ಶನಿವಾರ, ಅಕ್ಟೋಬರ್ 18, 2025
ಜವಾಹರ ನವೋದಯ ವಿದ್ಯಾಲಯ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಬಳ್ಳಾರಿ,ಅ.18(ಕರ್ನಾಟಕ ವಾರ್ತೆ):
ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲ್ಲೂಕಿನ ಚಿಕ್ಕಜೋಗಿಹಳ್ಳಿಯಲ್ಲಿರುವ ಜವಾಹರ ನವೋದಯ ವಿದ್ಯಾಲಯದ 9ನೇ ಮತ್ತು 11ನೇ ತರಗತಿಯ (2026-27ನೇ ಸಾಲಿಗಾಗಿ) ಪ್ರವೇಶ ಪರೀಕ್ಷೆಗೆ ಈಗಾಗಲೇ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ಅಕ್ಟೋಬರ್ 23 ರ ವರೆಗೆ ವಿಸ್ತರಿಸಲಾಗಿದೆ.
ಆಸಕ್ತರು ಆನ್ ಲೈನ್ ವೆಬ್‌ಸೈಟ್: 9ನೇ ತರಗತಿಗಾಗಿ-https://cbseitms.nic.in/2025/nvsix9/registrationclassIX/registrationclassIX ಮತ್ತು 11ನೇ ತರಗತಿಗಾಗಿ- https://cbseitms.nic.in/2025/nvsxi_11/registrationclassXl/registrationclassXI ಗೆ ಭೇಟಿ ನೀಡಬಹುದು ಎಂದು ವಿದ್ಯಾಲಯದ ಪ್ರಾಚಾರ್ಯ ಸುದೇಶ ಗೋಪಾಲ ಮಲಾಜುರೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ