ಬುಧವಾರ, ಅಕ್ಟೋಬರ್ 8, 2025
ಸಂಡೂರು: ಭಾಗ್ಯಲಕ್ಷಿö್ಮÃ ಬಾಂಡ್ ಪಡೆದ ಫಲಾನುಭವಿಗಳಿಂದ ಅರ್ಜಿ ಆಹ್ವಾನ
ಬಳ್ಳಾರಿ,ಅ.08(ಕರ್ನಾಟಕ ವಾರ್ತೆ):
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ 2006-07ನೇ ಸಾಲಿನಲ್ಲಿ ಭಾಗ್ಯಲಕ್ಷಿö್ಮÃ ಯೋಜನೆಯಡಿ ಬಾಂಡ್ ಪಡೆದ ಫಲಾನುಭವಿಗಳಿಗೆ ಪರಿಪಕ್ವ ಮೊತ್ತ ಪಾವತಿಸಲು ಉದ್ದೇಶಿಸಲಾಗಿದ್ದು, ಸಂಡೂರು ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ವ್ಯಾಪ್ತಿಯ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
2006-07ನೇ ಸಾಲಿನಲ್ಲಿ ಜನಿಸಿ, 18 ವರ್ಷ ಪೂರ್ಣಗೊಂಡಿರುವ ಫಲಾನುಭವಿಗಳಿಗೆ ಪರಿಪಕ್ವ ಮೊತ್ತ ಪಡೆಯಲು ಅರ್ಹರಾಗಿರುತ್ತಾರೆ. ಅಗತ್ಯ ದಾಖಲೆಗಳೊಂದಿಗೆ ಪ್ರಸ್ತಾವನೆ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದೆ. ಅವಧಿ ಮೀರಿ ಬಂದAತAಹ ಅರ್ಜಿಗಳನ್ನು ಪರಿಗಣಿಸುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಅಂಗನವಾಡಿ ಕೇಂದ್ರ ಅಥವಾ ಸಂಡೂರು ಪಟ್ಟಣದ ಕೆಹೆಚ್‌ಬಿ ಕಾಲೋನಿಯ ಸ್ತಿçÃಶಕ್ತಿ ಭವನದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಸಂಡೂರು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ