ಶುಕ್ರವಾರ, ಅಕ್ಟೋಬರ್ 24, 2025

ಅ.28 ರಂದು ಬಳ್ಳಾರಿ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ

ಬಳ್ಳಾರಿ,ಅ.24(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲೆಯ ಸಮಸ್ತ ಸಂಘ ಸಂಸ್ಥೆಗಳ ಇವರ ಸಹಯೋಗದಲ್ಲಿ ಬಳ್ಳಾರಿ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಅ.28 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾ ಕ್ರೀಡಾಂಗಣ ರಸ್ತೆಯ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು. ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಬಿ.ನಾಗೇಂದ್ರ, ಜೆ.ಎನ್.ಗಣೇಶ್, ಬಿ.ಎಂ.ನಾಗರಾಜ, ಈ.ಅನ್ನಪೂರ್ಣ, ವಿಧಾನಪರಿಷÀÀತ್ ಶಾಸಕರಾದ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತದ ಉಪಾಧ್ಯಕ್ಷ ಹೆಚ್.ಲಕ್ಷö್ಮಣ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ., ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಮಹಮ್ಮದ್ ಹಾರಿಸ್ ಸುಮೇರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಕೆ.ಗ್ರೇಸಿ ಅವರು ತಿಳಿಸಿದ್ದಾರೆ. -----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ