ಶುಕ್ರವಾರ, ಅಕ್ಟೋಬರ್ 31, 2025
ಕರ್ನಾಟಕ ವಿಧಾನಪರಿಷತ್ ಈಶಾನ್ಯ ಶಿಕ್ಷಕರ ಚುನಾವಣೆಗೆ ಮತದಾರರ ಪಟ್ಟಿ ಸಿದ್ಧಪಡಿಸುವಿಕೆ | ಜಿಲ್ಲಾ ಮಟ್ಟದ ಮೇಲ್ವಿಚಾರಣೆಗಾಗಿ ನೋಡೆಲ್ ಅಧಿಕಾರಿಗಳ ನೇಮಕ
ಬಳ್ಳಾರಿ,ಅ.31(ಕರ್ನಾಟಕ ವಾರ್ತೆ):
ಕರ್ನಾಟಕ ವಿಧಾನಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ-2026 ಗೆ ಹೊಸದಾಗಿ ಮತದಾರರ ಪಟ್ಟಿ ಸಿದ್ಧಪಡಿಸಲು ಅರ್ಹ ಮತದಾರರನ್ನು ಗುರುತಿಸಿ ಅವರನ್ನು ಪಟ್ಟಿಯಲ್ಲಿ ನೋಂದಾಯಿಸಲು ಈ ಪ್ರಕ್ರಿಯೆಯ ಜಿಲ್ಲಾ ಮಟ್ಟದ ಮೇಲ್ವಿಚಾರಣೆಗಾಗಿ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಜಿಲ್ಲಾ ನೋಡೆಲ್ ಅಧಿಕಾರಿಗಳಾಗಿ ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ತಿಳಿಸಿದ್ದಾರೆ.
*ಅಧಿಕಾರಿಗಳ ಹುದ್ದೆ, ವಹಿಸಲಾದ ಕಾರ್ಯಭಾರ:*
ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯ ಕುಲಪತಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಮತ್ತು ಆಯಾ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು- ತಮ್ಮ ಅಧೀನದಲ್ಲಿ ಬರುವ ಇಲಾಖೆ, ಕಚೇರಿ, ಸಂಸ್ಥೆಗಳ ಕಾರ್ಯ ವ್ಯಾಪ್ತಿಯಲ್ಲಿ ಬರುವ ಶಿಕ್ಷಣ ಸಂಸ್ಥೆಗಳಲ್ಲಿನ ಅರ್ಹ ಮತದಾರರನ್ನು ಗುರುತಿಸಿ ನೋಂದಾಯಿಸುವ ಪ್ರಕ್ರಿಯೆಯಲ್ಲಿನ ನೋಡೆಲ್ ಅಧಿಕಾರಿಯಾಗಿರುತ್ತಾರೆ.
ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದ ಪ್ರಾಂಶುಪಾಲರು- ಜಿಲ್ಲೆಯಲ್ಲಿನ ಸರ್ಕಾರಿ, ಅನುದಾನಿತ, ಅನುದಾನ ರಹಿತ ಮೆಡಿಕಲ್ ಕಾಲೇಜು, ಡೆಂಟಲ್ ಕಾಲೇಜು, ನರ್ಸಿಂಗ್ ಕಾಲೇಜು ಶಿಕ್ಷಣ ಸಂಸ್ಥೆಗಳಲ್ಲಿನ ಅರ್ಹ ಮತದಾರರನ್ನು ಗುರುತಿಸಿ ನೋಂದಾಯಿಸುವ ಪ್ರಕ್ರಿಯೆಯ ನೋಡೆಲ್ ಅಧಿಕಾರಿಯಾಗಿರುತ್ತಾರೆ.
ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು(ಸ್ವಾಯತ್ತ)ನ ಪ್ರಾಂಶುಪಾಲರು- ಜಿಲ್ಲೆಯಲ್ಲಿ ಬರುವ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪದವಿ ಶಿಕ್ಷಣ ಸಂಸ್ಥೆಗಳಲ್ಲಿನ ಅರ್ಹ ಮತದಾರರನ್ನು ಗುರುತಿಸಿ ನೋಂದಾಯಿಸುವ ಪ್ರಕ್ರಿಯೆಯಲ್ಲಿನ ನೋಡೆಲ್ ಅಧಿಕಾರಿಯಾಗಿರುತ್ತಾರೆ.
ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರು- ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪಾಲಿಟೆಕ್ನಿಕ್ ಕಾಲೇಜು ಶಿಕ್ಷಣ ಸಂಸ್ಥೆಗಳಲ್ಲಿನ ಅರ್ಹ ಮತದಾರರನ್ನು ಗುರುತಿಸಿ ನೋಂದಾಯಿಸುವ ಪ್ರಕ್ರಿಯೆಯಲ್ಲಿನ ನೋಡೆಲ್ ಅಧಿಕಾರಿಯಾಗಿರುತ್ತಾರೆ.
ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರು- ಜಿಲ್ಲಾ ವ್ಯಾಪ್ತಿಯಲ್ಲಿನ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿನ ಅರ್ಹ ಮತದಾರರನ್ನು ಗುರುತಿಸಿ ನೋಂದಾಯಿಸುವ ಪ್ರಕ್ರಿಯೆಯಲ್ಲಿನ ನೋಡೆಲ್ ಅಧಿಕಾರಿಯಾಗಿರುತ್ತಾರೆ.
ತಾರಾನಾಥ ಆಯುರ್ವೇದ ಕಾಲೇಜಿನ ಪ್ರಾಂಶುಪಾಲರು- ಜಿಲ್ಲಾ ವ್ಯಾಪ್ತಿಯಲ್ಲಿನ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಆಯುಷ್, ಹೋಮಿಯೋಪತಿ, ಯುನಾನಿ, ಸಂಸ್ಥೆಗಳಲ್ಲಿನ ಅರ್ಹ ಮತದಾರರನ್ನು ಗುರುತಿಸಿ ನೋಂದಾಯಿಸುವ ಪ್ರಕ್ರಿಯೆಯಲ್ಲಿನ ನೋಡೆಲ್ ಅಧಿಕಾರಿಯಾಗಿರುತ್ತಾರೆ.
ಬಳ್ಳಾರಿ ತಾಲ್ಲೂಕಿಗೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ, ಸಂಡೂರು ತಾಲ್ಲೂಕಿಗೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ, ಸಿರುಗುಪ್ಪ ತಾಲ್ಲೂಕಿಗೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು, ಕಂಪ್ಲಿ ತಾಲ್ಲೂಕಿಗೆ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಕುರುಗೋಡು ತಾಲ್ಲೂಕಿಗೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ- ಮೇಲ್ಕಂಡ ಎಲ್ಲಾ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನಿತ ರಹಿತ ಪದವಿ ಪೂರ್ವ ಕಾಲೇಜುಗಳಿಗೆ ಭೇಟಿ ನೀಡಿ ನಮೂನೆ-19 ಸ್ವೀಕೃತಿಯಾದ ಬಗ್ಗೆ ಮತ್ತು ಭರ್ತಿ ಮಾಡಿ ಮರು ಸಲ್ಲಿಸಿರುವ ಬಗ್ಗೆ ಪರಿಶೀಲಿಸಿ ನಿಗದಿತ ನಮೂನೆಯಲ್ಲಿ ಮಾಹಿತಿ ನೀಡಲಿದ್ದಾರೆ.
ಈ ಮೇಲಿನಂತೆ ನೇಮಕಗೊಂಡಿರುವ ಮೇಲ್ವಿಚಾರಣಾಧಿಕಾರಿಗಳು ಅವರವರ ಇಲಾಖೆಯ, ಕಚೇರಿ, ಸಂಸ್ಥೆಗಳ ಕಾರ್ಯ ವ್ಯಾಪ್ತಿಯಲ್ಲಿ ಬರುವ ಶಿಕ್ಷಣ ಸಂಸ್ಥೆಗಳಲ್ಲಿನ ಅರ್ಹ ಮತದಾರರನ್ನು ಗುರುತಿಸಿ ನೋಂದಾಯಿಸುವಲ್ಲಿ ಕ್ರಿಯಾತ್ಮಕವಾಗಿ ಕಾರ್ಯನಿರ್ವಹಿಸಬೇಕು. ಜಿಲ್ಲೆಯಲ್ಲಿ ಬರುವ ನ.03 ರಂದು ವಿಶೇಷ ಮಿಂಚಿನ ನೋಂದಣಿ ಕಾರ್ಯಕ್ರಮ ಹಮ್ಮಿಕೊಂಡು ಸ್ವೀಕೃತಿಯಾದ ನಮೂನೆ-19 ಅರ್ಹ ಮತದಾರರ ಪಟ್ಟಿಯ ಸಂಖ್ಯೆಯೊAದಿಗೆ ನಿಗದಿತ ನಮೂನೆಯಲ್ಲಿ ಮಾಹಿತಿ ಪಡೆಯಬೇಕು.
ಅರ್ಜಿ ಸಲ್ಲಿಸಲು ನ.06 ಕೊನೆಯ ದಿನವಾಗಿರುವುದರಿಂದ ಯಾವುದೇ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಕ್ರಮವಹಿಸಬೇಕು ಎಂದು ಎಂದು ಜಿಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಅವರು ತಿಳಿಸಿದ್ದಾರೆ.
---------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ