ಶನಿವಾರ, ಅಕ್ಟೋಬರ್ 18, 2025
ಬಳ್ಳಾರಿ ಮಹಾನಗರ ಪಾಲಿಕೆ: ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಬಳ್ಳಾರಿ,ಅ.18(ಕರ್ನಾಟಕ ವಾರ್ತೆ):
ಬಳ್ಳಾರಿ ಮಹಾನಗರ ಪಾಲಿಕೆ ವತಿಯಿಂದ ಪ್ರಧಾನಮಂತ್ರಿ ಬೀದಿ ವ್ಯಾಪಾರಿಗಳ ಆತ್ಮ ನಿರ್ಭರ್ ನಿಧಿ ಯೋಜನೆಯಡಿ ಬ್ಯಾಂಕ್‌ಗಳ ಮೂಲಕ ಸಾಲ ಸೌಲಭ್ಯಕ್ಕಾಗಿ ನಗರದ ಬೀದಿ ಬದಿ ವ್ಯಾಪಾರಸ್ಥರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಮಹಾನಗರ ಪಾಲಿಕೆಯ ಆಯುಕ್ತ ಪಿ.ಎಸ್.ಮಂಜುನಾಥ ಅವರು ತಿಳಿಸಿದ್ದಾರೆ.
ಬೇಕಾದ ದಾಖಲೆ:
ಅರ್ಜಿದಾರರ ಆಧಾರ್ ಕಾರ್ಡ್, ಬೀದಿ ಬದಿ ವ್ಯಾಪಾರಸ್ಥರ ಗುರುತಿನ ಚೀಟಿ, ಬ್ಯಾಂಕ್ ಪಾಸ್ ಪುಸ್ತಕ, 2 ಪಾಸ್‌ಪೋರ್ಟ್ ಭಾವಚಿತ್ರ, ವ್ಯಾಪಾರ ಮಾಡುವ ಭಾವಚಿತ್ರ, ರೇಷನ್ ಕಾರ್ಡ್ ಇನ್ನಿತರೆ ದಾಖಲೆಗಳನ್ನು ಸಲ್ಲಿಸಬೇಕು. ಬೀದಿ ಬದಿ ವ್ಯಾಪಾರಸ್ಥರು ಪಿಎಮ್-ಸ್ವಾನಿಧಿ ಆನ್‌ಲೈನ್ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಮಹಾನಗರ ಪಾಲಿಕೆಯ ವಲಯ ಕಛೇರಿ – 2 (ಹಳೇ ಕಚೆೆÃರಿ) ರ ಡೇ-ನಲ್ಮ್ ಶಾಖೆ ಅಥವಾ ದೂ.08392-273479, 278168 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ