ಶುಕ್ರವಾರ, ಅಕ್ಟೋಬರ್ 31, 2025
ನ.02 ರಂದು ಕೆ-ಸೆಟ್ ಪರೀಕ್ಷೆ; ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿ ಸುತ್ತ-ಮುತ್ತ ನಿರ್ಬಂಧ
ಬಳ್ಳಾರಿ,ಅ.31(ಕರ್ನಾಟಕ ವಾರ್ತೆ):
ನಗರದ 20 ಪರೀಕ್ಷಾ ಕೇಂದ್ರಗಳಲ್ಲಿ ನ.02 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 01 ಗಂಟೆಯವರೆಗೆ ಕೆ-ಸೆಟ್-2025 ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ಭಾರತೀಯ ನಾಗರೀಕ ಸುರಕ್ಷಾ ಸಂಹಿತಾ 2023 ರ ಕಲಂ 163 ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ನಿರ್ಭಂಧಿತ ಪ್ರದೇಶ ಎಂದು ಘೋಷಿಸಿ ಜಿಲ್ಲಾ ದಂಡಾಧಿಕಾರಿಯೂ ಆದ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಆದೇಶಿಸಿದ್ದಾರೆ.
ಪರೀಕ್ಷಾ ಕೇಂದ್ರಗಳ ಸುತ್ತಲೂ ಇರುವ ಜೆರಾಕ್ಸ್ ಸೆಂಟರ್ ಮತ್ತು ಇಂಟರ್‌ನೆಟ್ ಸೆಂಟರ್‌ಗಳನ್ನು ಕಾರ್ಯನಿರ್ವಹಿಸದಂತೆ ಪ್ರತಿಬಂಧಿಸಲು ಆದೇಶಿಸಿದ್ದು, ಆ ಪ್ರದೇಶದಲ್ಲಿ ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶ ನಿಷೇಧಿಸಲಾಗಿದೆ.
ಈ ಆದೇಶವು ಪರೀಕ್ಷೆಯ ಮೇಲ್ವಿಚಾರಣೆ ಕಾರ್ಯನಿರ್ವಹಿಸುವ ಸಿಬ್ಬಂದಿಯವರಿಗೆ ಅನ್ವಯಿಸುವುದಿಲ್ಲ ಎಂದು ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.
--------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ