ಗುರುವಾರ, ಅಕ್ಟೋಬರ್ 16, 2025

ಅ.18 ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ

ಬಳ್ಳಾರಿ,ಅ.16(ಕರ್ನಾಟಕ ವಾರ್ತೆ): ಬಳ್ಳಾರಿ ಗ್ರಾಮೀಣ ಜೆಸ್ಕಾಂ ಕಾರ್ಯ ಮತ್ತು ಪಾಲನಾ ಶಾಖೆ ಪಿ.ಡಿ ಹಳ್ಲಿ ವ್ಯಾಪ್ತಿಗೆ ಬರುವ ಎಲ್ಲಾ ಗ್ರಾಹಕರಿಗೆ ತಮ್ಮ ವಿದ್ಯುತ್ ಸಂಬAಧಿಸಿದ ಸಮಸ್ಯೆಗಳನ್ನು ಬಗೆಹರಿಸಲು ಅ.18 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 01.30 ಗಂಟೆಯವರೆಗೆ ಚೆಳ್ಳಗುರ್ಕಿ ಗ್ರಾಮದ ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿ ಏರ್ಪಡಿಸಲಾಗಿದೆ. ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಭೆಯಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ