ಸೋಮವಾರ, ಅಕ್ಟೋಬರ್ 6, 2025
ಯುವಕ ಕಾಣೆ: ಪತ್ತೆಗೆ ಮನವಿ
ಬಳ್ಳಾರಿ,ಅ.06(ಕರ್ನಾಟಕ ವಾರ್ತೆ):
ನಗರದ ವಿದ್ಯಾನಗರ ಬಡಾವಣೆಯ ಸೌದಗರ್ ಕಾಲೋನಿಯ ಸಾಯಿರಾಮ್ ಚೌಧರಿ ಎನ್ನುವ 24 ವರ್ಷದ ಯುವಕ ಅ.04 ರಂದು ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಹೇಳಿ ಕಾಣೆಯಾಗಿದ್ದು, ಈ ಕುರಿತು ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಠಾಣಾಧಿಕಾರಿ ಮನವಿ ಮಾಡಿದ್ದಾರೆ.
ಚಹರೆ ಗುರುತು: ಅಂದಾಜು 6.2 ಅಡಿ ಎತ್ತರ, ದುಂಡು ಮುಖ, ಗೋಧಿ ಮೈಬಣ್ಣ, ಸಾಧರಣ ಮೈಕಟ್ಟು, ಬಲಗೈ ಮೇಲೆ ವೆಂಕಟ ಬಾಲಾಜೀ ಇಂಗ್ಲೀಷ್‌ನಲ್ಲಿ ಹಚ್ಚೆ ಇರುತ್ತದೆ.
ಕಾಣೆಯಾದ ಸಂದರ್ಭದಲ್ಲಿ ಹಳದಿ ಬಣ್ಣದ ಟೀ-ಶರ್ಟ್ ಹಾಗೂ ಗ್ರೇ ಕಲರ್ ಜೀನ್ಸ್ ಪ್ಯಾಂಟ್ ಮತ್ತು ಸ್ಯಾಂಡಲ್ಸ್ ಚಪ್ಪಲಿ ಧರಿಸಿರುತ್ತಾನೆ.
ಯುವಕನ ಬಗ್ಗೆ ಸುಳಿವು ಸಿಕ್ಕಲ್ಲಿ ಕೌಲ್ ಬಜಾರ್ ಪೊಲೀಸ್ ಠಾಣೆಯ ದೂ.08392-240731,244145 ಅಥವಾ ಪಿಎಸ್‌ಐ ಮೊ.94808203085, ಪಿಐ ಮೊ.9480803047 ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ