದುಪಯೋಗಪಡಿಸಿಕೊಳ್ಳಬೇಕು ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ.ಕಿರಣ್ ಸಿಂಗ್ ಅವರು ತಿಳಿಸಿದ್ದಾರೆ.
ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬAಧಿಸಿದAತೆ, ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಈವರೆಗೆ ಪ್ರಕಟಿಸುತ್ತಾ ಬಂದಿದೆ. ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಹತ್ತು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಇದುವರೆಗೆ ಸುಮಾರು 700ಕ್ಕೂ ಹೆಚ್ಚಿನ ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ. ಅತ್ಯಂತ ಮೌಲಿಕವಾದ, ಪ್ರಾಜ್ಞರಿಂದ ರಚಿತವಾದ ಈ ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲುಪಿಸಬೇಕೆಂಬ ಉದ್ದೇಶ ಕನ್ನಡ ಪುಸ್ತಕ ಪ್ರಾಧಿಕಾರ ಹೊಂದಿದೆ.
ಕನ್ನಡ ಪುಸ್ತಕ ಪ್ರಾಧಿಕಾರದ ಆನ್ ಲೈನ್ https://kpp.karnataka.gov.in (ಆನ್‌ಲೈನ್ ಪುಸ್ತಕ ಖರೀದಿಗೆ ವಿಭಾಗ ಇಲ್ಲಿ ವೀಕ್ಷಿಸಿ) ನಲ್ಲಿ ಕೂಡ ಈ ಶೇ.50 ರಿಯಾಯಿತಿ ಲಭ್ಯವಿದೆ.
ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ (ದೂ.080-22107705) ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------------
ಸಾರಿಗೆ ಇಲಾಖೆ: ವಿವಿಧ ಸೇವೆ ಆನ್‌ಲೈನ್‌ನಲ್ಲಿ ಲಭ್ಯ
ಬಳ್ಳಾರಿ,ಅ.31(ಕರ್ನಾಟಕ ವಾರ್ತೆ):
ಸಾರಿಗೆ ಇಲಾಖೆಯ ವಿವಿಧ ಸೇವೆಗಳು ಆನ್‌ಲೈನ್ ಗೆ ಒಳಪಡಿಸಿರುವುದರಿಂದ ಬಳ್ಳಾರಿ ಪ್ರಾದೇಶಿಕ ಸಾರಿಗೆ ಕಚೇರಿ ವ್ಯಾಪ್ತಿಯ ವಾಹನಗಳ ನೋಂದಣಿ, ವರ್ಗಾವಣೆ, ಲೈಸೆನ್ಸ್ ಮತ್ತು ಇತರೆ ಸೇವೆಗಳಿಗಾಗಿ ಎಂ-ಪರಿವಾಹನ್ ನಲ್ಲಿನ ವಾಹನ್-4, ಸಾರಥಿ-4 ತಂತ್ರಾAಶದ ಮೂಲಕ ಪಡೆಯಬಹುದಾಗಿದೆ.
ಆನ್ ಲೈನ್ ನಲ್ಲಿ ವಿವಿಧ ಸೇವೆಗಳಿಗಾಗಿ ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳ ಅಪ್ ಲೋಡ್, ನಿಗದಿತ ಶುಲ್ಕ, ತೆರಿಗೆಗಳನ್ನು ಪಾವತಿಸಿ ಮತ್ತು ಮೂಲ ದಾಖಲೆಗಳ ಸಹಿತ ಅಪ್ ಲೋಡ್ ಮಾಡಿ ಮೂಲ ಪ್ರತಿಗಳನ್ನು ಕಚೇರಿಗೆ ಸಲ್ಲಿಸಬೇಕು. ಸಾರ್ವಜನಿಕರು ಯಾವುದೇ ಮಧ್ಯವರ್ತಿಗಳನ್ನಾಗಲಿ ಅಥವಾ ಅನ್ಯ ವ್ಯಕ್ತಿಗಳನ್ನಾಗಲೀ ಸಂಪರ್ಕಿಸಬಾರದು.
ಹೆಚ್ಚಿನ ಮಾಹಿತಿಗಾಗಿ ಪ್ರಾದೇಶಿಕ ಸಾರಿಗೆ ಕಚೇರಿಯ ಮುಖ್ಯಸ್ಥರು, ಅಧೀಕ್ಷಕರು ಹಾಗೂ ಇಲಾಖೆಉ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಬಳ್ಳಾರಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಬಿ.ಎಸ್.ಶ್ರೀನಿವಾಸಗಿರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------------
ನ.02 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ,ಅ.31(ಕರ್ನಾಟಕ ವಾರ್ತೆ):
ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ವ್ಯಾಪ್ತಿಗೆ ಬರುವ 11ಕೆವಿ ಫೀಡರ್‌ನಿಂದ ವಿದ್ಯುತ್ ಸರಬರಾಜಾಗುವ ಎಫ್-09 ಫೀಡರ್‌ನÀ ರಸ್ತೆ ಅಗಲೀಕರಣ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ನ.02 ರಂದು ಬೆಳಿಗ್ಗೆ 10 ಗಂಟೆಯಿAದ ಸಂಜೆ 05 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.
*ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:*
ನೆಹರು ಕಾಲೋನಿ, ಎಸ್.ಎನ್. ಪೇಟೆ 1ನೇ, 2ನೇ, 4ನೇ, 5ನೇ, 6ನೇ ಅಡ್ಡರಸ್ತೆ, ಶಂಕರ್ ಕಾಲೋನಿ, ಡಿಎಅರ್ ಗ್ರೌಂಡ್, ಕೂಲ್ ಕಾರ್ನರ್, ಡಬಲ್ ರಸ್ತೆ, ಕೋಲಾಚಲಂ ಕಾಂಪೌAಡ್, ರಾಯಲ್ ಸರ್ಕಲ್, ಗಾಂಧಿ ಭವನ, ಸಿಎಂಸಿ, ಅಂಬಲಿ ಬಾಗ್, ಹಳೇ ತಾಲ್ಲೂಕು ಕಚೇರಿ, ಡಿಸಿ ಕಚೇರಿ, ರೈಲ್ವೇ ಸ್ಟೇಷನ್ ರೋಡ್ ಸೇರಿದಂತೆ ಇನ್ನೂ ಮುಂತಾದ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಕಾರ್ಯನಿರ್ವಾಹಕ ಅಭಿಯಂತರರು ಸಹಕರಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------------
ವ್ಯಕ್ತಿ ಕಾಣೆ: ಪತ್ತೆಗೆ ಮನವಿ
ಬಳ್ಳಾರಿ,ಅ.31(ಕರ್ನಾಟಕ ವಾರ್ತೆ):
ನಗರದ ದ್ವಾರಕ ಲಾಡ್ಜ್ನಲ್ಲಿ ಸಪ್ಲೆಯರ್ ಆಗಿ ಕೆಲಸ ಮಾಡುತ್ತಿದ್ದ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ರಾಯದುರ್ಗ ತಾಲ್ಲೂಕಿನ ಗುಮ್ಮಗಟ್ಟ ಮಂಡಲದ ಗಲಗಲ ಗ್ರಾಮದ ನಿವಾಸಿ ರಾಮಾಂಜಿನೇಯಲು ಎನ್ನುವ 50 ವರ್ಷದ ವ್ಯಕ್ತಿಯು ಅ.29 ರಂದು ಕಾಣೆಯಾರುವ ಕುರಿತು ಎಪಿಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾಣೆಯಾದ ವ್ಯಕ್ತಿಯ ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಠಾಣಾಧಿಕಾರಿ ಮನವಿ ಮಾಡಿದ್ದಾರೆ.
ಚಹರೆ: ಅಂದಾಜು 5 ಅಡಿ ಎತ್ತರ, ದುಂಡುಮುಖ, ಗೋದಿ ಮೈಬಣ್ಣ, ದೃಢ ಮೈಕಟ್ಟು ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ಅರಿಶಿಣ ಬಣ್ಣ ಆಫ್ ತೋಳಿನ ಅಂಗಿ ಮತ್ತು ಬಾದಾಮಿ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ, ತೆಲುಗು, ಭಾಷೆ ಮಾತನಾಡುತ್ತಾನೆ.
ಮೇಲ್ಕಂಡ ಚಹರೆ ಗುರುತುಗಳುಳ್ಳ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಎಪಿಎಂಸಿ ಯಾರ್ಡ್ ಪೊಲೀಸ್ ಠಾಣೆಯ ದೂ.08392-250033, 9480803096 ಮತ್ತು ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ.08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------------
ಗುರುವಾರ, ಅಕ್ಟೋಬರ್ 30, 2025
ಜಿಲ್ಲಾಡಳಿತದಿಂದ ಒನಕೆ ಓಬವ್ವ ಜಯಂತಿ ಅರ್ಥಪೂರ್ಣ ಆಚರಣೆ: ಎಡಿಸಿ ಮಹಮ್ಮದ್ ಝುಬೇರ್
ಬಳ್ಳಾರಿ,ಅ.30(ಕರ್ನಾಟಕ ವಾರ್ತೆ):
ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತದಿಂದ ವೀರವನಿತೆ ಒನಕೆ ಓಬವ್ವ ಜಯಂತಿ ಕಾರ್ಯಕ್ರಮವನ್ನು ನ.11 ರಂದು ಜಿಲ್ಲಾ ಕೇಂದ್ರದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್.ಎನ್ ಝುಬೇರ್ ಅವರು ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ವಿಡೀಯೋ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಒನಕೆ ಓಬವ್ವ ಜಯಂತಿ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನ.11 ರಂದು ಬೆಳಿಗ್ಗೆ 11 ಗಂಟೆಗೆ ಸಾಂಸ್ಕೃತಿಕ ಸಮುಚ್ಚಯದ ಹೊಂಗಿರಣ ಸಭಾಂಗಣದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಎಲ್ಲಾ ಅಗತ್ಯ ಸಿದ್ದತೆ ಮಾಡಿಕೊಳ್ಳಬೇಕು ಎಂದು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ವೀರವನಿತೆ ಒನಕೆ ಒಬವ್ವ ಜಯಂತಿ ಕಾರ್ಯಕ್ರಮವನ್ನು ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಜಯಂತಿ ಆಚರಿಸಬೇಕು ಎಂದು ನಿರ್ದೇಶನ ನೀಡಿದ ಅವರು, ಜಯಂತಿ ಕಾರ್ಯಕ್ರಮಕ್ಕೆ ಎಲ್ಲರೂ ತಪ್ಪದೇ ಸ್ವ-ಇಚ್ಛೆಯಿಂದ ಪಾಲ್ಗೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ವೀರವನಿತೆ ಒನಕೆ ಒಬವ್ವ ಅವರ ಜೀವನ ಯಶೋಗಾಥೆ ತಿಳಿಸಲು ವಿಶೇಷ ಉಪನ್ಯಾಸಕರಾಗಿ ಸಾಹಿತಿ ಡಿ.ವೆಂಕಮ್ಮ ಅವರನ್ನು ಸಭೆಯಲ್ಲಿ ಆಯ್ಕೆ ಮಾಡಲಾಯಿತು.
ಕಾರ್ಯಕ್ರಮಲ್ಲಿ ವಚನಸಂಗೀತ, ಲಘು ಉಪಹಾರ, ಕುಡಿಯುವ ನೀರಿನ ವ್ಯವಸ್ಥೆ ಕೈಗೊಳ್ಳುವಂತೆ ಸೂಚಿಸಿದರು. ಕಾಲೇಜು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಭಾಗವಹಿಸುವಂತೆ ಡಿಡಿಪಿಐ, ಡಿಡಿಪಿಯು ಅಧಿಕಾರಿಗಳು ಕ್ರಮವಹಿಸಬೇಕು ಎಂದು ತಿಳಿಸಿದರು.
ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ವ್ಯಕ್ತಿಗಳು ಹಾಗೂ ವಿದ್ಯಾರ್ಥಿಗಳನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲು ಅರ್ಹರನ್ನು ಆಯ್ಕೆ ಮಾಡಿ ಪಟ್ಟಿ ನೀಡಬೇಕು. ಶಿಷ್ಠಾಚಾರದನ್ವಯ ಆಹ್ವಾನ ಪತ್ರಿಕೆ ಮುದ್ರಿಸಿ, ಗಣ್ಯರನ್ನು ಆಹ್ವಾನಿಸಬೇಕು ಎಂದರು.
ಈ ವೇಳೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಇತರರು ಉಪಸ್ಥಿತರಿದ್ದರು.
------------
ಜಾಗೃತಿ ಸಪ್ತಾಹ ಕಾರ್ಯಕ್ರಮದಲ್ಲಿ ನ್ಯಾಯಾಧೀಶೆ ಕೆ.ಜಿ.ಶಾಂತಿ ಕರೆ | ಭ್ರಷ್ಟಾಚಾರ ನಿರ್ಮೂಲನೆಗೆ ಕೈಜೋಡಿಸಿ
ಬಳ್ಳಾರಿ,ಅ.30(ಕರ್ನಾಟಕ ವಾರ್ತೆ):
ಅಧಿಕಾರಿಗಳು ಮತ್ತು ಸಾರ್ವಜನಿಕರು ಭ್ರಷ್ಟಾಚಾರ ನಿರ್ಮೂಲನೆಗೆ ಕೈಜೋಡಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಕೆ.ಜಿ.ಶಾಂತಿ ಅವರು ಹೇಳಿದರು.
ಜಿಲ್ಲಾ ನ್ಯಾಯಾಂಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ನ್ಯಾಯಾಂಗ ನೌಕರರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ‘ಜಾಗೃತಿ ನಮ್ಮೆಲ್ಲರ ಸಾಮಾಜಿಕ ಜವಾಬ್ದಾರಿ’ ಎಂಬ ಘೋಷವಾಕ್ಯದೊಂದಿಗೆ ನಗರದ ಜಿಲ್ಲಾ ನ್ಯಾಯಾಲಯ ಸಂಕೀರ್ಣ ಆವರಣದಲ್ಲಿ ಗುರುವಾರ ಏರ್ಪಡಿಸಿದ್ದ ಜಾಗೃತಿ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ದೇಶದಲ್ಲಿ ಭ್ರಷ್ಟಾಚಾರವನ್ನು ಹೋಗಲಾಡಿಸಿ, ಅದನ್ನು ಬೇರು ಸಮೇತ ಕಿತ್ತು ಹಾಕಿ ನಿರ್ಮೂಲನೆ ಮಾಡುವಲ್ಲಿ ಪ್ರತಿಯೊಬ್ಬರ ಜವಾಬ್ದಾರಿ ಆಗಿದೆ. ಹಾಗಾಗಿ ಅ.27 ರಿಂದ ನ.02 ರ ವರೆಗೆ ಜಾಗೃತಿ ಸಪ್ತಾಹ ಕಾರ್ಯಕ್ರಮ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.
ಕೇಂದ್ರ ಜಾಗೃತ ಆಯೋಗ (ಸಿವಿಸಿ) ಭಾರತ ಸರ್ಕಾರದ ಒಂದು ಉನ್ನತ ಸಂಸ್ಥೆಯಾಗಿದ್ದು, ಇದು 1964ರಲ್ಲಿ ಸ್ಥಾಪಿತವಾದ ಸಂಸ್ಥೆಗೆ ಕರ್ನಾಟಕದ ನಿಟ್ಟೂರು ಶ್ರೀನಿವಾಸ ರಾವ್ ಅವರು ಮೊದಲ ಕಮೀಷನರ್ ಆಗಿ ಸೇವೆ ಸಲ್ಲಿಸಿದ್ದರು ಎಂದು ತಿಳಿಸಿದರು.
ಸಾರ್ವಜನಿಕ ಕ್ಷೇತ್ರದಲ್ಲಿ ಪ್ರಾಮಾಣಿಕತೆಗೆ ಉತ್ತೇಜನ ನೀಡುವುದು, ಭ್ರಷ್ಟಾಚಾರ ತಡೆಗಟ್ಟುವುದು, ಸರ್ಕಾರಿ ಕ್ಷೇತ್ರಗಳ ವ್ಯವಸ್ಥೆ ಸುಧಾರಣೆ, ಕೆಲಸದಲ್ಲಿ ಪಾರದರ್ಶಕತೆ, ಸರ್ಕಾರಿ ಅಧಿಕಾರಿಗಳ ಜವಾಬ್ದಾರಿತನ ಕ್ರಮ ಹೆಚ್ಚಿಸುವುದು ಇದರ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು.
ಸರ್ಕಾರಿ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುವ ಅಧಿಕಾರಿಗಳು ಸಾರ್ವಜನಿಕರಿಂದ ಯಾವುದೇ ಲಂಚ ಪಡೆಯದೇ ಕಾರ್ಯನಿರ್ವಹಿಸಬೇಕು. ಪ್ರತಿಯೊಬ್ಬರೂ ತಮ್ಮ ಕೆಲಸವನ್ನು ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಬೇಕು. ಭ್ರಷ್ಟಾಚಾರ ಮುಕ್ತ ಮತ್ತು ನಶಾಮುಕ್ತ ಭಾರತವನ್ನಾಗಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಬಳಿಕ ನ್ಯಾಯಾಧೀಶರು ಜಾಗೃತಿ ಸಪ್ತಾಹ ಕಾರ್ಯಕ್ರಮ ಅಂಗವಾಗಿ ಪ್ರತಿಜ್ಞಾ ವಿಧಿ ಭೋದಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಮಾತನಾಡಿ, ಸಾಮಾನ್ಯ ಸಾರ್ವಜನಿಕರಿಗೆ ಕಾನೂನು-ನಿಯಮಗಳ ಕುರಿತು ಜಾಗೃತಿ ಮೂಡಿಸುವುದು. ಸರ್ಕಾರಿ ಸೌಲಭ್ಯ ಸೇವಾ ಕುರಿತು ಸಾಮಾನ್ಯ ಜನರಿಗೆ ಅರಿವು ಮೂಡಿಸುವುದು ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಭ್ರಷ್ಟಾಚಾರದ ವಿರುದ್ಧ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಅದೇರೀತಿಯಾಗಿ ಆರ್ಥಿಕವಾಗಿ ದುರ್ಬಲ ಇರುವವರಿಗೆ ಉಚಿತವಾಗಿ ವಕೀಲರನ್ನು ನೇಮಿಸುವ ಮೂಲಕ ಉಚಿತ ಕಾನೂನು ಸೇವೆ ಒದಗಿಸಲಾಗುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಒಂದನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಪ್ರಮೋದ.ಬಿ.ಜಿ., ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ರಾಘವೇಂದ್ರ ಗೌಡ.ಬಿ.ಜಿ., 4ನೇ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ವಾಸುದೇವ ರಾಧಕಾಂತ್ ಗುಡಿ, ಜಿಲ್ಲಾ ಕುಟುಂಬ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾದ ವೆಂಕಟೇಶ್ ಸೇರಿದಂತೆ ಜಿಲ್ಲಾ ನ್ಯಾಯಾಲಯದ ವಿವಿಧ ನ್ಯಾಯಾಧೀಶರು, ಜಿಲ್ಲಾ ನ್ಯಾಯಾಲಯದ ಅಧಿಕಾರಿಗಳು, ಸಿಬ್ಬಂದಿ ಮತ್ತು ವಕೀಲರು ಭಾಗವಹಿಸಿದ್ದರು.
--------------
ಕಾನಿಪ ಬಳ್ಳಾರಿ ಜಿಲ್ಲಾ ಘಟಕ ಚುನಾವಣೆ: ಅಂತಿಮ ಕಣದಲ್ಲಿ 37 ಅಭ್ಯರ್ಥಿಗಳು
ಬಳ್ಳಾರಿ,ಅ.30(ಕರ್ನಾಟಕ ವಾರ್ತೆ):
ಬಳ್ಳಾರಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ(2025-2028)ಗೆ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಗುರುವಾರ (30/10/2025) ದಂದು ಏಳು ನಾಮಪತ್ರ ವಾಪಸ್ಸು ಪಡೆಯಲಾಗಿದ್ದು, ಅಂತಿಮ ಕಣದಲ್ಲಿ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಸ್ಥಾನ ಸೇರಿ ಎಲ್ಲ 25 ಸ್ಥಾನಗಳಿಗೆ 37 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ನಾಗರಾಜ್.ಎಸ್ ತಿಳಿಸಿದ್ದಾರೆ.
ರಾಜ್ಯ ಕಾರ್ಯಕಾರಿ ಸಮಿತಿ ಸ್ಥಾನಗಳಿಗೆ ವೆಂಕೋಬಿ, ಬಸವರಾಜ್.ಹೆಚ್., ಎಂ.ಜAಭುನಾಥ.
ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಎನ್.ವೀರಭದ್ರ ಗೌಡ, ವಿ.ರವಿ.
ಜಿಲ್ಲಾ ಉಪಾಧ್ಯಕ್ಷ ಸ್ಥಾನಕ್ಕೆ ಎನ್.ಗುರುಶಾಂತ, ಎ.ವಾಗೀಶ್, ಕೆ.ಮಲ್ಲಿಕಾರ್ಜುನ, ಕೆ.ಮಲ್ಲಯ್ಯ, ಬಿ.ರಸೂಲ್.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ನರಸಿಂಹ ಮೂರ್ತಿ ಕುಲಕರ್ಣಿ, ವೆಂಕಟೇಶ ದೇಸಾಯಿ.
ಜಿಲ್ಲಾ ಕಾರ್ಯದರ್ಶಿ ಸ್ಥಾನಕ್ಕೆ ದ್ಯಾಮನಗೌಡ ಪಾಟೀಲ್, ಎಂ.ವಿ.ಜೋಷಿ, ಪಿ.ರಘುರಾಂ.
ಜಿಲ್ಲಾ ಖಜಾಂಚಿ ಸ್ಥಾನಕ್ಕೆ ಕೆ.ಅಶೋಕ್, ಬಿ.ಪಂಪನಗೌಡ.
ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸ್ಥಾನಗಳಿಗೆ ಎಸ್.ಕಿನ್ನೂರೇಶ್ವರ, ಕೆ.ವಿರೇಶ್, ಹುಲುಗಣ್ಣ.ಹೆಚ್., ಟಿ.ಈರೇಶ, ನಂದೀಶ್ ಕುಮಾರ್, ಬಿ.ರಮೇಶ್ ಉಪ್ಪಾರ, ಜಿ.ಚಂದ್ರಶೇಖರ ಗೌಡ, ಯು.ಗುರುನಾದಂ, ರ‍್ರಿಸ್ವಾಮಿ.ಬಿ., ಟಿ.ಎನ್.ಶ್ರೀನಿವಾಸ ಶೆಟ್ಟಿ, ರೇಣುಕಾರಾಧ್ಯ.ಕೆ.ಎಂ.ವಿ., ಹೊನ್ನೂರುಸ್ವಾಮಿ, ವಿ.ಹೆಚ್.ಶ್ರೀನಿವಾಸಲು, ಶಿವಾನಂದ ಕೆ.ಮದಿಹಳ್ಳಿ, ಕೆ.ಎಂ.ಮAಜುನಾಥ, ಪುರುಷೋತ್ತಮ ಹಂದ್ಯಾಳ್, ಶಿವಕುಮಾರ್.ಹೆಚ್., ಅಂಬರೀಶ್.ಎಲ್.ಕೆ., ಜಿ.ಪ್ರವೀಣ್ ರಾಜ್, ಸತೀಶ್.ವಿ ಅಂತಿಮ ಕಣದಲ್ಲಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------------
ಶೈಕ್ಷಣಿಕ ಸಂಶೋಧನೆಯಲ್ಲಿ ಭಾರತ ಅಗ್ರಮಾನ್ಯ: ಸುರೇಂದ್ರ ಕುಮಾರ್
ಬಳ್ಳಾರಿ,ಅ.30(ಕರ್ನಾಟಕ ವಾರ್ತೆ):
ಶೈಕ್ಷಣಿಕ ಸಂಶೋಧನೆಯಲ್ಲಿ ಭಾರತವು ವಿಶ್ವದ ಅಗ್ರಮಾನ್ಯ ರಾಷ್ಟçಗಳ ಪಟ್ಟಿಯಲ್ಲಿ ಗುರುತಿಸಿಕೊಂಡಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತç ಅಧ್ಯಯನ ವಿಭಾಗದ ಪ್ರೊ.ಎಸ್.ವೈ.ಸುರೇಂದ್ರ ಕುಮಾರ್ ಅವರು ಅಭಿಪ್ರಾಯಪಟ್ಟರು.
ಇಲ್ಲಿನ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ರಾಜ್ಯಶಾಸ್ತç ವಿಭಾಗ ಹಾಗೂ ಧಾರವಾಡದ ಬಹುಶಿಸ್ತೀಯ ಸಂಶೋಧನೆ ಮತ್ತು ಅಧ್ಯಯನ ಕೇಂದ್ರ (ಸಿಎಂಡಿಆರ್) ಸಹಯೋಗದಲ್ಲಿ ಆಯೋಜಿಸಿರುವ ಎರಡು ದಿನಗಳ ‘ಸಂಶೋಧನಾ ವಿಧಾನಗಳು’ ಕುರಿತಾದ ರಾಷ್ಟಿçÃಯ ಕಾರ್ಯಾಗಾರದ ದಿಕ್ಸೂಚಿ ಭಾಷಣಕಾರರಾಗಿ ಅವರು ಮಾತನಾಡಿದರು.
ದೇಶದಲ್ಲಿ ಪಿಹೆಚ್‌ಡಿ ಕೋರ್ಸ್ ಪ್ರವೇಶ ನೀಡಲು 1160 ವಿಶ್ವವಿದ್ಯಾಲಯಗಳಿವೆ. 2019ರಿಂದ ಇಲ್ಲಿಯವರೆಗೆ 10 ಪ್ರತಿಶತ ಒಟ್ಟಾರೆ ಸಂಶೋಧನಾ ಪ್ರಮಾಣ ಹೆಚ್ಚಳಗೊಂಡಿದೆ. ಅತಿಹೆಚ್ಚು ಪಿಹೆಚ್‌ಡಿ ಪದವಿ ಒದಗಿಸುವಲ್ಲಿ ಭಾರತವು ಜಗತ್ತಿನ 3ನೇ ಸ್ಥಾನ ಪಡೆದಿದೆ. ಈ ಮೊದಲು ಜಾಗತಿಕ ಸಂಶೋಧನಾ ಮೌಲ್ಯಾಂಕದಲ್ಲಿ 81ನೇ ಸ್ಥಾನದಲ್ಲಿದ್ದ ದೇಶವು ಇಂದು 31ನೇ ಸ್ಥಾನದಲ್ಲಿದೆ ಎಂದರು.
ಸAಶೋಧನಾ ಲೇಖನಗಳು, ಪ್ರಬಂಧಗಳು, ಪುಸ್ತಕಗಳನ್ನು ಹೊರತರುವಲ್ಲಿ ಭಾರತವು 4ನೇ ಅತಿದೊಡ್ಡ ದೇಶವಾಗಿದೆ. ಕಾಲಕಾಲಕ್ಕೆ ವಿಶ್ವವಿದ್ಯಾಲಯ ಧನಸಹಾಯ ಆಯೋಗ(ಯುಜಿಸಿ)ದಿಂದ ಮಾರ್ಪಾಟಾಗುವ ಕಾಯ್ದೆಗಳಿಂದ ಅಥವಾ ವಿಶ್ವವಿದ್ಯಾಲಯಗಳ ಆಡಳಿತ ಅಡೆ-ತಡೆಗಳಿಂದ ಉತ್ತಮ ಸಂಶೋಧನಾ ಪ್ರಾಜೆಕ್ಟ್ಗಳು ಹೊರಬರುವುದು ಕಡಿಮೆಯಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿವಿಯ ಕುಲಸಚಿವ ಸಿ.ನಾಗರಾಜು ಅವರು ಮಾತನಾಡಿ, ಸ್ವಾತಂತ್ರö್ಯಪೂರ್ವದಿAದ ಇಲ್ಲಿಯವರೆಗೆ ಬೆಳೆಯುತ್ತಿರುವ ದೇಶದ ಆರ್ಥಿಕತೆಗೆ ಸಂಶೋಧನೆಗಳೆ ಮುಖ್ಯ ಕಾರಣವಾಗಿವೆ. ದೇಶದಲ್ಲಿ ಉಂಟಾದ ಹಸಿರುಕ್ರಾಂತಿ, ಹಳದಿಕ್ರಾಂತಿ ಹಾಗೂ ಶ್ವೇತಕ್ರಾಂತಿಗಳು ಇದಕ್ಕೆ ಸ್ಪಷ್ಟ ನಿದರ್ಶನವಾಗಿವೆ. ನಿಜವಾದ ಸಂಶೋಧಕರು ಶಿಸ್ತು, ಶ್ರದ್ಧೆ, ಪ್ರಾಮಾಣಿಕತೆಯನ್ನು ಮೈಗೂಡಿಸಿಕೊಂಡರೆ ಮಾತ್ರ ಗುಣಮಟ್ಟ ಕಾಯ್ದುಕೊಳ್ಳಬಹುದು ಎಂದು ತಿಳಿಸಿದರು.
ಸಿಎಂಆರ್‌ಡಿ ಕೇಂದ್ರದ ಕೋರ್ಸ್ ನಿರ್ದೇಕರಾದ ಪ್ರೊ.ಟಿ.ಬ್ರಹ್ಮಾನಂದಮ್ ಕಾರ್ಯಕ್ರಮದ ರೂಪುರೇಷೆಗಳ ಕುರಿತು ವಿವರಿಸಿದರು.
ಸಿಎಂಆರ್‌ಡಿ ಕೇಂದ್ರದ ಸದಸ್ಯರಾದ ಡಾ.ಸಿದ್ದಲಿಂಗಯ್ಯ ಹಾಗೂ ವಿವಿಯ ರಾಜ್ಯಶಾಸ್ತç ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ವಿಜಯ ಕುಮಾರ್ ವೇದಿಕೆಯಲ್ಲಿದ್ದರು.
ಎರಡು ದಿನಗಳ ಕಾರ್ಯಾಗಾರದಲ್ಲಿ ವಿವಿಧ ರಾಜ್ಯಗಳಿಂದ ಆಗಮಿಸಿರುವ 80ಕ್ಕೂ ಹೆಚ್ಚು ಅಧ್ಯಾಪಕರುಗಳು, ಸಂಶೋಧನಾರ್ಥಿಗಳು ಹಾಜರಿದ್ದರು. ಅರ್ಥಶಾಸ್ತç ವಿಭಾಗದ ಡಾ.ಪಾಂಡುರAಗ ನಿರೂಪಿಸಿ, ವಂದಿಸಿದರು.
ವಿವಿಯ ಸಮಾಜ ವಿಜ್ಞಾನ ನಿಕಾಯದ ಡೀನರು, ಎಲ್ಲ ವಿಭಾಗಗಳ ಮುಖ್ಯಸ್ಥರು, ಸಿಬ್ಬಂದಿ ಹಾಜರಿದ್ದರು.
-------------
ನ.01 ರಂದು 70ನೇ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮ
ಬಳ್ಳಾರಿ,ಅ.30(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ ವತಿಯಿಂದ ನ.01 ರಂದು ಬೆಳಿಗ್ಗೆ 09 ಗಂಟೆಗೆ ನಗರದ ಸರ್ಕಾರಿ (ಮಾಜಿ ಪುರಸಭೆ) ಪದವಿ ಪೂರ್ವ ಕಾಲೇಜು ಮೈದಾನದಲ್ಲಿ 70 ನೇ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್ ಅವರು ಬೆಳಿಗ್ಗೆ 09 ಗಂಟೆಗೆ ಧ್ವಜಾರೋಹಣ ನೆರವೇರಿಸುವರು. ಬಳಿಕ ಬೆಳಿಗ್ಗೆ 09.15 ಕ್ಕೆ ಶ್ರೀ ಭುವನೇಶ್ವರಿ ದೇವಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವರು. ಬಳಿಕ ಕರ್ನಾಟಕ ರಾಜ್ಯೋತ್ಸವ ದಿನಾಚರಣೆಯ ಸಂದೇಶ ನೀಡುವರು.
ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಘನ ಉಪಸ್ಥಿತರಿರುವರು.
ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಬಿ.ನಾಗೇಂದ್ರ, ಜೆ.ಎನ್.ಗಣೇಶ್, ಬಿ.ಎಂ.ನಾಗರಾಜ, ನಾರಾ ಭರತ್ ರೆಡ್ಡಿ, ಈ.ಅನ್ನಪೂರ್ಣ, ವಿಧಾನಪರಿಷತ್ ಶಾಸಕರಾದ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಶೀಲ್ ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತದ ಉಪಾಧ್ಯಕ್ಷ ಹೆಚ್.ಲಕ್ಷö್ಮಣ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಬಳ್ಳಾರಿ ವಲಯ ಪೊಲೀಸ್ ಮಹಾನಿರೀಕ್ಷಕರಾದ ವರ್ತಿಕಾ ಕಟಿಯಾರ್, ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ., ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರಿಸ್ ಸುಮೈರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
-------------
ಜೀವ ರಕ್ಷಣೆಗೆ ಪ್ರಥಮ ಚಿಕಿತ್ಸೆ ಅಗತ್ಯ: ಭಾಸ್ಕರ್ ರಾವ್
ಬಳ್ಳಾರಿ,ಅ.30(ಕರ್ನಾಟಕ ವಾರ್ತೆ):
ಜೀವ ರಕ್ಷಣೆಗೆ ಅಗತ್ಯವಾದ ಪ್ರಥಮ ಚಿಕಿತ್ಸಾ ಕೌಶಲ್ಯವನ್ನು ಯುವ ರೆಡ್ ಕ್ರಾಸ್‌ನ ಮೂಲಕ ಪ್ರತಿಯೊಬ್ಬರು ಪಡೆದುಕೊಂಡು ಅಮೂಲ್ಯವಾದ ಜೀವ ರಕ್ಷಣೆ ಮಾಡಬೇಕು ಎಂದು ಭಾರತೀಯ ಯುವ ರೆಡ್ ಕ್ರಾಸ್ ಸಂಸ್ಥೆಯ ರಾಜ್ಯ ಶಾಖೆ ಉಪಾಧ್ಯಕ್ಷ ಭಾಸ್ಕರ್ ರಾವ್ ಅವರು ಹೇಳಿದರು.
ಇಲ್ಲಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ಅಂಬೇಡ್ಕರ್ ಸಭಾಭವನದಲ್ಲಿ ಬುಧವಾರ ಆಯೋಜಿಸಿದ್ದ ವಿಶ್ವ ಪ್ರಥಮ ಚಿಕಿತ್ಸಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.
ಅಂತರಾಷ್ಟಿçÃಯ ರೆಡ್ ಕ್ರಾಸ್ ಸಂಸ್ಥೆಯ ಸೇವೆಗೆ 4 ಬಾರಿ ಪ್ರತಿಷ್ಠಿತ ನೊಬೆಲ್ ಶಾಂತಿ ಪುರಸ್ಕಾರ ಲಭಿಸಿದೆ. ವಿಶ್ವದ 190 ರಾಷ್ಟçಗಳಲ್ಲಿ ತನ್ನ ಶಾಖೆಗಳನ್ನು ಹೊಂದಿದೆ. ಮಾನವೀಯ ಮೌಲ್ಯಗಳನ್ನು ವಿಶ್ವಕ್ಕೆ ತಿಳಿಸುವುದು ರೆಡ್ ಕ್ರಾಸ್‌ನ ಮೂಲ ಉದ್ದೇಶವಾಗಿದೆ ಎಂದರು.
ವಿಷಮ ಪರಿಸ್ಥಿತಿಗಳಲ್ಲಿ ಧೈರ್ಯ ಮತ್ತು ಕ್ಷಿಪ್ರ ನಿರ್ಧಾರ ತೆಗೆದುಕೊಳ್ಳಲು ರೆಡ್‌ಕ್ರಾಸ್ ತರಬೇತಿ ಪಡೆಯುವುದರಿಂದ ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಸಮಾಜಮುಖಿ ಸೇವೆಗಳತ್ತ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ವಿವಿಯ ನಿರ್ವಹಣಾಶಾಸ್ತç ನಿಕಾಯದ ಡೀನರು ಹಾಗೂ ವಾಣಿಜ್ಯಶಾಸ್ತç ವಿಭಾಗದ ಮುಖ್ಯಸ್ಥ ಪ್ರೊ.ಸದ್ಯೋಜಾತಪ್ಪ.ಎಸ್ ಅವರು ಮಾತನಾಡಿ, ವಿದ್ಯಾರ್ಥಿಗಳು ತಮ್ಮಲ್ಲಿರುವ ಕೀಳರಿಮೆ ಬಿಟ್ಟು ದೃಢವಿಶ್ವಾಸದಿಂದ ಕಲಿಕೆ ಹಾಗೂ ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು. ಕ್ರಮಬದ್ಧ ಜೀವನಶೈಲಿ ತಮ್ಮದಾಗಿಸಿಕೊಂಡು ರೆಡ್‌ಕ್ರಾಸ್ ಮಾದರಿಯ ಮೌಲ್ಯಯುತವಾದ ಸೇವೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.
ರೆಡ್‌ಕ್ರಾಸ್ ಸಂಸ್ಥೆಯ ಬಳ್ಳಾರಿ ಶಾಖೆಯ ಕಾರ್ಯದರ್ಶಿ ಎಂ.ಎ.ಶಕೀಬ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ದೇಶದ ವಿವಿಧ ರಾಜ್ಯಗಳಿಂದ ಬಳ್ಳಾರಿಗೆ ಆಗಮಿಸಿ 11 ದಿನಗಳ ರೆಡ್‌ಕ್ರಾಸ್ ತರಬೇತಿ ಶಿಬಿರದಲ್ಲಿ ಭಾಗವಹಿಸಿದ್ದ ಶಿಬಿರಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ರಾಜ್ಯ ಕಾರ್ಯದರ್ಶಿ ಉಮಾಕಾಂತ್, ವಿವಿಯ ಯುವ ರೆಡ್‌ಕ್ರಾಸ್ ಸಮನ್ವಯಾಧಿಕಾರಿ ಡಾ.ರಾಜೇಂದ್ರ ಪ್ರಸಾದ್ ಎನ್.ಎಲ್ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಬಳಿಕ ವಿದ್ಯಾರ್ಥಿಗಳಿಗೆ ವಿವಿಧ ತುರ್ತು ಸಂದರ್ಭಗಳಲ್ಲಿ ನಿರ್ವಹಿಸಬೇಕಾದ ಪ್ರಥಮ ಚಿಕಿತ್ಸಾ ತಂತ್ರಗಳನ್ನು ತರಬೇತುದಾರರು ಪ್ರಾತ್ಯಕ್ಷಿಕವಾಗಿ ವಿವರಿಸಿದರು.
ಕಾರ್ಯಕ್ರಮವನ್ನು ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ.ಶಶಿಧರ್ ಕೆಲ್ಲೂರ್ ನಿರೂಪಿಸಿ ವಂದಿಸಿದರು.
-----------
ಕರ್ನಾಟಕ ಮೇದಾರ ಪರಿಶಿಷ್ಟ ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮ ಸಮಿತಿ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ
ಬಳ್ಳಾರಿ,ಅ.30(ಕರ್ನಾಟಕ ವಾರ್ತೆ):
ಕರ್ನಾಟಕ ಮೇದಾರ ಪರಿಶಿಷ್ಟ ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮದ ಯೋಜನೆ ಮತ್ತು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿಗೆ ಮೇದಾ, ಮೇದಾರಿ, ಗೌರಿಗ, ಬುರುಡ, ಮೇದಾರ ಬುಡಕಟ್ಟು ಸಮುದಾಯದ ಬಗ್ಗೆ ಮಾಹಿತಿ ಹೊಂದಿರುವ ಹಾಗೂ ಸೇವೆ ಮಾಡುವ ಮನೋಭಾವ ಹೊಂದಿರುವ 05 ನಾಮ ನಿರ್ದೇಶಿತ ಸದಸ್ಯತ್ವಕ್ಕೆ ಆಸಕ್ತ ಸಮುದಾಯದ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಸಮಿತಿಯು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚನೆ ಮಾಡಲಾಗುತ್ತದೆ. ಆಸಕ್ತರು ನಿಗದಿತ ನಮೂನೆಯ ಅರ್ಜಿ ಭರ್ತಿ ಮಾಡಿ ನವೆಂಬರ್ 04 ರೊಳಗೆ ನಗರದ ನಲ್ಲಚೆರವು ಪ್ರದೇಶದ ವಾಲ್ಮೀಕಿ ಭವನದ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂ.08392-242453 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶಾಷು ಮೋದಿನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------
ತೋಟಗಾರಿಕೆ ಇಲಾಖೆ: ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ
ಬಳ್ಳಾರಿ,ಅ.30(ಕರ್ನಾಟಕ ವಾರ್ತೆ):
ತೋಟಗಾರಿಕೆ ಇಲಾಖೆ ವತಿಯಿಂದ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ದಿ ಮಂಡಳಿಯಡಿ ಕಲ್ಯಾಣ ಕರ್ನಾಟಕ ಭಾಗದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಫಲಾನುಭವಿಗಳಿಗೆ 5000 ರೂ. ಮೌಲ್ಯದ ಹಾಗೂ ಸಮಗ್ರ ತೋಟಗಾರಿಕೆ ಅಭಿವೃದ್ದಿ ಯೋಜನೆಯಡಿ ಸಾಮಾನ್ಯ ವರ್ಗದ ಫಲಾನುಭವಿಗಳಿಗೆ 2000 ರೂ. ಮೌಲ್ಯದ ಉತ್ತಮ ಗುಣಮಟ್ಟದ ತರಕಾರಿ ಬೀಜಗಳನ್ನು ಉಚಿತವಾಗಿ ನೀಡಲು ಉದ್ದೇಶಿಸಲಾಗಿದ್ದು, ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ರೈತರು ಪ್ರಸಕ್ತ ಸಾಲಿನ ಪಹಣಿ, ಆಧಾರ ಕಾರ್ಡ್ ಜಿರಾಕ್ಸ್, ಜಾತಿ ಪ್ರಮಾಣ ಪತ್ರ ಗಳೊಂದಿಗೆ ಆಯಾ ತಾಲ್ಲೂಕಿನ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರ ಅಥವಾ ತಾಲ್ಲೂಕು ಮಟ್ಟದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಗಳಿಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ, ಸಂಡೂರು, ಸಿರುಗುಪ್ಪ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಗಳಿಗೆ ಭೇಟಿ ನೀಡಬಹುದು ಎಂದು ತೋಟಗಾರಿಕೆ ಜಂಟಿ ನಿರ್ದೇಶಕ ಶಶಿಕಾಂತ ಕೋಟಿಮನಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
ಇಪಿಎಫ್‌ಒ: ಡಿಜಿಟಲ್ ಲೈಫ್ ಸರ್ಟಿಫಿಕೇಟ್ ಅಭಿಯಾನ 4.0
ಬಳ್ಳಾರಿ,ಅ.30(ಕರ್ನಾಟಕ ವಾರ್ತೆ):
ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ(ಇಪಿಎಫ್‌ಒ) ಕಚೇರಿಯು ತನ್ನ ಎಲ್ಲಾ ಪ್ರಾದೇಶಿಕ ಕಚೇರಿ ಮತ್ತು ಪಿಂಚಣಿ ವಿತರಿಸುವ ಬ್ಯಾಂಕ್ ಗಳಲ್ಲಿ ಡಿಜಿಟಲ್ ಲೈಫ್ ಸರ್ಟಿಫಿಕೇಟ್ (ಡಿಎಲ್ಸಿ) ಅಭಿಯಾನ 4.0 ಆರಂಭಿಸಿದೆ ಎಂದು ಜಿಲ್ಲಾ ಪ್ರಾದೇಶಿಕ ಕಚೇರಿಯ ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತ ಕೆ.ವಿ.ಪ್ರವೀಣ್ ಅವರು ತಿಳಿಸಿದ್ದಾರೆ
ಈ ಅಭಿಯಾನವು ನವೆಂಬರ್ 1 ರಿಂದ 30 ರವರೆಗೆ ನಡೆಯಲಿದೆ. ಅಭಿಯಾನದಲ್ಲಿ ಪ್ರತಿಯೊಬ್ಬ ಪಿಂಚಣಿದಾರರು ತಮ್ಮ ಜೀವನ ಪ್ರಮಾಣ ಪತ್ರವನ್ನು ಅನುಕೂಲಕರವಾಗಿ, ಸುರಕ್ಷಿತವಾಗಿ ಮತ್ತು ಕಚೇರಿಗಳಿಗೆ ಭೌತಿಕ ಭೇಟಿಗಳ ಅಗತ್ಯವಿಲ್ಲದೇ ಸಲ್ಲಿಸಬಹುದಾಗಿದೆ.
ಮನೆ ಬಾಗಿಲಿಗೆ ಮತ್ತು ಸಮುದಾಯ ಆಧಾರಿತ ಡಿಜಿಟಲ್ ಸೌಲಭ್ಯಗಳನ್ನು ತರುವ ಮೂಲಕ ಹೆಚ್ಚಿನ ಸಂಖ್ಯೆಯ ಪಿಂಚಣಿದಾರರನ್ನು-ವಿಶೇಷವಾಗಿ ಹಿರಿಯ ನಾಗರಿಕರು, ವಿಕಲಚೇತನರು ಮತ್ತು ದೂರದ ಪ್ರದೇಶಗಳಲ್ಲಿ ವಾಸಿಸುವವರನ್ನು ತಲುಪಲು ಅಭಿಯಾನದ ಉದ್ದೇಶವಾಗಿದೆ.
ಈ ಅಭಿಯಾನದಡಿ ಇಪಿಎಫ್‌ಒ, ಪ್ರಾದೇಶಿಕ ಕಚೇರಿ, ಬಳ್ಳಾರಿ ಪಿಂಚಣಿ ವಿತರಣಾ ಬ್ಯಾಂಕುಗಳು, ಅಂಚೆ ಕಚೇರಿಗಳು, ಸಾಮಾನ್ಯ ಸೇವಾ ಕೇಂದ್ರಗಳು ಸೇರಿದಂತೆ ವಿವಿಧ ಸ್ಥಳಗಳಲ್ಲಿ ವಿಶೇಷ ‘ಡಿಜಿಟಲ್ ಪ್ರಮಾಣ ಪತ್ರ ಶಿಬಿರ’ ಗಳನ್ನು ಆಯೋಜಿಸುತ್ತಿದೆ.
ಆಧಾರ್ ಆಧಾರಿತ ಬಯೋಮೆಟ್ರಿಕ್ ದೃಢೀಕರಣವನ್ನು ಬಳಸಿಕೊಂಡು ನಿಗದಿತ ಸಮಯದೊಳಗೆ ತಮ್ಮ ಜೀವನ ಪ್ರಮಾಣ ಪತ್ರಗಳನ್ನು ಸಲ್ಲಿಸಲು ಶಿಬಿರಗಳಿಗೆ ಭೇಟಿ ನೀಡಬಹುದು. ಎಲ್ಲಾ ಪಿಂಚಣಿದಾರರು ಈ ಸೌಲಭ್ಯ ಲಾಭ ಪಡೆದುಕೊಳ್ಳಬೇಕು ಎಂದು ಇಪಿಎಫ್‌ಒ ಬಳ್ಳಾರಿ ಪ್ರಾದೇಶಿಕ ಕಚೇರಿಯ ಕ್ಷೇತ್ರೀಯ ಭವಿಷ್ಯ ನಿಧಿ ಆಯುಕ್ತ ಕೆ.ವಿ.ಪ್ರವೀಣ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------------
ವ್ಯಕ್ತಿ ಕಾಣೆ: ಪತ್ತೆಗೆ ಮನವಿ
ಬಳ್ಳಾರಿ,ಅ.30(ಕರ್ನಾಟಕ ವಾರ್ತೆ):
ನಗರದ ಕೌಲ್ ಬಜಾರ್‌ನ ವಾರ್ಡ್ ನಂ.20 ರ ಟೈಲರ್ ಬೀದಿ ನಿವಾಸಿಯಾದ ಟಿ.ಶೇಷಾದ್ರಿ ಎನ್ನುವ 43 ವರ್ಷದ ವ್ಯಕ್ತಿಯು ಅ.15 ರಂದು ಕಾಣೆಯಾಗಿದ್ದು, ಈ ಕುರಿತು ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಪೋಲಿಸ್ ಸಬ್ ಇನ್ಸ್ ಪೆಕ್ಟರ್ ಅವರು ತಿಳಿಸಿದ್ದಾರೆ.
ಚಹರೆ ಗುರುತು:
ಅಂದಾಜು 5.6 ಅಡಿ ಎತ್ತರ, ದುಂಡು ಮುಖ, ಎಣ್ಣೆಗೆಂಪು ಮೈಬಣ್ಣ, ದೃಢವಾದ ಮೈಕಟ್ಟು ಹೊಂದಿರುತ್ತಾನೆ. ಕಾಣೆಯಾದ ಸಂದರ್ಭದಲ್ಲಿ ಕಪ್ಪು ಬಣ್ಣದ ಟೀ ಶರ್ಟ್ ಮತ್ತು ಕಪ್ಪು ಬಣ್ಣದ ಬರ್ಮೊಡ ಧರಿಸಿರುತ್ತಾನೆ.
ವ್ಯಕ್ತಿಯ ಬಗ್ಗೆ ಸುಳಿವು ಸಿಕ್ಕಲ್ಲಿ ಕೌಲ್ ಬಜಾರ್ ಪೊಲೀಸ್ ಠಾಣೆಯ ದೂ.08392-240731,244145, ಪಿಐ ಮೊ.9480803047, ಪಿಎಸ್‌ಐ ಮೊ.94808203085, 9480803085 ಅಥವಾ ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------------
ಬುಧವಾರ, ಅಕ್ಟೋಬರ್ 29, 2025
ವಿಶ್ವ ಆರೈಕೆದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ನ್ಯಾ.ರಾಜೇಶ್ ಹೊಸಮನೆ ಹೇಳಿಕೆ | ವಿಶೇಷ ಚೇತನರ, ಹಿರಿಯರ ಆರೈಕೆ ಸೇವೆ ವಿಶೇಷ ಸೇವೆಯಾಗಿದೆ
ಬಳ್ಳಾರಿ,ಅ.29(ಕರ್ನಾಟಕ ವಾರ್ತೆ):
ಪ್ರತಿಯೊಬ್ಬರ ಜೀವನದಲ್ಲಿ ಆರೈಕೆದಾರರ ಪಾತ್ರ ಮಹತ್ವದಾಗಿದ್ದು, ವಿಶೇಷ ಚೇತನರ ಹಾಗೂ ಹಿರಿಯರನ್ನು ಆರೈಕೆ ಮಾಡುವುದು ವಿಶೇಷ ಸೇವೆಯಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರ ಹಾಗೂ ಅನುಗ್ರಹ ವಿಶೇಷ ಮಕ್ಕಳ ವಸತಿ ರಹಿತ ಶಾಲೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಅನುಗ್ರಹ ವಿಶೇಷ ಮಕ್ಕಳ ವಸತಿ ರಹಿತ ಶಾಲೆಯಲ್ಲಿ ಬುಧವಾರ ಆಯೋಜಿಸಿದ್ದ ವಿಶ್ವ ಆರೈಕೆದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ವಿಶೇಷ ಚೇತನರ ಸೇವೆ ಮಾಡುವ ಅವಕಾಶ ಎಲ್ಲರಿಗೂ ದೊರೆಯುವುದಿಲ್ಲ. ಅವರ ಸೇವೆ ಮಾಡುವಂತಹ ಪೋಷಕರು, ಶಿಕ್ಷಕರು, ಆಯಾಗಳು ದೇವರ ಸಮಾನ ಎಂದು ಆರೈಕೆದಾರರ ಸೇವೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಗೋವಿಂದಪ್ಪ ಹೆಚ್.ಎಂ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ಬಳ್ಳಾರಿ ಧರ್ಮ ಕ್ಷೇತ್ರದ ಕೋಶಾಧಿಕಾರಿಗಳಾದ ಫದಾರ್ ಐವನ್ ಫಿಂಟೂ, ಚೆಂಗಾರೆಡ್ಡಿ, ಬುದ್ದಿಮಾಂದ್ಯ ಮಕ್ಕಳ ವಸತಿಯುತ ಶಾಲೆಯ ಗುರುಮೂರ್ತಿ, ಅನುಗ್ರಹ ಬುದ್ದಿಮಾಂದ್ಯ ಮಕ್ಕಳ ವಸತಿ ರಹಿತ ಶಾಲೆಯ ಮುಖ್ಯ ಗುರುಗಳಾದ ಸಿಸ್ಟರ್ ಪ್ರಜ್ಞಾ, ಅನುಗ್ರಹ ಶಾಲೆಯ ಹಿರಿಯ ಶಿಕ್ಷಕಿ ಸಿಸ್ಟರ್ ಮರ್ಲಿನ್, ಶಿಕ್ಷಕರಾದ ವಸಂತ್ ಕುಮಾರ್, ಆರೈಕೆದಾರರ ಪರವಾಗಿ ಪೋಷಕರಾದ ಶಿವರಾಮ್ ಹಾಗೂ ಇತರರು ಉಪಸ್ಥಿತರಿದ್ದರು.
-------------
ತಂಬಾಕು ನಿಯಂತ್ರಣ ಕೋಶ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಕಟ್ಟುನಿಟ್ಟಿನ ಸೂಚನೆ | ಅನಧೀಕೃತ ತಂಬಾಕು ಉತ್ಪನ್ನ ಮಾರಾಟ ಮಾಡುವವರ ಮೇಲೆ ಕ್ರಮ ಜರುಗಿಸಿ
ಬಳ್ಳಾರಿ,ಅ.29(ಕರ್ನಾಟಕ ವಾರ್ತೆ):
ಜಿಲ್ಲೆಯಲ್ಲಿ ಪರವಾನಿಗೆ ಪಡೆಯದೇ ಅನಧಿಕೃತವಾಗಿ ತಂಬಾಕು ಉತ್ಪನ್ನ ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅವರು ಹೇಳಿದರು.
ಬುಧವಾರ, ನಗರದ ಜಿಲ್ಲಾಧಿಕಾರಿಗಳ ಹಳೆಯ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಜಿಲ್ಲಾ ನಗರಾಭಿವೃದ್ಧಿ ಕೋಶ ಅಧೀನದ ವ್ಯಾಪ್ತಿಯಲ್ಲಿ ಬರುವ ಅಂಗಡಿ, ಹೋಟೆಲ್, ವಾಣಿಜ್ಯ ಮಳಿಗೆಗಳಲ್ಲಿ ತಂಬಾಕು ಉತ್ಪನ್ನಗಳ ವ್ಯಾಪಾರಕ್ಕೆ ಸರ್ಕಾರದ ಮಾನದಂಡಗಳಡಿ ಪರವಾನಿಗೆ ನೀಡಬೇಕು ಎಂದು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಪ್ರಾಥಮಿಕ, ಪ್ರೌಢ ಶಿಕ್ಷಣ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಯಡಿ ಬರುವ ಎಲ್ಲಾ ಶಾಲಾ-ಕಾಲೇಜುಗಳನ್ನು ತಂಬಾಕು ಮುಕ್ತ ಶಿಕ್ಷಣ ಸಂಸ್ಥೆಗಳನ್ನಾಗಿ ಘೋಷಿಸಿ ತ್ವರಿತವಾಗಿ ಟಿಒಎಫ್‌ಇಐ ಆಪ್ ನಲ್ಲಿ ನಮೂದಿಸಬೇಕು. ಇಲ್ಲವಾದಲ್ಲಿ ಸಂಬAಧಿಸಿದ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.
ಶಾಲಾ-ಕಾಲೇಜು ಮಕ್ಕಳು ಒಂದು ಬಾರಿ ತಂಬಾಕು ಉತ್ಪನ್ನಗಳಿಗೆ ದಾಸರಾದರೆ, ಅದರಿಂದ ಹೊರಬರುವುದು ಕಷ್ಟಕರ. ಹಾಗಾಗಿ ಅಧಿಕಾರಿಗಳು ಹೆಚ್ಚಾಗಿ ಶಾಲಾ-ಕಾಲೇಜುಗಳಲ್ಲಿ, ಗ್ರಾಮೀಣ ಕ್ಷೇತ್ರಗಳಲ್ಲಿ ಮತ್ತು ಸಮುದಾಯಗಳಲ್ಲಿ ತಂಬಾಕು ಉತ್ಪನ್ನಗಳಿಂದಾಗುವ ದುಷ್ಪರಿಣಾಮ ಕುರಿತು ಹೆಚ್ಚು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿನ ಎಲ್ಲಾ ಬಾರ್ ಮತ್ತು ರೆಸ್ಟೋರೆಂಟ್ ಗಳಲ್ಲಿ ಕಡ್ಡಾಯವಾಗಿ ಧೂಮಪಾನ ವಲಯ ಸ್ಥಾಪಿಸಿ, ಅವುಗಳ ಉಪಯೋಗ, ಕ್ರಮಬದ್ಧತೆ ಕುರಿತು ಅಬಕಾರಿ ಅಧಿಕಾರಿಗಳು ನಿಯಮಿತವಾಗಿ ಪರಿಶೀಲನೆ ನಡೆಸುತ್ತಿರಬೇಕು ಎಂದು ತಿಳಿಸಿದರು.
ಜಿಲ್ಲೆಯ ಎಲ್ಲಾ ಬಸ್ ನಿಲ್ದಾಣಗಳಲ್ಲಿ ತಂಬಾಕು ಸೇವನೆ ಯ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಲು ಕ್ರಮವಹಿಸಬೇಕು. ನಿಲ್ದಾಣ ಅಂದಗೆಡಿಸುವ, ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನ ಸೇವಿಸಿ, ಎಲ್ಲೆಂದರಲ್ಲಿ ಉಗುಳುವವರ ಮೇಲೆ ದಂಡ ವಿಧಿಸಬೇಕು ಎಂದು ಕಕರಾರಸಾ ಸಂಸ್ಥೆಯ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ಮರಿಯಂಬಿ ವಿ.ಕೆ ಅವರು ಮಾತನಾಡಿ, ಜಿಲ್ಲೆಯಲ್ಲಿ 2025ರ ಜುಲೈ ನಿಂದ ಸೆಪ್ಟೆಂಬರ್ ವರೆಗಿನ ಒಟ್ಟು 617 ಕ್ಷಯರೋಗಿಗಳಲ್ಲಿ 86 ತಂಬಾಕು ವ್ಯಸನಿಗಳಾಗಿದ್ದು, ಎಲ್ಲರನ್ನು ತಂಬಾಕು ವ್ಯಸನಮುಕ್ತ ಕೇಂದ್ರದಲ್ಲಿ ದಾಖಲಿಸಲಾಗಿದೆ ಎಂದು ಸಭೆಗೆ ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್ ಅವರು ಮಾತನಾಡಿ, ತಂಬಾಕು ವ್ಯಸನದಿಂದ ಮುಕ್ತರಾಗಿ ಬರುವ ವ್ಯಕ್ತಿಗಳಿಂದ ಅದರಿಂದಾಗುವ ಪರಿಣಾಮ ಕುರಿತು ಸಾರ್ವಜನಿಕರಿಗೆ ತಿಳಿಯಪಡಿಸಲು ಮತ್ತು ಅದರ ಜೊತೆಗೆ ಅಧಿಕಾರಿಗಳ ನಿರ್ದೇಶನ ಒಳಗೊಂಡ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಿನ ಪ್ರಚಾರ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ತಂಬಾಕು ಉತ್ಪನ್ನಗಳಿಂದ ದೂರವಿರುತ್ತೇನೆ ಎಂಬ ಪ್ರತಿಜ್ಞಾ ವಿಧಿ ಸ್ವೀಕರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಇದರಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಸಹ ಭಾಗವಹಿಸುವಂತೆ ಕ್ರಮವಹಿಸಬೇಕು ಎಂದು ಹೇಳಿದರು.
ಅಧಿಕಾರಿಗಳು ಹೆಚ್ಚಾಗಿ ಕ್ಷೇತ್ರ ಮಟ್ಟದಲ್ಲಿ ಸಂಚರಿಸಿದಾಗ ಮಾತ್ರ ತಂಬಾಕು ಬಳಕೆ ಮೇಲೆ ಕಡಿವಾಣ ಹಾಕಲು ಸಾಧ್ಯವಾಗುತ್ತದೆ ಎಂದು ಅಧಿಕಾರಿಗಳಿಗೆ ಹೇಳಿದರು.
ಇದೇ ವೇಳೆ ಜಿಲ್ಲೆಯಲ್ಲಿ ಡಿ.06 ರ ವರೆಗೆ ನಡೆಯುವ ‘ತಂಬಾಕು ಮುಕ್ತ ಯುವ ಅಭಿಯಾನ 3.0’ ಗೆ ಚಾಲನೆ ನೀಡಲಾಯಿತು.
ಸಭೆಯಲ್ಲಿ ಜಿಲ್ಲಾ ಶಸ್ತçಚಿಕಿತ್ಸಕ ಡಾ.ಎನ್.ಬಸರೆಡ್ಡಿ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಇಂದ್ರಾಣಿ.ವಿ., ಪ್ರಭಾರಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಖುರ್ಷಿದ್ ಬೇಗಂ, ಜಿಲ್ಲಾ ತಂಬಾಕು ಸಲಹೆಗಾರ ಪ್ರಶಾಂತ್ ಸೇರಿದಂತೆ ಡಿಡಿಪಿಐ, ಡಿಡಿಪಿಯು, ಮಹಾನಗರ ಪಾಲಿಕೆ ಅಧಿಕಾರಿಗಳು ಹಾಗೂ ಎಲ್ಲಾ ತಾಲ್ಲೂಕು ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.
-----------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳು (Atom)

















































