ಗುರುವಾರ, ಅಕ್ಟೋಬರ್ 30, 2025

ಜಿಲ್ಲಾಡಳಿತದಿಂದ ಒನಕೆ ಓಬವ್ವ ಜಯಂತಿ ಅರ್ಥಪೂರ್ಣ ಆಚರಣೆ: ಎಡಿಸಿ ಮಹಮ್ಮದ್ ಝುಬೇರ್

ಬಳ್ಳಾರಿ,ಅ.30(ಕರ್ನಾಟಕ ವಾರ್ತೆ): ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತದಿಂದ ವೀರವನಿತೆ ಒನಕೆ ಓಬವ್ವ ಜಯಂತಿ ಕಾರ್ಯಕ್ರಮವನ್ನು ನ.11 ರಂದು ಜಿಲ್ಲಾ ಕೇಂದ್ರದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್.ಎನ್ ಝುಬೇರ್ ಅವರು ಹೇಳಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ವಿಡೀಯೋ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಒನಕೆ ಓಬವ್ವ ಜಯಂತಿ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನ.11 ರಂದು ಬೆಳಿಗ್ಗೆ 11 ಗಂಟೆಗೆ ಸಾಂಸ್ಕೃತಿಕ ಸಮುಚ್ಚಯದ ಹೊಂಗಿರಣ ಸಭಾಂಗಣದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಎಲ್ಲಾ ಅಗತ್ಯ ಸಿದ್ದತೆ ಮಾಡಿಕೊಳ್ಳಬೇಕು ಎಂದು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ವೀರವನಿತೆ ಒನಕೆ ಒಬವ್ವ ಜಯಂತಿ ಕಾರ್ಯಕ್ರಮವನ್ನು ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಜಯಂತಿ ಆಚರಿಸಬೇಕು ಎಂದು ನಿರ್ದೇಶನ ನೀಡಿದ ಅವರು, ಜಯಂತಿ ಕಾರ್ಯಕ್ರಮಕ್ಕೆ ಎಲ್ಲರೂ ತಪ್ಪದೇ ಸ್ವ-ಇಚ್ಛೆಯಿಂದ ಪಾಲ್ಗೊಳ್ಳಬೇಕು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ವೀರವನಿತೆ ಒನಕೆ ಒಬವ್ವ ಅವರ ಜೀವನ ಯಶೋಗಾಥೆ ತಿಳಿಸಲು ವಿಶೇಷ ಉಪನ್ಯಾಸಕರಾಗಿ ಸಾಹಿತಿ ಡಿ.ವೆಂಕಮ್ಮ ಅವರನ್ನು ಸಭೆಯಲ್ಲಿ ಆಯ್ಕೆ ಮಾಡಲಾಯಿತು. ಕಾರ್ಯಕ್ರಮಲ್ಲಿ ವಚನಸಂಗೀತ, ಲಘು ಉಪಹಾರ, ಕುಡಿಯುವ ನೀರಿನ ವ್ಯವಸ್ಥೆ ಕೈಗೊಳ್ಳುವಂತೆ ಸೂಚಿಸಿದರು. ಕಾಲೇಜು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಭಾಗವಹಿಸುವಂತೆ ಡಿಡಿಪಿಐ, ಡಿಡಿಪಿಯು ಅಧಿಕಾರಿಗಳು ಕ್ರಮವಹಿಸಬೇಕು ಎಂದು ತಿಳಿಸಿದರು. ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ವ್ಯಕ್ತಿಗಳು ಹಾಗೂ ವಿದ್ಯಾರ್ಥಿಗಳನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲು ಅರ್ಹರನ್ನು ಆಯ್ಕೆ ಮಾಡಿ ಪಟ್ಟಿ ನೀಡಬೇಕು. ಶಿಷ್ಠಾಚಾರದನ್ವಯ ಆಹ್ವಾನ ಪತ್ರಿಕೆ ಮುದ್ರಿಸಿ, ಗಣ್ಯರನ್ನು ಆಹ್ವಾನಿಸಬೇಕು ಎಂದರು. ಈ ವೇಳೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಇತರರು ಉಪಸ್ಥಿತರಿದ್ದರು. ------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ