ಬುಧವಾರ, ಅಕ್ಟೋಬರ್ 15, 2025

ಕಂಪ್ಲಿ: ಬಾಡಿಗೆ ಕಟ್ಟಡ ಬೇಕಾಗಿದೆ

ಬಳ್ಳಾರಿ,ಅ.15(ಕರ್ನಾಟಕ ವಾರ್ತೆ): ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ಪ್ರಸಕ್ತ ಸಾಲಿನ ಕಂಪ್ಲಿ ಪಟ್ಟಣದಲ್ಲಿ ಹೊಸದಾಗಿ ಸರ್ಕಾರಿ ಮೆಟ್ರಿಕ್ ನಂತರದ ಬಾಲಕೀಯರ ವಿದ್ಯಾರ್ಥಿ ನಿಲಯ ಪ್ರಾರಂಭಿಸಲು 100 ವಿದ್ಯಾರ್ಥಿಗಳ ವಾಸಕ್ಕೆ ಕಂಪ್ಲಿ ನಗರ ವ್ಯಾಪ್ತಿಯಲ್ಲಿ ಕಟ್ಟಡವನ್ನು ಬಾಡಿಗೆಗೆ ನೀಡಲು ಇಚ್ಚಿಸುವ ಕಟ್ಟಡಗಳ ಮಾಲೀಕರು ಸಂಪರ್ಕಿಸಬಹುದು. ಆಸಕ್ತ ಕಟ್ಟಡÀ ಮಾಲೀಕರು ಅಕ್ಟೋಬರ್ 30 ರೊಳಗೆ ಅಗತ್ಯ ದಾಖಲೆಗಳೊಂದಿಗೆ ನಗರದ ನಲ್ಲಚೆರುವು ಪ್ರದೇಶದ ವಾಲ್ಮೀಕಿ ಭವನದ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊ.9141004607 ಗೆ ಸಂಪರ್ಕಿಸಬಹುದು ಎಂದು ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ. ---------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ