ಮಂಗಳವಾರ, ಅಕ್ಟೋಬರ್ 28, 2025

ಕನೆಕ್ಟ್-2025; ಪ್ರವಾಸೋದ್ಯಮ ಭಾಗಿದಾರರು ಭಾಗವಹಿಸಲು ಅವಕಾಶ

ಬಳ್ಳಾರಿ,ಅ.28(ಕರ್ನಾಟಕ ವಾರ್ತೆ): ಪ್ರಸ್ತಕ ಸಾಲಿನ ಕರ್ನಾಟಕ ಇಂಟರ್ ನ್ಯಾಷನಲ್ ಟ್ರಾವೆಲ್ ಎಕ್ಸೊ÷್ಪÃ-2025 ರ ಅಂಗವಾಗಿ ಕರ್ನಾಟಕ ಟೂರಿಸಂ ಸೊಸೈಟಿ ಇವರ ಸಹಯೋಗದೊಂದಿಗೆ ಅ.31 ರಂದು ಗದಗ ಜಿಲ್ಲೆಯ ಮಹಾತ್ಮಗಾಂಧಿ ಆರ್‌ಡಿಪಿಆರ್ ವಿಶ್ವವಿದ್ಯಾಲಯದಲ್ಲಿ “ಕನೆಕ್ಟ್-2025”ರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಆಸಕ್ತ ಬಳ್ಳಾರಿ ಜಿಲ್ಲೆಯ ಪ್ರವಾಸೋದ್ಯಮ ಭಾಗಿದಾರರು ಭಾಗವಹಿಸಬಹುದು ಎಂದು ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ. ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವರಾದ ಹೆಚ್.ಕೆ.ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ. ಪ್ರವಾಸೋದ್ಯಮ ಕ್ಷೇತ್ರದಲ್ಲಿ ಈಗಾಗಲೇ ತೊಡಗಿಸಿಕೊಂಡಿರುವ ಭಾಗಿದಾರರು ಹಾಗೂ ಹೂಡಿಕೆದಾರರು ಪ್ರವಾಸೋದ್ಯಮ ಅಭಿವೃದ್ಧಿ ಪ್ರಯೋಜನ ಪಡೆಯುವವರು ಹಾಗೂ ಕರ್ನಾಟಕ ಪ್ರವಾಸೋದ್ಯಮ ನೀತಿಯಡಿ ಪ್ರವಾಸೋದ್ಯಮ ಉತ್ಪನ್ನಗಳು ಮತ್ತು ಅನುಭವಗಳಲ್ಲಿ 25 ಯೋಜನೆ ಒಳಗೊಂಡAತೆ ಚರ್ಚಿಸಿ, ಪ್ರವಾಸೋದ್ಯಮ ಯೋಜನೆಗಳಿಗೆ ಭಾಗಿದಾರರು ಹಾಗೂ ಬಂಡವಾಳ ಹೂಡಿಕೆದಾರರಿಗೆ ಅನುಕೂಲವಾಗುವಂತೆ ಅಗತ್ಯ ಮಾಹಿತಿ ಪಡೆಯಬಹುದು ಹಾಗೂ ತಮ್ಮ ಅಮೂಲ್ಯ ಸಲಹೆ-ಸೂಚನೆ ನೀಡಬಹುದು. ಆಸಕ್ತರು ಕಾರ್ಯಕ್ರಮದಲ್ಲಿ ತಪ್ಪದೇ ಭಾಗವಹಿಸಿ, ಇದರ ಸದುಪಯೋಗಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ವಿಜಯನಗರ ಜಿಲ್ಲೆಯ ಕಮಲಾಪುರದ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರ ಕಚೇರಿ ಅಥವಾ ಬಳ್ಳಾರಿ ಜಿಲ್ಲೆಯ ಹಿರಿಯ ಪ್ರವಾಸಿ ಪ್ರವರ್ತಕರಾದ ಶ್ರೀಹರಿ ಮಾಸನೂರು (ಮೊ.7892722443) ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ