ಮಂಗಳವಾರ, ಅಕ್ಟೋಬರ್ 14, 2025
ಅ.18 ರಂದು ಒಂದು ದಿನ ಜಾಗೃತಿ ಕಾರ್ಯಾಗಾರ
ಬಳ್ಳಾರಿ,ಅ.14(ಕರ್ನಾಟಕ ವಾರ್ತೆ):
ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಮತ್ತು ಜಿಲ್ಲಾ ಕೈಗಾರಿಕಾ ಕೇಂದ್ರ ವತಿಯಿಂದ ಆರ್‌ಎಎಂಪಿ ಯೋಜನೆಯಡಿ ಲೀನ್ ಯೋಜನೆ ಮತ್ತು ಝಡ್.ಇ.ಡಿ ಹಾಗೂ ರಫ್ತು ಕುರಿತು ಅ.18 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಸಭಾಂಗಣದಲ್ಲಿ ಒಂದು ದಿನದ ಜಾಗೃತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಸೋಮಶೇಖರ್ ಅವರು ತಿಳಿಸಿದ್ದಾರೆ.
ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳು ಮತ್ತು ಉದ್ಯಮಿಗಳಲ್ಲಿ ಹಣಕಾಸು, ತಾಂತ್ರಿಕ ಮತ್ತು ಮಾರ್ಗದರ್ಶನ ಬೆಂಬಲದ ಕುರಿತು ಜಾಗೃತಿ ಮೂಡಿಸಲಾಗುತ್ತದೆ. ಇದು ಲೀನ್ ಯೋಜನೆ ಮತ್ತು ಝಡ್.ಇ.ಡಿ ಹಾಗೂ ರಫ್ತು ಕುರಿತು ಸೌಲಭ್ಯಗಳನ್ನು ಪ್ರದರ್ಶಿಸುತ್ತದೆ. ಯಶಸ್ಸಿನ ಕಥೆಗಳನ್ನು ಹಂಚಿಕೊಳ್ಳುತ್ತದೆ ಮತ್ತು ನೆಟ್ ವರ್ಕಿಂಗ್‌ಗಾಗಿ ತಜ್ಞರು, ಅಧಿಕಾರಿಗಳು ಮತ್ತು ಉದ್ಯಮಿಗಳೊಂದಿಗೆ ಸಂಪರ್ಕ ಸಾಧಿಸಲು ಅವಕಾಶಗಳನ್ನು ಒದಗಿಸಿಕೊಡುತ್ತದೆ.
ಹಾಗಾಗಿ ಆಸಕ್ತ ವಿದ್ಯಾರ್ಥಿಗಳು, ಉದ್ದಿಮೆದಾರರು ಕಾರ್ಯಾಗಾರಲ್ಲಿ ಭಾಗವಹಿಸಬಹುದು ಎಂದು ಅವರು ತಿಳಿಸಿದ್ದಾರೆ.
--------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ