ಗುರುವಾರ, ಅಕ್ಟೋಬರ್ 30, 2025
ಕರ್ನಾಟಕ ಮೇದಾರ ಪರಿಶಿಷ್ಟ ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮ ಸಮಿತಿ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ
ಬಳ್ಳಾರಿ,ಅ.30(ಕರ್ನಾಟಕ ವಾರ್ತೆ):
ಕರ್ನಾಟಕ ಮೇದಾರ ಪರಿಶಿಷ್ಟ ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮದ ಯೋಜನೆ ಮತ್ತು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿಗೆ ಮೇದಾ, ಮೇದಾರಿ, ಗೌರಿಗ, ಬುರುಡ, ಮೇದಾರ ಬುಡಕಟ್ಟು ಸಮುದಾಯದ ಬಗ್ಗೆ ಮಾಹಿತಿ ಹೊಂದಿರುವ ಹಾಗೂ ಸೇವೆ ಮಾಡುವ ಮನೋಭಾವ ಹೊಂದಿರುವ 05 ನಾಮ ನಿರ್ದೇಶಿತ ಸದಸ್ಯತ್ವಕ್ಕೆ ಆಸಕ್ತ ಸಮುದಾಯದ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಸಮಿತಿಯು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚನೆ ಮಾಡಲಾಗುತ್ತದೆ. ಆಸಕ್ತರು ನಿಗದಿತ ನಮೂನೆಯ ಅರ್ಜಿ ಭರ್ತಿ ಮಾಡಿ ನವೆಂಬರ್ 04 ರೊಳಗೆ ನಗರದ ನಲ್ಲಚೆರವು ಪ್ರದೇಶದ ವಾಲ್ಮೀಕಿ ಭವನದ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂ.08392-242453 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶಾಷು ಮೋದಿನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ