ಗುರುವಾರ, ಅಕ್ಟೋಬರ್ 30, 2025

ವ್ಯಕ್ತಿ ಕಾಣೆ: ಪತ್ತೆಗೆ ಮನವಿ

ಬಳ್ಳಾರಿ,ಅ.30(ಕರ್ನಾಟಕ ವಾರ್ತೆ): ನಗರದ ಕೌಲ್ ಬಜಾರ್‌ನ ವಾರ್ಡ್ ನಂ.20 ರ ಟೈಲರ್ ಬೀದಿ ನಿವಾಸಿಯಾದ ಟಿ.ಶೇಷಾದ್ರಿ ಎನ್ನುವ 43 ವರ್ಷದ ವ್ಯಕ್ತಿಯು ಅ.15 ರಂದು ಕಾಣೆಯಾಗಿದ್ದು, ಈ ಕುರಿತು ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಪೋಲಿಸ್ ಸಬ್ ಇನ್ಸ್ ಪೆಕ್ಟರ್ ಅವರು ತಿಳಿಸಿದ್ದಾರೆ. ಚಹರೆ ಗುರುತು: ಅಂದಾಜು 5.6 ಅಡಿ ಎತ್ತರ, ದುಂಡು ಮುಖ, ಎಣ್ಣೆಗೆಂಪು ಮೈಬಣ್ಣ, ದೃಢವಾದ ಮೈಕಟ್ಟು ಹೊಂದಿರುತ್ತಾನೆ. ಕಾಣೆಯಾದ ಸಂದರ್ಭದಲ್ಲಿ ಕಪ್ಪು ಬಣ್ಣದ ಟೀ ಶರ್ಟ್ ಮತ್ತು ಕಪ್ಪು ಬಣ್ಣದ ಬರ್ಮೊಡ ಧರಿಸಿರುತ್ತಾನೆ. ವ್ಯಕ್ತಿಯ ಬಗ್ಗೆ ಸುಳಿವು ಸಿಕ್ಕಲ್ಲಿ ಕೌಲ್ ಬಜಾರ್ ಪೊಲೀಸ್ ಠಾಣೆಯ ದೂ.08392-240731,244145, ಪಿಐ ಮೊ.9480803047, ಪಿಎಸ್‌ಐ ಮೊ.94808203085, 9480803085 ಅಥವಾ ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ