ಸೋಮವಾರ, ಅಕ್ಟೋಬರ್ 27, 2025
ಅ.30 ರಂದು ಡೆಂಗ್ಯೂ ರೋಗ ಮುಂಜಾಗ್ರತಾ ಮತ್ತು ನಿಯಂತ್ರಣ ಕುರಿತು ಸಭೆ
ಬಳ್ಳಾರಿ,ಅ.27(ಕರ್ನಾಟಕ ವಾರ್ತೆ):
ಜಿಲ್ಲಾ ಆರೋಗ್ಯ ಇಲಾಖೆಯ ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣ ಘಟಕ ವತಿಯಿಂದ ಡೆಂಗ್ಯೂ ರೋಗ ಮುಂಜಾಗ್ರತ ಮತ್ತು ನಿಯಂತ್ರಣ ಕಾಯ್ದೆಯಡಿ ಜಿಲ್ಲೆಯ ಡೆಂಗ್ಯೂ ರೋಗ ನಿಯಂತ್ರಣಾ ಕ್ರಮವನ್ನು ಉಲ್ಲಂಘನೆ ಮಾಡಿದ ಸಾರ್ವಜನಿಕರು ಹಾಗೂ ವಿವಿಧ ಮಾಲೀಕತ್ವದಾರರುಗಳಿಗೆ ನೋಟಿಸ್ ನೀಡುವುದು ಮತ್ತು ದಂಡ ವಸೂಲಿ ಮಾಡುವ ಅಧಿಕಾರವನ್ನು ವಿವಿಧ ಹಂತದ ಅಧಿಕಾರಿಗಳಿಗೆ ನೀಡುವ ಕುರಿತು ಚರ್ಚಿಸಲು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರ ಅಧ್ಯಕ್ಷತೆಯಲ್ಲಿ ಅ.30 ರಂದು ಮಧ್ಯಾಹ್ನ 12.30 ಗಂಟೆಗೆ ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಡೆಂಗ್ಯೂ ರೋಗ ಮುಂಜಾಗ್ರತಾ ಮತ್ತು ನಿಯಂತ್ರಣ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ತಿಳಿಸಿದ್ದಾರೆ.
--------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ