ಶುಕ್ರವಾರ, ಅಕ್ಟೋಬರ್ 3, 2025
ಅನಾಮಧೇಯ ಮೃತ ವ್ಯಕ್ತಿ; ವಾರಸುದಾರರ ಪತ್ತೆಗೆ ಮನವಿ
ಬಳ್ಳಾರಿ,ಅ.03(ಕರ್ನಾಟಕ ವಾರ್ತೆ):
ನಗರದ ಸಿದ್ದಾರ್ಥ ಕಾಲೋನಿಯ ಹೆಚ್.ಎಲ್.ಸಿ 14 ನೇ ಡಿ.ಪಿ ಕಾಲುವೆಯಲ್ಲಿ ಅಂದಾಜು 35-40 ವರ್ಷದ ಅನಾಮಧೇಯ ವ್ಯಕ್ತಿಯು ಸೆ.30 ರಂದು ಮೃತಪಟ್ಟಿದ್ದು, ಈ ಕುರಿತು ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತನ ವಾರಸುದಾರರ ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮನವಿ ಮಾಡಿದ್ದಾರೆ.
ಮೃತನ ಚಹರೆ: ಎತ್ತರ ಅಂದಾಜು 5.5 ಅಡಿ, ದುಂಡು ಮುಖ, ಗೋಧಿ ಮೈಬಣ್ಣ, ದೃಢವಾದ ಮೈಕಟ್ಟು, ತಲೆಯಲ್ಲಿ ಕಪ್ಪು ಬಣ್ಣದ ಕೂದಲು ಇರುತ್ತದೆ. ಮೃತನ ಮೈಮೇಲೆ ನಸೀ ಬಣ್ಣದ ಶರ್ಟ್ ಮತ್ತು ಪ್ಯಾಂಟ್, ನೀಲಿ ಬಣ್ಣದ ಕಟ್ ಬನಿಯನ್, ನಸೀ ಬಣ್ಣದ ಅಂಡರ್‌ವೇರ್ ಧರಿಸಿರುತ್ತಾನೆ.
ಮೇಲ್ಕಂಡ ಚಹರೆ ಗುರುತುಗಳುಳ್ಳ ವ್ಯಕ್ತಿಯ ವಾರಸುದಾರರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಗಾಂಧಿನಗರ ಪೊಲೀಸ್ ಠಾಣೆಯ ದೂ.08392-272192, ಪಿ.ಐ ಮೊ.9480803046 ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ:08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ