ಶುಕ್ರವಾರ, ಅಕ್ಟೋಬರ್ 31, 2025

ನ.06 ರಂದು ಜಿಲ್ಲಾ ಮೇಲ್ವಿಚಾರಣಾ ಸಮಿತಿ ಸಭೆ

ಬಳ್ಳಾರಿ,ಅ.31(ಕರ್ನಾಟಕ ವಾರ್ತೆ): ಕರ್ನಾಟಕ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆ (ಯೋಜನೆ ರೂಪಿಸುವುದು, ಆರ್ಥಿಕ ಸಂಪನ್ಮೂಲಗಳ ಹಂಚಿಕೆ ಮತ್ತು ಬಳಕೆ) ಅಧಿನಿಯಮ-2013ರ ಸೆಕ್ಷನ್-11ರ ಪ್ರಕಾರ ಜಿಲ್ಲಾ ಮೇಲ್ವಿಚಾರಣಾ ಸಮಿತಿ ರಚಿಸಿದ್ದು, ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರ ಅಧ್ಯಕ್ಷತೆಯಲ್ಲಿ ನ.06 ರಂದು ಮಧ್ಯಾಹ್ನ 03 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಎಸ್.ಸಿ.ಎಸ್.ಪಿ./ಟಿ.ಎಸ್.ಪಿ ಜಿಲ್ಲಾ ಮೇಲ್ವಿಚಾರಣಾ ಸಮಿತಿಯ ಸಭೆ ಏರ್ಪಡಿಸಲಾಗಿದೆ. ಸಂಬAಧಿಸಿದ ಇಲಾಖಾ ಅಧಿಕಾರಿಗಳು ಅಗತ್ಯ ಮಾಹಿತಿಗಳೊಂದಿಗೆ ಸಭೆಗೆ ಹಾಜರಾಗಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚಿದಾನಂದಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ