ಶನಿವಾರ, ನವೆಂಬರ್ 29, 2025

ಡಿ.01 ರಂದು ವಿಶ್ವ ಏಡ್ಸ್ ದಿನಾಚರಣೆ ಕಾರ್ಯಕ್ರಮ

ಬಳ್ಳಾರಿ,ನ.29(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ನಿರ್ವಾಹಕ ಘಟಕ ವತಿಯಿಂದ ಡಿ.01 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಿಗ್ಗೆ 07 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಮುಂಭಾಗದಲ್ಲಿ ವಾಕಥಾನ್ ಕಾರ್ಯಕ್ರಮ ಏರ್ಪಡಿಸಲಾಗಿದೆ. ವಾಕಥಾನ್ ಅಲ್ಲಿಂದ ಆರಂಭಗೊAಡು ಸಂಗA ವೃತ್ತ- ರಾಘವೇಂದ್ರ ಸಿನಿಮಾ ಮಂದಿರ ರಸ್ತೆ- ಕೆ.ಸಿ.ರಸ್ತೆ- ಮೀನಾಕ್ಷಿ ವೃತ್ತದ ಮೂಲಕ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಿAದ ಗಡಿಗಿ ಚೆನ್ನಪ್ಪ ವೃತ್ತ- ಸಂಗA ವೃತ್ತದ ಮಾರ್ಗವಾಗಿ ಮರಳಿ ಜಿಲ್ಲಾ ಆಸ್ಪತ್ರೆಯ ಆವರಣಕ್ಕೆ ತಲುಪಿ ಅಂತ್ಯಗೊಳ್ಳಲಿದೆ. ಬಳಿಕ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಅಂದು ಸಂಜೆ 06 ಗಂಟೆಗೆ ನಗರದ ಬ್ರೂಸ್ ಪೇಟೆ ಪೊಲೀಸ್ ಠಾಣೆ ಮುಂಭಾಗದಲ್ಲಿ ಕ್ಯಾಂಡೆಲ್ (ಮೇಣದ ಬತ್ತಿ) ಲೈಟ್ ಜಾಥ ಹಮ್ಮಿಕೊಳ್ಳಲಾಗಿದೆ. ಜಾಥಾವು ಬ್ರೂಸ್ ಪೇಟೆ ಪೊಲೀಸ್ ಠಾಣೆ ಮುಂಭಾಗದಿAದ ಆರಂಭಗೊAಡು ಹೆಚ್.ಆರ್.ಗವಿಯಪ್ಪ ವೃತ್ತದವರೆಗೆ ನಡೆಯಲಿದೆ ಎಂದು ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ನಿರ್ವಾಹಕ ಘಟಕ ಅಧಿಕಾರಿ ಆಗಿರುವ ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಇಂದ್ರಾಣಿ.ವಿ ಅವರು ತಿಳಿಸಿದ್ದಾರೆ. -----------------

ಡಿ.03 ರಂದು ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮ

ಬಳ್ಳಾರಿ,ನ.29(ಕರ್ನಾಟಕ ವಾರ್ತೆ): ‘ಸಮಗ್ರ ಮತ್ತು ಸುಸ್ಥಿರ ಭವಿಷ್ಯಕ್ಕಾಗಿ ವಿಕಲಚೇತನ ವ್ಯಕ್ತಿಗಳಲ್ಲಿ ನಾಯಕತ್ವ ಉತ್ತೇಜನ’ ಎಂಬ ಘೋಷವಾಕ್ಯದಡಿ ಡಿ.03 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜೋಳದರಾಶಿ ದೊಡ್ಡನಗೌಡ ರಂಗಮAದಿರದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ, ಚಿಕಲಚೇತನರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್ ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು. ಸಂಸದರಾದ ಈ.ತುಕಾರಾಮ್, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಬಿ.ನಾಗೇಂದ್ರ, ಜೆ.ಎನ್.ಗಣೇಶ್, ಬಿ.ಎಂ.ನಾಗರಾಜ, ಈ.ಅನ್ನಪೂರ್ಣ, ವಿಧಾನಪರಿಷತ್ ಶಾಸಕರಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್ ಪಿ.ಗಾದೆಪ್ಪ, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯುಲು, ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತದ ಉಪಾಧ್ಯಕ್ಷ ಹೆಚ್.ಲಕ್ಷö್ಮಣ್, ಬಳ್ಳಾರಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ, ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ ನಾಯಕ್ ಸೇರಿದಂತೆ ಇತರರು ಉಪಸ್ಥಿತರಿರುವರು. ಕಾರ್ಯಕ್ರಮದಲ್ಲಿ ಸಾಧನೆಗೈದ ವಿಕಲಚೇತನರಿಗೆ ಸನ್ಮಾನ ಮತ್ತು ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪಧೆಗಳಲ್ಲಿ ವಿಜೇತರಾದ ವಿಕಲಚೇತನರಿಗೆ ಬಹುಮಾನ ವಿತರಣೆ ಮಾಡಲಾಗುವುದು ಎಂದು ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಕಲ್ಯಾಣಾಧಿಕಾರಿ ಗೋವಿಂದಪ್ಪ ಹೆಚ್.ಎಂ ಅವರು ತಿಳಿಸಿದ್ದಾರೆ. ------------------

ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯಲ್ಲಿ ಎರಡು ದಿನಗಳ ಉಪನ್ಯಾಸ | ಸರಣಿ ವಿದ್ಯಾರ್ಥಿಗಳು ಜ್ಞಾನ ವೃದ್ಧಿಸಿಕೊಳ್ಳಿ: ಪ್ರೊ.ಜಿ.ಪಿ ದಿನೇಶ್

ಬಳ್ಳಾರಿ,ನ.29(ಕರ್ನಾಟಕ ವಾರ್ತೆ): ಶೈಕ್ಷಣಿಕ ಹಾಗೂ ಸಂಶೋಧನಾ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳು ಉಪನ್ಯಾಸಗಳಲ್ಲಿ ಭಾಗವಹಿಸುವುದರಿಂದ ಜ್ಞಾನ ವೃದ್ಧಿಯಾಗುತ್ತದೆ ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಪ್ರಭಾರ ಕುಲಸಚಿವರಾದ ಪ್ರೊ.ಜಿ.ಪಿ ದಿನೇಶ್ ಅವರು ಹೇಳಿದರು. ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ರಸಾಯನಶಾಸ್ತç ವಿಭಾಗದಲ್ಲಿ ‘ರಾಸಾಯನಿಕ ವಿಜ್ಞಾನದ ಇತ್ತೀಚಿನ ಪ್ರವೃತ್ತಿಗಳ ಕುರಿತು ಎರಡು ದಿನಗಳ ಹಳೆಯ ವಿದ್ಯಾರ್ಥಿಗಳ ಉಪನ್ಯಾಸ ಸರಣಿಗಳು’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಉಪನ್ಯಾಸ ಸರಣಿಗಳಿಂದ ಸಮಗ್ರ ವಾತಾವರಣವನ್ನು ಒದಗಿಸಿಕೊಳ್ಳಬಹುದು. ವಿದ್ಯಾರ್ಥಿಗಳ ಸಕ್ರಿಯ ಭಾಗವಹಿಸುವಿಕೆಯಿಂದ ಪ್ರಸ್ತುತ ವಿದ್ಯಾರ್ಥಿ ಹಾಗೂ ಸಂಸ್ಥೆಯ ಅಭಿವೃದ್ಧಿಗೆ ಶ್ರಮಿಸಿದಂತಾಗುತ್ತದೆ. ಸಮಾಜಕ್ಕೆ ಶೈಕ್ಷಣಿಕ ಸೇವೆಯನ್ನು ಒದಗಿಸುವ ಮೂಲಕ ಜವಾಬ್ದಾರಿಯುತ ಸ್ಥಾನ ಪಡೆಯಬಹುದು ಎಂದು ಮಾತನಾಡಿದರು. ಮೌಲ್ಯಮಾಪನ ಕುಲಸಚಿವರಾದ ಪ್ರೊ.ಎನ್.ಎಮ್ ಸಾಲಿ ಮಾತನಾಡಿ, ಹಳೆಯ ವಿದ್ಯಾರ್ಥಿಗಳ ಸಂಘವು ವಿದ್ಯಾರ್ಥಿ ಮತ್ತು ಶಿಕ್ಷಣ ಸಂಸ್ಥೆಯ ನಡುವೆ ಬಲವಾದ ಬಾಂಧವ್ಯ ಸ್ಥಾಪಿಸಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳಿಗೆ ವಿಚಾರ ವಿನಿಮಯಕ್ಕಾಗಿ ಸೂಕ್ವವಾದ ವೇಧಿಕೆ ಒದಗಿಸಿದಂತಾಗುತ್ತದೆ. ಶೈಕ್ಷಣಿಕ ಪ್ರಗತಿಯ ಜೊತೆಗೆ ದೇಶವನ್ನು ರೂಪಿಸಲು ಸಹಕಾರಿಯಾಗುತ್ತದೆ ಎಂದರು. ಕಾರ್ಯಕ್ರಮದಲ್ಲಿ ಶುದ್ಧ ವಿಜ್ಞಾನ ವಿಭಾಗದ ಡೀನ್ ಪ್ರೊ.ಖಡ್ಕೆ ಉದಯ ಕುಮಾರ್, ಕಾರ್ಯಕ್ರಮ ಸಂಚಾಲಕರಾದ ಪ್ರೊ.ಕೆ.ಎಸ್ ಲೋಕೇಶ್, ಸಹ ಸಂಚಾಲಕ ಡಾ.ಸಾದು ಸೂರ್ಯಕಾಂತ ಎಸ್., ಪ್ರೊ.ಅರುಣ್‌ಕುಮಾರ ಲಗಶೆಟ್ಟಿ ಉಪಸ್ಥಿತರಿದ್ದರು. ಎರಡು ದಿನಗಳ ಹಳೆಯ ವಿದ್ಯಾರ್ಥಿಗಳ ಉಪನ್ಯಾಸ ಸರಣಿಯಲ್ಲಿ ವಿಭಾಗದ ಸುಮಾರು 100 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. --------------

ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್‌ನಲ್ಲಿ ತರಬೇತಿ: ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ,ನ.29(ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದಿAದ ಕಾಯನಿರ್ವಹಿಸುವ ಕಲಬುರಗಿಯ ಕರ್ನಾಟಕ ಇನ್‌ಸ್ಟಿಟ್ಯೂಟ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಸಂಸ್ಥೆಯಲ್ಲಿ ತರಬೇತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಈ ಸಂಸ್ಥೆಯ ಮೂಲಕ ಸಹಕಾರ ಸಂಘ ಸಂಸ್ಥೆ, ಸಹಕಾರ ಇಲಾಖೆ, ಸಹಕಾರ ಲೆಕ್ಕಪರಿಶೋಧನಾ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಹಾಗೂ ಖಾಸಗಿ ಅಭ್ಯರ್ಥಿಗಳಿಗೆ 6 ತಿಂಗಳು/180 ದಿನಗಳ ಅವಧಿಯ ‘ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್’ ತರಬೇತಿ ನೀಡಲಾಗುತ್ತಿದ್ದು, 2026ರ ಜನವರಿಯಿಂದ ಪ್ರಾರಂಭವಾಗಲಿವೆ. ತರಬೇತಿ ಪಡೆಯಲಿಚ್ಛಿಸುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ತರಬೇತಿ ಪಡೆಯಲಿಚ್ಚಿಸುವ ಅಭ್ಯರ್ಥಿಗಳು ಸಹಕಾರ ಸಂಘ, ಸಹಕಾರ ಇಲಾಖೆ, ಸಹಕಾರ ಲೆಕ್ಕಪರಿಶೋಧನಾ ಇಲಾಖೆಯಲ್ಲಿ ವೇತನ ಪಡೆಯುವ ನೌಕರರಾಗಿರಬೇಕು. ಖಾಸಗಿ ಅಭ್ಯರ್ಥಿಗಳಿಗೆ ನಿಯಮಿತವಾಗಿ ಅವಕಾಶ ಕಲ್ಪಿಸಲಾಗಿದೆ. ವಯೋಮಿತಿ 16 ವರ್ಷ ದಾಟಿದವರಾಗಿರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಶೇ.18 ರಷ್ಟು ಸ್ಥಾನಗಳನ್ನು ತರಬೇತಿಗಾಗಿ ಮೀಸಲಿರಿಸಲಾಗಿದೆ. ಕನಿಷ್ಟ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿ, ಸಹಕಾರಿ ಸಂಘಗಳಲ್ಲಿ ಒಂದು ವರ್ಷಕ್ಕಿಂತ ಮೇಲ್ಪಟ್ಟು ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯೂ ಸಹ ತರಬೇತಿ ಪಡೆಯಲು ಅರ್ಹರಾಗಿರುತ್ತಾರೆ. ಈ ತರಬೇತಿಯಲ್ಲಿ ಅಭ್ಯರ್ಥಿಗಳಿಗೆ ಮಾಹೆಯಾನ ರೂ.500 ಶಿಷ್ಯವೇತನ ನೀಡಲಾಗುವುದು. ನಿರುದ್ಯೋಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ “6 ತಿಂಗಳು/180 ದಿನಗಳ ವಿಶೇಷ “ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್” ತರಬೇತಿಯನ್ನು ಸಹ ನೀಡಲಾಗುವುದು. ಈ ವರ್ಗಕ್ಕೆ ಸೇರಿದ ಅಭ್ಯರ್ಥಿಗಳ ಪಟ್ಟಿಯನ್ನು ಆಯಾ ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕರವರ ಮೂಲಕ ಅಥವಾ ವ್ಯವಸ್ಥಾಪಕ ನಿರ್ದೇಶಕರು, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ಗಳ ಮೂಲಕ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಕನಿಷ್ಠ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ವಯೋಮಿತಿ 16 ವರ್ಷಗಳಾಗಿರಬೇಕು. ಗರಿಷ್ಠ 30 ವರ್ಷಗಳು ಮೀರಿರಬಾರದು. ಈ ಅಭ್ಯರ್ಥಿಗಳಿಗೆ ಮಾಹೆಯಾನ ರೂ.600 ಶಿಷ್ಯವೇತನ ನೀಡಲಾಗುವುದು. ಡಿ.ಸಿ.ಎಂ ತರಬೇತಿಯ ಅರ್ಜಿ ನಮೂನೆ ಮತ್ತು ವಿವರಣಾ ಪುಸ್ತಕವನ್ನು ಕಲಬುರಗಿ ತರಬೇತಿ ಸಂಸ್ಥೆಯಿAದ ಹಾಗೂ ತರಬೇತಿ ಸಂಸ್ಥೆಯ ಕಾರ್ಯವ್ಯಾಪ್ತಿಯಲ್ಲಿ ಬರುವ ಜಿಲ್ಲಾ ಸಹಕಾರ ಯೂನಿಯನ್‌ಗಳಲ್ಲಿ (ಬೀದರ, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ ಮತ್ತು ಹೊಸಪೇಟೆ) ಪಡೆಯಬಹುದು. *ಅರ್ಜಿ ಪಡೆಯುವ ಮತ್ತು ಕಳುಹಿಸುವ ವಿಳಾಸ:* ಪ್ರಾಂಶುಪಾಲರು, ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್, ಆದರ್ಶನಗರ, ಪ್ರಗತಿ ಕಾಲೋನಿ, ಸೇಡಂ ರಸ್ತೆ, ಕಲಬುರಗಿ-585105. ಹೆಚ್ಚಿನ ಮಾಹಿತಿಗಾಗಿ ದೂ.08472-245340, ಮೊ.9916726886, ಮೊ.9742307153, ಮೊ.9113916753 ಗೆ ಸಂಪರ್ಕಿಸಬಹುದು ಎಂದು ಕಲಬುರಗಿ ತರಬೇತಿ ಸಂಸ್ಥೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------------

ಶುಕ್ರವಾರ, ನವೆಂಬರ್ 28, 2025

ಉದ್ದಿಮೆಗಳ ಕುರಿತು ಅರಿವು ಅಗತ್ಯ: ಸುಧಾಕರ್

ಬಳ್ಳಾರಿ,ನ.28(ಕರ್ನಾಟಕ ವಾರ್ತೆ): ಟ್ರೇಡ್ಸ್ ಅಂಡ್ ರಿಸಿವಿಲ್ಸ್ ಕುರಿತು ಪ್ರತಿಯೊಬ್ಬ ಸಣ್ಣ, ಅತಿ ಸಣ್ಣ ಗುಡಿ ಕೈಗಾರಿಕೆ ಉದ್ದಿಮೆದಾರರಿಗೆ ಅರಿವು ಮೂಡಿಸುವುದು ಅವಶ್ಯಕವಾಗಿದೆ ಎಂದು ಸುಧಾಕರ್ ಪೈಪ್ಸ್ ಲಿ. ನ ಮ್ಯಾನೇಜಿಂಗ್ ಡೈರೆಕ್ಟರ್ ಸುಧಾಕರ್ ಅವರು ಹೇಳಿದರು. ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರದ ವತಿಯಿಂದ ಆರ್‌ಎಎಂಪಿ ಯೋಜನೆಯಡಿ ನಗರದ ಕೌಲ್ ಬಜಾರ್ ನ ಮೊಹಮ್ಮದೀಯ ಕಾಲೇಜು ಬಳಿಯ ಗಾರ್ಮೆಂಟ್ ರಿಸರ್ಚ್ ಟ್ರೆöÊನಿಂಗ್ ಡಿಸೈನ್ ಎಂಡ್ ಡೆವಲಪ್ಮೆಂಟ್ ಸೆಂಟ್ (ಜಿಆರ್‌ಟಿಡಿಎಸ್)ನ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಟ್ರೇಡ್ಸ್ ಹಾಗೂ ಪರಿಸರ ನಿರ್ವಹಣೆ (ಇಎಸ್‌ಎಂ) ಕುರಿತು ಹಮ್ಮಿಕೊಂಡಿರುವ ಯೋಜನೆಯ ಕುರಿತು ಒಂದು ದಿನದ ಜಾಗೃತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಫ್ಯಾಕ್ಟರಿಸ್ ಅಂಡ್ ಬಾಯಿರ‍್ಸ್ ನ ಹಿರಿಯ ಸಹಾಯಕ ನಿರ್ದೇಶಕ ಡಿ.ವರುಣ್ ಅವರು ಮಾತನಾಡಿ, ಪರಿಸರ ನಿರ್ವಹಣೆಯ ಕುರಿತು ಪ್ರತಿಯೊಬ್ಬ ಉದ್ದಿಮೆದಾರರಿಗೆ ತಾವು ತಯಾರಿಸುವ ವಸ್ತುಗಳ ಕುರಿತು ಅರಿವು ಹೊಂದುವುದು ಅತ್ಯಾವ್ಯಶಕವಾಗಿದೆ ಎಂದು ಹೇಳಿದರು. ಜಿಆರ್‌ಟಿಡಿಎಸ್ ಪ್ರಾಂಶುಪಾಲರಾದ ಬಿಂದು ಅವರು ಮಾತನಾಡಿ, ಯುವ ಉದ್ದಿಮೆದಾರರು ಫ್ಯಾಷನ್ ವಸ್ತçಗಳ ಕುರಿತು ಟ್ರೇಡ್ಸ್ ಹಾಗೂ ಇಎಸ್‌ಎಂ ಯೋಜನೆಗಳ ಉಪಯೋಗವನ್ನು ಪಡೆದುಕೊಳ್ಳಲು ಕೋರಿದರು. ಕಾರ್ಯಾಗಾರದಲ್ಲಿ ಉದ್ದಿಮೆದಾರರು ಭಾಗವಹಿಸಿದ್ದರು, ಟ್ರೇಡ್ಸ್ ಹಾಗೂ ಪರಿಸರ ನಿರ್ವಹಣೆ (ಇಎಸ್‌ಎಂ) ಸೌಲಭ್ಯಗಳು, ಯಶಸ್ಸಿನ ಕಥೆಗಳ ಬಗ್ಗೆ ಅರಿವು ಮೂಡಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಬಿ.ಸೋಮೇಶೇಖರ್, ಟ್ರೇಡ್ಸ್ ಸಂಪನ್ಮೂಲ ವ್ಯಕ್ತಿಗಳಾಗಿ ಬಾಲಚಂದ್ರ, ಮಂಜುನಾಥ ಬೊಳ್ಳೊಳ್ಳಿ, ಜಿಆರ್‌ಟಿಡಿಸಿಯ ಪಂಪನಗೌಡ ಸೇರಿದಂತೆ ಉದ್ದಿಮೆದಾರರು ಉಪಸ್ಥಿತರಿದ್ದರು. --------------

ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿ: ಎರಡು ದಿನಗಳ ಯುವಜನೋತ್ಸವಕ್ಕೆ ಚಾಲನೆ | ಯುವ ಸಮುದಾಯ ತಮ್ಮಲ್ಲಿನ ಪ್ರತಿಭೆ ವಿನಿಮಯ ಮಾಡಿಕೊಳ್ಳಿ: ಪಿ.ಗಾದೆಪ್ಪ

ಬಳ್ಳಾರಿ,ನ.28(ಕರ್ನಾಟಕ ವಾರ್ತೆ): ವಿದ್ಯಾರ್ಥಿಗಳಿಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ವರದಾನವಾಗಿವೆ. ಯುವಕರು ತಮ್ಮಲ್ಲಿರುವ ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಪ್ರತಿಭೆಗಳನ್ನು ವಿನಿಮಯ ಮಾಡಿಕೊಳ್ಳಬೇಕು ಎಂದು ಬಳ್ಳಾರಿ ಮಹಾನಗರ ಪಾಲಿಕೆಯ ಮಹಾಪೌರರಾದ ಪಿ.ಗಾದೆಪ್ಪ ಹೇಳಿದರು. ಇಲ್ಲಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಡಾ. ಬಿ.ಆರ್. ಅಂಬೇಡ್ಕರ್ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಎರಡು ದಿನಗಳ ‘ಅಂತರ ವಿಭಾಗೀಯ ಯುವಜನೋತ್ಸವ 2025’ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ, ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಜೀವನದಲ್ಲಿ ಹಲವಾರು ಮಜಲುಗಳನ್ನು ದಾಟಿ ಗುರಿ ಮುಟ್ಟಬೇಕಾಗುತ್ತದೆ. ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವAತಹ ಶಕ್ತಿ ಯುವಕರಲ್ಲಿದೆ. ಯುವಕರು ಸಮಯವನ್ನು ಒಳ್ಳೆಯ ವಿಚಾರಗಳಿಗಾಗಿ ಮೀಸಲಿಡಬೇಕು. ಪಠ್ಯಪುಸ್ತಕದ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ವಿದ್ಯಾರ್ಥಿಗಳನ್ನು ಭೌತಿಕವಾಗಿಯೂ ಮತ್ತು ಮಾನಸಿಕವಾಗಿಯೂ ಸದೃಢರನ್ನಾಗಿ ಮಾಡುತ್ತದೆ ಎಂದು ಹೇಳಿದರು. ವಿವಿಯ ಕುಲಪತಿಗಳಾದ ಪ್ರೊ. ಎಂ ಮುನಿರಾಜು ವರ್ಚುವಲ್ ಮುಖಾಂತರ ಕಾರ್ಯಕ್ರಮದ ಅಧ್ಯಕ್ಷತೆಯಲ್ಲಿ ಮಾತನಾಡಿ, ವಿದ್ಯಾರ್ಥಿಗಳಿಗೆ ಪಠ್ಯೇತರ ಚಟುವಟಿಕೆಗಳನ್ನು ಹೊರತುಪಡಿಸಿ ಮಾನವಿಯ ಮೌಲ್ಯಗಳು, ವೈಚಾರಿಕ ಚಿಂತನೆಗಳನ್ನು ಬೆಳೆಸುವುದು. ವಿಶ್ವವಿದ್ಯಾಯದಲ್ಲಿ ಒಳ್ಳೆಯ ವಾತಾವರಣ ನಿರ್ಮಾಣ ಮಾಡುವಲ್ಲಿ ಯುವಕರಿಗೆ ಅವಕಾಶ ಕಲ್ಪಿಸಿದಂತಾಗುತ್ತದೆ. ಯುವಜನೋತ್ಸವ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗುತ್ತವೆ ಎಂದರು. ವಿಶ್ವವಿದ್ಯಾಲಯದ ಪ್ರಭಾರ ಕುಲಸಚಿವರಾದ ಪ್ರೊ. ಜಿ ಪಿ ದಿನೇಶ್, ಮೌಲ್ಯಮಾಪನ ಕುಲಸಚಿವರಾದ ಪ್ರೊ. ಎನ್ ಎಮ್ ಸಾಲಿ ವೇದಿಕೆಯಲ್ಲಿದ್ದರು. ಕಾರ್ಯಕ್ರಮದ ಸಾಂಸ್ಕೃತಿಕ ಸಂಯೋಜಕರಾದ ಪ್ರೊ. ಶಿರಗಾನಹಳ್ಳಿ ಶಾಂತನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು. ಡಾ. ಕೆ. ಎಸ್ ಶಿವಪ್ರಕಾಶ ನಿರೂಪಿಸಿದರು. ಡಾ. ಅಣ್ಣಾಜಿ ಕೃಷ್ಣಾರೆಡ್ಡಿ ವಂದಿಸಿದರು. ಈ ವೇಳೆ ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಯೋಜಕರು, ಭೋದಕರು, ಸಂಶೋಧನಾ ವಿದ್ಯಾರ್ಥಿಗಳು, ಭೋದಕೇತರ ಸಿಬ್ಬಂದಿ, ಮತ್ತು ವಿದ್ಯಾರ್ಥಿಗಳು ಹಾಜರಿದ್ದರು. ------------

ಬಡಜನರು ಆರ್ಥಿಕ ಸ್ವಾವಲಂಬನೆ ಬದುಕು ನಡೆಸಲು ಬ್ಯಾಂಕ್‌ಗಳು ಸಹಕಾರಿಯಾಗಬೇಕು: ಸಂಸದ ಈ.ತುಕಾರಾಮ್

ಬಳ್ಳಾರಿ,ನ.28(ಕರ್ನಾಟಕ ವಾರ್ತೆ): ಬಡಜನರು ಆರ್ಥಿಕವಾಗಿ ಸ್ವಾವಲಂಬನೆ ಬದುಕು ನಡೆಸಲು ಬ್ಯಾಂಕ್‌ಗಳು ಸಹಕಾರಿಯಾಗಬೇಕು ಎಂದು ಬಳ್ಳಾರಿ ಲೋಕಸಭಾ ಕ್ಷೇತ್ರದ ಸಂಸದ ಈ.ತುಕಾರಾಮ್ ಅವರು ಹೇಳಿದರು. ಶುಕ್ರವಾರ ನಗರದ ಜಿಪಂ ನ ಹಳೆಯ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಬಳ್ಳಾರಿ ಜಿಲ್ಲಾ ಮಟ್ಟದ ಲೀಡ್ ಬ್ಯಾಂಕ್‌ನ ತ್ರೆöÊಮಾಸಿಕ ಜಿಲ್ಲಾ ಮಟ್ಟದ ಪರಿಶೀಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸರ್ಕಾರದಿಂದ ಜಾರಿಗೊಂಡಿರುವ ವಿವಿಧ ಜನಪರ ಯೋಜನೆಗಳ ಆರ್ಥಿಕ ಸೌಲಭ್ಯವನ್ನು ಬ್ಯಾಂಕ್‌ಗಳ ಮುಖಾಂತರ ನಿಗದಿತ ಕಾಲಮಿತಿಯಲ್ಲಿಯೇ ದೊರಕಿಸಿದರೆ ಫಲಾನುಭವಿಗಳಿಗೆ ಹೆಚ್ಚಿನ ಅನುಕೂಲವಾಗುತ್ತದೆ ಎಂದರು. ಬಡಜನರು ಹಾಗೂ ಯುವಕರು ಸ್ವಯಂ ಉದ್ಯೋಗ ಕೈಗೊಳ್ಳಲು ಬ್ಯಾಂಕ್‌ನವರ ಸರಿಯಾದ ಮಾರ್ಗದರ್ಶನ ಹಾಗೂ ಸಹಕಾರ ಅಗತ್ಯವಾಗಿದೆ. ಬ್ಯಾಂಕ್ ಗಳ ವಿಶ್ವಾಸಾರ್ಹತೆ ಹೆಚ್ಚಾಗುವ ರೀತಿಯಲ್ಲಿ ಬ್ಯಾಂಕ್ ಅಧಿಕಾರಿ ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ನಡೆದುಕೊಳ್ಳಬೇಕು ಎಂದರು. ಬಳ್ಳಾರಿ ಜಿಲ್ಲೆ ಕೃಷಿ ಮತ್ತು ಸಣ್ಣ ಉದ್ಯಮಗಳಿಗೆ ಪ್ರಧಾನ ಜಿಲ್ಲೆಯಾಗಿದ್ದು, ರೈತರಿಗೆ, ದುರ್ಬಲರಿಗೆ ಸಾಲ ನೀಡುವಾಗ ವಿನಾ ಕಾರಣ ವಿಳಂಬ ಮಾಡಬಾರದು ಹಾಗೂ ಅವರು ಸಹಾಯಧನಕ್ಕಾಗಿ ಸಲ್ಲಿಸುವ ಅರ್ಜಿಗಳನ್ನು ಸಹ ಯಾವುದೇ ಕಾರಣವಿಲ್ಲದೇ ತಿರಸ್ಕಾರ ಮಾಡುತ್ತಿದ್ದೀರಿ; ಇದು ಸರಿಯಾದ ನಡೆ ಅಲ್ಲ, ದುರ್ಬಲ ವರ್ಗದ ಸಣ್ಣ-ಪುಟ್ಟ ಉದ್ದಿಮೆಗಳಿಗೆ ಹೆಚ್ಚು ಪ್ರೋತ್ಸಾಹಿಸಬೇಕು ಎಂದರು. ಬ್ಯಾAಕ್ ಅಧಿಕಾರಿಗಳು ಪರಿಣಾಮಕಾರಿ ಅಭಿವೃದ್ಧಿಗಾಗಿ ಕ್ರಿಯಾಶೀಲರಾಗಿ ಕೆಲಸ ಮಾಡಬೇಕು. ವಿಶೇಷ ಆಸಕ್ತಿಯಿಂದ ಕೆಲಸ ನಿರ್ವಹಿಸಿದರೆ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯ ಒದಗಿಸಲು ಸಾಧ್ಯವಾಗುತ್ತದೆ ಎಂದು ಸಂಸದ ಈ.ತುಕಾರಾಮ್ ಅವರು ಕಿವಿಮಾತು ಹೇಳಿದರು. ಜಿಲ್ಲಾ ವ್ಯಾಪ್ತಿಯಲ್ಲಿರುವ ಎಲ್ಲಾ ಬ್ಯಾಂಕ್ ಗಳು ವಾರ್ಷಿಕವಾರು ಲಾಭಾಂಶ ಪಡೆಯುತ್ತಿದ್ದೀರಿ; ಜಿಲ್ಲೆಯ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಿಎಸ್‌ಆರ್ ಅನುದಾನ ನೀಡಬೇಕು. ಇದರಿಂದ ನಮ್ಮ ಜಿಲ್ಲೆಯ ಅಭಿವೃದ್ಧಿಗೊಳ್ಳಲಿದೆ. ಇದು ಕಡ್ಡಾಯವಾಗಬೇಕು. ಜಿಲ್ಲೆಯಲ್ಲಿ ಡಿಸಿ, ಜಿಪಂ ಸಿಇಒ ಅವರ ಆದೇಶದ ಮೇರೆಗೆ ಅನುದಾನ ಬಳಕೆಯಾಗಬೇಕು ಎಂದು ಅಧಿಕಾರಿಗಳಿಗೆ ಒತ್ತಿ ಹೇಳಿದರು. ಮೈಕ್ರೋ ಫುಡ್ ಪ್ರೊಸೆಸಿಂಗ್ ಎಂಟರ್‌ಪ್ರೆöÊಸಸ್ ಯೋಜನೆಯ ಪ್ರಧಾನಮಂತ್ರಿ ಔಪಚಾರಿಕೀಕರಣವು ಎಲ್ಲಾ ಅಸಂಘಟಿತ ಸೂಕ್ಷö್ಮ ಆಹಾರ ಸಂಸ್ಕರಣಾ ಘಟಕಗಳಿಗೆ ತಾಂತ್ರಿಕ, ವ್ಯಾಪಾರ ಮತ್ತು ಆರ್ಥಿಕ ಬೆಂಬಲವನ್ನು ನೀಡುತ್ತಿದ್ದು, ಇದನ್ನು ಜನರಿಗೆ ತಲುಪಿಸುವ ಕೆಲಸವಾಗಬೇಕಿದೆ ಎಂದರು. ಜಿಲ್ಲೆಯಲ್ಲಿ ಮೈಕ್ರೋ ಫುಡ್ ಪ್ರೊಸೆಸಿಂಗ್ ಎಂಟರ್‌ಪ್ರೆöÊಸಸ್ ಯೋಜನೆಯಡಿ ನೆರವು ಪಡೆಯಲು ಒಟ್ಟು 211 ಅರ್ಜಿಗಳು ಸಲ್ಲಿಕೆಯಾಗಿದ್ದು, ಇದರಲ್ಲಿ 76 ಮಂದಿಗೆ ಲೋನ್ ನೀಡಲಾಗಿದೆ. 26 ಅರ್ಜಿ ಬಾಕಿ ಇದ್ದು, 104 ಲೋನ್ ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ಯಾವ ಕಾರಣಕ್ಕಾಗಿ ತಿರಸ್ಕರಿಸಲಾಗಿದೆ? ಬ್ಯಾಂಕ್ ವಾರು ತಿರಸ್ಕರಿಸಿದ ಅರ್ಜಿಗಳ ಮಾಹಿತಿ ಎಲ್ಲಿ? ಇದರಿಂದ ಬಡವರ ಸಣ್ಣ ಉದ್ಯಮಗಳ ಮೇಲೆ ಪ್ರಭಾವ ಬೀರಲಿದ್ದು, ಇದು ಸಮಂಜಸವಾದುದಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಜಿಲ್ಲೆಯಲ್ಲಿ ಪ್ರಸಕ್ತ ವಾರ್ಷಿಕ ಸಾಲ ಯೋಜನೆಯಡಿ ಸೆಪ್ಟಂಬರ್ 2025 ರವರೆಗೆ ಕೃಷಿ, ಶಿಕ್ಷಣ, ವಸತಿ, ಕೈಗಾರಿಕೆ, ಸಾಮಾಜಿಕ ಬೆಳವಣಿಗೆ ಸೇರಿದಂತೆ ಆದ್ಯತಾ ವಲಯಕ್ಕೆ ಮಂಜೂರು ಮಾಡಿರುವ ಅನುದಾನವನ್ನು ನಿಗದಿತ ಕಾಲಾವಧಿಯೊಳಗೆ ಗುರಿ ತಲುಪಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು. ಪಿಎಂ ವಿಶ್ವಕರ್ಮ ಯೋಜನೆಯ ಕುರಿತು ಜನರಿಗೆ ಅರಿವು ಮಾಹಿತಿ ಕೊರತೆ ಇದೆ, ಈ ಸೌಲಭ್ಯ 2028 ಕ್ಕೆ ಮುಕ್ತಾಯಗೊಳ್ಳಲಿದ್ದು, ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕಿದೆ ಎಂದರಲ್ಲದೇ, ಈಗಾಗಲೇ ಲೋನ್ ಪಡೆದವರ ಬ್ಯಾಂಕ್ ಖಾತೆಗಳಿಂದ ರಾಜ್ಯ ಸರ್ಕಾರದ ಗೃಹಲಕ್ಷಿö್ಮ ಹಣ ಖಾತೆಗಳಿಗೆ ಜಮಾವಣೆ ಸಂದರ್ಭದಲ್ಲಿ ಸ್ವಯಂಚಾಲಿತವಾಗಿ ಕಡಿತಗೊಳ್ಳುತ್ತಿದ್ದು, ಇದನ್ನು ಪರ್ಯಾಯವಾಗಿ ತಡೆಹಿಡಿಯಬೇಕು. ಆ ರೀತಿಯಾಗಿ ಕಡಿತ ಮಾಡುವಂತಿಲ್ಲ ಎಂದು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ಮಾತನಾಡಿ, ಪ್ರಧಾನಮಂತ್ರಿ ಸೂರ್ಯ ಘರ್ ಮಫ್ತ್ ಬಿಜ್ಲಿ ಯೋಜನೆಯಡಿ ಅರ್ಹರು ಸೌರಫಲಕ ಅಳವಡಿಸಿಕೊಳ್ಳುವವರಿಗೆ ಸೌಲಭ್ಯ ನೀಡಬೇಕು. ರಾಜ್ಯ ಸರ್ಕಾರದ ಗೃಹಜ್ಯೋತಿ ಯೋಜನೆಯಡಿ 200 ಯುನಿಟ್ ಗಿಂತ ಹೆಚ್ಚು ವಿದ್ಯುತ್ ಬಳಕೆ ಮಾಡುವವರಿಗೆ ಅನುಕೂಲವಾಗಲಿದೆ ಎಂದು ಹೇಳಿದರು. ಇದೇ ವೇಳೆ ಉದ್ಯೊಗಿನಿ, ಪಿಎಂಇಜಿಪಿ, ಪಿಎಂ ಸ್ವನಿಧಿ ಸೇರಿದಂತೆ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿ ಮಾಹಿತಿ ಪಡೆದುಕೊಂಡರು. ಸಭೆಗೂ ಮುನ್ನ ವಿಶ್ವಕರ್ಮ ಯೋಜನೆಯಡಿ ಫಲಾನುಭವಿಗಳಿಗೆ ಕಿಟ್ ವಿತರಣೆ ಮಾಡಿದರು. ಪಿಎಂಎಫ್‌ಎAಇ ಯೋಜನೆಯಡಿ ನೋಂದಾಯಿಸಿಕೊAಡಿದ್ದವರಿಗೆ ಲೋನ್ ನೀಡಿರುವ ಆದೇಶ ಪ್ರತಿ ವಿತರಿಸಿದರು. ನಲ್ ಜಲ್ ಮಿತ್ರ ಕಾರ್ಯಕ್ರಮದಡಿ ಕಿಟ್ ಮತ್ತು ಆದೇಶ ಪ್ರತಿ ನೀಡಿದರು. ಈ ಸಂದರ್ಭದಲ್ಲಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಬೆಂಗಳೂರು ಎಜಿಎಂ ಅರುಣ್ ಕುಮಾರ್, ಕೆನರಾ ಬ್ಯಾಂಕ್ ನ ಪ್ರಾದೇಶಿಕ ವ್ಯವಸ್ಥಾಪಕ ಅರುಣ್ ಕುಮಾರ್ ಎ.ಜಿ., ಲೀಡ್ ಬ್ಯಾಂಕ್ ಮ್ಯಾನೇಜರ್ ಗಿರೀಶ್ ವಿ.ಕುಲಕರ್ಣಿ, ನಬಾರ್ಡ್ ನ ಎಜಿಎಂ ಯುವರಾಜ ಕುಮಾರ್ ಆರ್.ಎಸ್ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಬ್ಯಾಂಕ್ ಗಳ ಅಧಿಕಾರಿಗಳು ಹಾಜರಿದ್ದರು. ------------

ಜಿಲ್ಲಾ ಕಲಾ ಪ್ರತಿಭೋತ್ಸವದ ವಿವಿಧ ಸ್ಪರ್ಧೆಗಳ ವಿಜೇತರ ಪಟ್ಟಿ ಪ್ರಕಟ

ಬಳ್ಳಾರಿ,ನ.28(ಕರ್ನಾಟಕ ವಾರ್ತೆ): ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನ.27, 28 ರಂದು ಎರಡು ದಿನಗಳ ಕಾಲ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರ ಹಾಗೂ ಸಾಂಸ್ಕೃತಿಕ ಸಮುಚ್ಚಯದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕಲಾ ಪ್ರತಿಭೋತ್ಸವದ ಬಾಲ ಪ್ರತಿಭೆ, ಕಿಶೋರ ಪ್ರತಿಭೆ, ಯುವ ಪ್ರತಿಭೆ (ಏಕ ವ್ಯಕ್ತಿ) ಮತ್ತು ನಾಟಕ-ಸಮೂಹÀ ಕಲಾ ಪ್ರಕಾರದಲ್ಲಿ ನಡೆದ ಸ್ಪರ್ಧೆಗಳಲ್ಲಿ ಪ್ರಥಮ, ದ್ವೀತಿಯ ಹಾಗೂ ತೃತೀಯ ಸ್ಥಾನ ಪಡೆದ ವಿಜೇತರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ. *ವಿಜೇತರ ಪಟ್ಟಿ:* ಬಾಲಪ್ರತಿಭೆ ವಿಭಾಗ: ಶಾಸ್ತಿçÃಯ ನೃತ್ಯ ಸ್ಪರ್ಧೆಯಲ್ಲಿ ಪ್ರಥಮ ಬಳ್ಳಾರಿಯ ದೀಕ್ಷಾ ಯಂಡಿಗೇರಿ, ದ್ವೀತಿಯ ಗುಣಸಿಂಧು ಕೆ, ತೃತೀಯ ಹಾರಿಕ ಜಕ್ಕಾ. ಸುಗಮ ಸಂಗೀತ ಸ್ಪರ್ಧೆಯಲ್ಲಿ ಪ್ರಥಮ ಬಳ್ಳಾರಿಯ ಎಂ.ಕೆ.ಸಿAಚನ, ದ್ವೀತಿಯ ಸಮನ್ವಿತ.ಸಿ.ಎಂ., ತೃತೀಯ ಜಯಂತ್.ವೈ. ಜಾನಪದ ಗೀತೆ ಸ್ಪರ್ಧೆಯಲ್ಲಿ ಪ್ರಥಮ ಸಂಡೂರಿನ ಸುಪ್ರಿಯಾ, ದ್ವೀತಿಯ ಕುರುಗೋಡಿನ ಎಚ್.ವಿ.ಗಾಯಿತ್ರಿ, ತೃತೀಯ ಸಂಡೂರು ತಾಲ್ಲೂಕಿನ ತಾರನಗರದ ಎ.ಕೆ.ಕುಶಾಲ್ ಕುಮಾರ್. ಚಿತ್ರಕಲಾ (ಸ್ವಕಲ್ಪಿತ) ಸ್ಪರ್ಧೆಯಲ್ಲಿ ಪ್ರಥಮ ಸಂಡೂರಿನ ಪ್ರತ್ಯೂಶಾ ಎಂ.ಎA., ದ್ವೀತಿಯ ಬಳ್ಳಾರಿಯ ಅನ್ ಮರಿಯ ಕೆ.ಟಿ., ತೃತೀಯ ಕುರುಗೋಡಿನ ಶ್ರೀರಕ್ಷಾ. ಹಿಂದೂಸ್ತಾನಿ/ಕರ್ನಾಟಕ ಶಾಸ್ತಿçÃಯ ವಾದ್ಯ ಸ್ಪರ್ಧೆಯಲ್ಲಿ ಪ್ರಥಮ ಬಳ್ಳಾರಿಯ ಕವೀಂದ್ರ ಜೆ., ದ್ವೀತಿಯ ವೈಭವಮೂರ್ತಿ ವಿ., ತೃತೀಯ ಸಂಡೂರಿನ ಅಧಿತಿ ಆರ್.ವಿ. ಹಿಂದೂಸ್ತಾನಿ/ ಕರ್ನಾಟಕ ಶಾಸ್ತಿçÃಯ ಸಂಗೀತ ಸ್ಪರ್ಧೆಯಲ್ಲಿ ಪ್ರಥಮ ಬಳ್ಳಾರಿಯ ಜಯಲಕ್ಷಿö್ಮà ಎಂ.ಎಸ್., ದ್ವೀತಿಯ ಕಂಪ್ಲಿಯ ಕೆ.ಎಂ.ಶ್ರೀರಕ್ಷಾ, ತೃತೀಯ ಬಳ್ಳಾರಿಯ ಮನ್ವಿತ ಎ ಕರಾಂತ್. ಕಿಶೋರ ಪ್ರತಿಭೆ ವಿಭಾಗ: ಶಾಸ್ತಿçÃಯನೃತ್ಯ ಸ್ಪರ್ಧೆಯಲ್ಲಿ ಪ್ರಥಮ ಸಂಗನಕಲ್ಲಿನ ಹೆಚ್.ಎಂ.ಶುಭಾನ್ವಿತ, ದ್ವೀತಿಯ ಬಳ್ಳಾರಿಯ ದಾಸ ಪ್ರವಲ್ಲಿಕ, ತೃತೀಯ ದೇವಿರಮ್ಮ ಆರ್. ಸುಗಮ ಸಂಗೀತ ಸ್ಪರ್ಧೆಯಲ್ಲಿ ಪ್ರಥಮ ಕುರುಗೋಡಿನ ಕೆ.ಪ್ರೇಮ, ದ್ವೀತಿಯ ಕುರುಗೋಡು ತಾಲ್ಲೂಕಿನ ವದ್ದಟ್ಟಿಯ ಗೀತಾ, ತೃತೀಯ ಬಳ್ಳಾರಿಯ ಮೇಘನ ಕೆ.ಎಸ್. ಜಾನಪದ ಗೀತೆ ಸ್ಪರ್ಧೆಯಲ್ಲಿ ಪ್ರಥಮ ಕಂಪ್ಲಿ ತಾಲ್ಲೂಕಿನ ಮೆಟ್ರಿಯ ಮುದ್ದಮ್ಮ, ದ್ವೀತಿಯ ಕುರುಗೋಡಿನ ಹೆಚ್.ಶ್ವೇತಾ, ತೃತೀಯ ಕಾಕರ್ಲತೋಟದ ಸಹನಾ. ಚಿತ್ರಕಲಾ (ಸ್ವಕಲ್ಪಿತ) ಸ್ಪರ್ಧೆಯಲ್ಲಿ ಪ್ರಥಮ ಬಳ್ಳಾರಿಯ ಕಂಡಿ ಸ್ವಸ್ತಿಕಾ ರೆಡ್ಡಿ, ದ್ವೀತಿಯ ಸಾಯಿ ಭಾನು ಪ್ರಕಾಶ್.ಕೆ., ತೃತೀಯ ಕುರುಗೋಡಿನ ಸೃಷ್ಠಿ ಎಸ್ ಮೇಟಿ. ಹಿಂದೂಸ್ತಾನಿ/ಕರ್ನಾಟಕ ಶಾಸ್ತಿçÃಯ ವಾದ್ಯ ಸ್ಪರ್ಧೆಯಲ್ಲಿ ಪ್ರಥಮ ಬಳ್ಳಾರಿಯ ಕೊಳಗಲ್ ಮೇಧಾ ರಾಮ್, ದ್ವೀತಿಯ ಕುರುಗೋಡು ತಾಲ್ಲೂಕಿನ ದಮ್ಮೂರು ಕಗ್ಗಲ್‌ನ ಕೆ.ವೀರ ಪಂಚಾಕ್ಷರಿ, ತೃತೀಯ ಬಳ್ಳಾರಿಯ ಸುದರ್ಶನ್ ಟಿ. ಹಿಂದೂಸ್ತಾನಿ/ಕರ್ನಾಟಕ ಶಾಸ್ತಿçÃಯ ಸಂಗೀತ ಸ್ಪರ್ಧೆಯಲ್ಲಿ ಪ್ರಥಮ ಬಳ್ಳಾರಿಯ ಎನ್.ಆಯುಶ್, ದ್ವೀತಿಯ ಮೇಘನ ವಿ., ಯುವ ಪ್ರತಿಭೆ ವಿಭಾಗ: ಶಾಸ್ತಿçÃಯ ನೃತ್ಯ ಸ್ಪರ್ಧೆಯಲ್ಲಿ ಪ್ರಥಮ ಬಳ್ಳಾರಿಯ ಪಿ.ಭವ್ಯ, ದ್ವೀತಿಯ ಸುಪ್ರಿಯ, ತೃತೀಯ ಕಂಪ್ಲಿಯ ಎಸ್.ಸಂಗೀತ ಸನಾಪುರ. ಸುಗಮ ಸಂಗೀತ ಸ್ಪರ್ಧೆಯಲ್ಲಿ ಪ್ರಥಮ ಬಳ್ಳಾರಿಯ ಪುಟ್ಟರಾಜ ಹಿರೇಮಠ, ದ್ವೀತಿಯ ಸಂಡೂರು ತಾಲ್ಲೂಕಿನ ಬನ್ನಿಹಟ್ಟಿಯ ಶರಣಬಸವ ಹೆಚ್., ತೃತೀಯ ಸಂಡೂರಿನ ಮರಿಯಪ್ಪ ಡಿ. ಚಿತ್ರಕಲಾ (ಸ್ವಕಲ್ಪಿತ) ಸ್ಪರ್ಧೆಯಲ್ಲಿ ಪ್ರಥಮ ಬಳ್ಳಾರಿಯ ಮಂಗಲಿ ನರೇಂದ್ರ, ದ್ವೀತಿಯ ರಚನಾ, ತೃತೀಯ ಭಾರ್ಗವಿ. ಹಿಂದೂಸ್ತಾನಿ/ಕರ್ನಾಟಕ ಶಾಸ್ತಿçಯ ವಾದ್ಯ ಸ್ಪರ್ಧೆಯಲ್ಲಿ ಪ್ರಥಮ ಬಳ್ಳಾರಿ ಯೋಗೇಶ್ ಬಣಗಾರ. ಹಿಂದೂಸ್ತಾನಿ/ಕರ್ನಾಟಕ ಶಾಸ್ತಿçÃಯ ಸಂಗೀತ ಸ್ಪರ್ಧೆಯಲ್ಲಿ ಪ್ರಥಮ ಬಳ್ಳಾರಿಯ ತಸ್ಮಯ ಅನ್ನಪೂರ್ಣ, ದ್ವೀತಿಯ ಸಂಡೂರಿನ ಸೊಕ್ಕೆ ಸಿದ್ದೇಶ, ತೃತೀಯ ಬಳ್ಳಾರಿಯ ವರ್ಷ ಜೆ.ಸಿ. ನನ್ನ ಮೆಚ್ಚಿನ ಸಾಹಿತಿ (ಆಶು ಭಾಷಣ) ಸ್ಪರ್ಧೆಯಲ್ಲಿ ಪ್ರಥಮ ಸಂಡೂರಿನ ಗಂಗಾಬಿಕ, ದ್ವೀತಿಯ ಬಳ್ಳಾರಿಯ ಹೆಚ್.ಎನ್.ಚೈತ್ರ, ತೃತೀಯ ಸಂಡೂರಿನ ಕೃಷ್ಣವೇಣಿ. ಸಮೂಹ ಸ್ಪರ್ಧೆ ವಿಭಾಗ: ನಾಟಕ ಸ್ಪರ್ಧೆಯಲ್ಲಿ ಪ್ರಥಮ ಬಳ್ಳಾರಿಯ ಸ.ಸ.ಅ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಶ್ರೀಧರ ಎಂ.ಆರ್., ದ್ವೀತಿಯ ಸಿರುಗುಪ್ಪ ತಾಲ್ಲೂಕಿನ ಸಿರಿಗೇರಿಯ ಧಾತ್ರಿ ರಂಗ ಸಂಸ್ಥೆಯ ಜಿ.ಎಂ.ವಿಜಯಕುಮಾರ್, ವಿಜಯನಗರ ಶ್ರೀಕೃಷ್ಣ ದೇವರಾಯ ವಿವಿಯ ಅನಿಲ್ ಹೆಚ್ ತೃತೀಯ ಸ್ಥಾನ ಪಡೆದಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------------

ವೃತ್ತ ನಾಮಕರಣ, ಪುತ್ಥಳಿ ನಿರ್ಮಾಣ: ಆಕ್ಷೇಪಣೇಗಳಿಗೆ ಆಹ್ವಾನ

ಬಳ್ಳಾರಿ,ನ.28(ಕರ್ನಾಟಕ ವಾರ್ತೆ): ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ ನಂ.37 ರ ಎಸ್‌ಪಿ ವೃತ್ತಕ್ಕೆ ಶ್ರೀ ಮಹರ್ಷಿ ವಾಲ್ಮೀಕಿ ವೃತ್ತ ಎಂದು ನಾಮಕರಣ ಮಾಡಲು ಹಾಗೂ ವೃತ್ತದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಪುತ್ಥಳಿ ಸ್ಥಾಪನೆ ಮಾಡಲು ಉದ್ದೇಶಿಸಲಾಗಿದ್ದು, ಸಾರ್ವಜನಿಕರಿಂದ ಸಲಹೆ, ಆಕ್ಷೇಪಣೆಗಳಿದ್ದಲ್ಲಿ ಪ್ರಕಟಣೆಗೊಂಡ 30 ದಿನಗಳೊಳಗಾಗಿ ಲಿಖಿತವಾಗಿ ಮಹಾನಗರ ಪಾಲಿಕೆ ಕಚೇರಿಗೆ ಸಲ್ಲಿಸಬಹುದು. ನಿಗದಿತ ಅವಧಿಯೊಳಗೆ ಯಾವುದೇ ಆಕ್ಷೇಪಣೆಗಳು ಸಲ್ಲಿಕೆಯಾಗದೇ ಇದ್ದಲ್ಲಿ ಸರ್ಕಾರದ ಸುತ್ತೋಲೆಯ ಪ್ರಕಾರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------------

ಕನ್ನಡ ಮತ್ತು ಸಂಸ್ಕೃತಿ ಇಲಾಖೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ,ನ.28(ಕರ್ನಾಟಕ ವಾರ್ತೆ): ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 2025-26ನೇ ಸಾಲಿನ ಸಾಮಾನ್ಯ, ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡ ಉಪಯೋಜನೆಯಡಿ ನೋಂದಾಯಿತ ಸಂಘ-ಸAಸ್ಥೆಗಳಿಗೆ ಧನಸಹಾಯ, ಕಲಾವಿದರಿಗೆ ವಾದ್ಯ ಪರಿಕರ ಮತ್ತು ವೇಷ ಭೂಷಣಗಳ ಖರೀದಿಗೆ ಹಾಗೂ ಚಿತ್ರಕಲೆ/ಶಿಲ್ಪ ಕಲಾಕೃತಿಗಳ ಪ್ರದರ್ಶನಕ್ಕೆ ಸಹಾಯಧನ ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ. ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿ ಕ್ರಿಯಾತ್ಮಕ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ, ನೃತ್ಯ ಕಲಾ ಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯ ನಿರ್ವಹಿಸುತ್ತಿರುವ ನೋಂದಾಯಿತ ಸಂಘ-ಸAಸ್ಥೆಗಳು, ಕಲಾವಿದರು ಆನ್‌ಲೈನ್ ವೆಬ್‌ಸೈಟ್ Sevasindhu.karnataka.gov.in ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಡಿ.30 ಕೊನೆಯ ದಿನವಾಗಿದೆ. ಸರ್ಕಾರದ ಆದೇಶ ಸಂಖ್ಯೆ ಕಸಂವಾ 280 ಕಸದ 2024 (ಭಾ-1) ಅ.31 ರ ದಿನಾಂಕದ ಮಾರ್ಗಸೂಚಿಯನ್ನು ಸೇವಾಸಿಂಧು ಪೋರ್ಟಲ್ ಹಾಗೂ ಇಲಾಖೆಯ ವೆಬ್‌ಸೈಟ್ www.kannadasiri.karnataka.gov.in ನಲ್ಲಿ ನೋಡಬಹುದು. ನಿಗದಿತ ದಿನಾಂಕದ ನಂತರ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಹಾಗೂ ಅರ್ಜಿಗಳನ್ನು ನೇರವಾಗಿ ಇಲಾಖೆಯಲ್ಲಿ ಸ್ವೀಕರಿಸುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಡಾ.ರಾಜ್ ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಚಯ ಆವರಣದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಅಥವಾ ದೂ.08932-275182, 08024-410547, 08022-213530, 08022-241325, ಮೊ.8792662814, 8792662816, 9986837037, 9900337738, 9448436877, 9480197511, 9916600027 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -----------

ಡಿ.02 ರಂದು ಜಿಲ್ಲಾ ಮಟ್ಟದ ಟಾಸ್ಕ್ ಪೋರ್ಸ್ ಸಭೆ

ಬಳ್ಳಾರಿ,ನ.28(ಕರ್ನಾಟಕ ವಾರ್ತೆ): ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ, ಕೆ.ಪಿ.ಎಂ.ಇ ಕಾಯ್ದೆ, ಜಿಲ್ಲಾ ಅಂಧತ್ವ ನಿವಾರಣಾ ಕಾರ್ಯಕ್ರಮಗಳ ಕುರಿತು ವಿವಿಧ ಇಲಾಖೆಗಳ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಟಾಸ್ಕ್ ಪೋರ್ಸ್ ಸಭೆಯನ್ನು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಡಿ.02 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ ಬಾಬು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------------

ಬಳ್ಳಾರಿ ನಗರ: ನ.30 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ,ನ.28(ಕರ್ನಾಟಕ ವಾರ್ತೆ): ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1ರ ವ್ಯಾಪ್ತಿಯ 110/11 ಕೆ.ವಿ ಸೌತ್ ವಿದ್ಯುತ್ ವಿತರಣಾ ಕೇಂದ್ರÀದಲ್ಲಿ ತುರ್ತು ತ್ರೆöÊಮಾಸಿಕ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುರಿಂದÀ ನ.30 ರಂದು ಬೆಳಿಗ್ಗೆ 09 ಗಂಟೆಯಿAದ 06 ಗಂಟೆಯವರೆಗೆ ಎಫ್-23, ಎಫ್-24, ಎಫ್-25, ಎಫ್-46, ಎಫ್-47, ಎಫ್-48 ಫೀಡರ್‌ಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು: ಬೆಂಗಳೂರು ರಸ್ತೆ, ಅಂದ್ರಾಳ್ ರಸ್ತೆ, ಕೊಲಮಿ ಚೌಕ್, ಕಾರ್ಕಲ ತೋಟ, ಬಾಪೂಜಿ ನಗರ, ಮಿಲ್ಲರ್ ಪೇಟೆ, ಮೋತಿ ವೃತ್ತ, ತೇರು ಬೀದಿ, ಇಂಡಸ್ಟಿçಯಲ್ ಏರಿಯಾ ಹಂತ-1, ಮಹೇಶ್ ಪೈಪ್ಸ್, ಲಾರಿ ಟರ್ಮಿನಲ್, ಜೈನ್ ಮಾರ್ಕೆಟ್, ಸಾಯಿ ಕಾಲೋನಿ, ಎಪಿಎಮ್‌ಪಿ, ಮರಿಸ್ವಾಮಿ ಮಠ, ದೊಡ್ಡ ಮಾರ್ಕೆಟ್, ತೋಪಿಗಲ್ಲಿ, ಬೊಮ್ಮನಾಳ್ ರೋಡ್ ಸೇರಿದಂತೆ ಮುಂತಾದ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------------

ನ.30 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ,ನ.28(ಕರ್ನಾಟಕ ವಾರ್ತೆ): ಬಳ್ಳಾರಿ ಗ್ರಾಮೀಣ ಜೆಸ್ಕಾಂ ಕಾರ್ಯ ಮತ್ತು ಪಾಲನಾ ಉಪವಿಭಾಗ ವ್ಯಾಪ್ತಿಯಲ್ಲಿ 110/11 ಕೆ.ವಿ ದಕ್ಷಿಣ ಉಪ ವಿದ್ಯುತ್ ವಿತರಣಾ ಕೇಂದ್ರದ ಸ್ಥಳಾಂತರಿಸುವ ಕಾರ್ಯ ಕೈಗೊಳ್ಳುತ್ತಿರುವುರಿಂದÀ ನ.30 ರಂದು ಬೆಳಿಗ್ಗೆ 09 ಗಂಟೆಯಿAದ 05 ಗಂಟೆಯವರೆಗೆ 11 ಕೆ.ವಿ ಯ ಎಫ್-43 ಸಿದ್ಧಾಪುರ ರಸ್ತೆ ಕೈಗಾರಿಕಾ ಮಾರ್ಗದ ಟಪಾಲ್ ಸ್ಟೀಲ್, ಸಿದ್ಧಾಪುರ ರಸ್ತೆ, ಕೈಗಾರಿಕಾ ಪ್ರದೇಶ ಸೇರಿದಂತೆ ಮುಂತಾದ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------------

ಬಳ್ಳಾರಿ: ಬೈಪಾಸ್ ರಸ್ತೆ ಲೋಕಾರ್ಪಣೆಗೊಳಿಸಿ ಸಂಸದ ಈ.ತುಕಾರಾಮ್ ಹೇಳಿಕೆ | ಅಖಂಡ ಬಳ್ಳಾರಿ ಅಭಿವೃದ್ಧಿಯತ್ತ ಸಾಗುತ್ತಿದೆ

ಬಳ್ಳಾರಿ,ನ.28(ಕರ್ನಾಟಕ ವಾರ್ತೆ): ನಗರದ ಹೊರವಲಯದ ಹೊಸ ಬೈಪಾಸ್ ನ ವೇಣಿವೀರಾಪುರ ಹತ್ತಿರದ ರಾಷ್ಟ್ರೀಯ ಹೆದ್ದಾರಿ (ಎನ್‌ಹೆಚ್-67) ಯೋಜನೆಯಡಿ ವೇಣಿವೀರಾಪುರ ದಿಂದ ಹಗರಿ ವರೆಗೆ ನಿರ್ಮಿಸಲಾದ ಬಳ್ಳಾರಿ ಬೈಪಾಸ್ ರಸ್ತೆಯನ್ನು ಬಳ್ಳಾರಿ ಲೋಕಸಭಾ ಕ್ಷೇತ್ರದ ಸಂಸದ ಈ.ತುಕಾರಾಮ್ ಅವರು ಶುಕ್ರವಾರ ಲೋಕಾರ್ಪಣೆಗೊಳಿಸಿದರು. ಬಳಿಕ ಮಾತನಾಡಿದ ಅವರು, ಹೊಸಪೇಟೆಯಿಂದ ಆಂಧ್ರ-ಕರ್ನಾಟಕ ಗಡಿಭಾಗದ ವರೆಗೆ ಒಟ್ಟು 95.370 ಕಿ.ಮೀ ಉದ್ದದ ರಾಷ್ಟಿçÃಯ ಹೆದ್ದಾರಿ ರಸ್ತೆ ಇದಾಗಿದ್ದು, 830.28 ಕೋಟಿ ರೂ. ವೆಚ್ಚದ ಕಾಮಗಾರಿ ಇದಾಗಿದೆ. ಈಗಾಗಲೇ ಶೇ.78 ರಷ್ಟು ಕಾಮಗಾರಿ ಪೂರ್ಣಗೊಂಡಿದ್ದು, ಹೊಸಪೇಟೆ ಭಾಗದ ಭುವನಹಳ್ಳಿ, ವಡ್ಡರಹಳ್ಳಿ, ಗಾದಿಗನೂರು ಭಾಗದಲ್ಲಿ ಕಾಮಗಾರಿ ಇನ್ನು ಬಾಕಿ ಇದೆ, ಅದರಲ್ಲಿ ರೈಲ್ವೆ ಮೇಲ್ಸೇತುವೆ ಕಾಮಗಾರಿಯೂ ಒಳಗೊಂಡಿದೆ ಎಂದು ಹೇಳಿದರು. ನಗರದ ಸುಧಾಕ್ರಾಸ್ ಬಳಿಯ ಈಗಾಗಲೇ ಇದ್ದ ಅವೈಜ್ಞಾನಿಕ ಬೈಪಾಸ್ ರಸ್ತೆಯಿಂದ ಬಾರಿ ಗಾತ್ರದ ವಾಹನಗಳು ಸಂಚರಿಸುತ್ತಿದ್ದವು. ಇದರಿಂದ ಸಾರ್ವಜನಿಕರು ಸಂಚರಿಸಲು ಅಡಚಣೆ ಉಂಟಾಗುತ್ತಿತ್ತು. ಸುಮಾರು 25 ಕಿ.ಮೀ ಉದ್ದದ ಈ ಹೊಸ ಬೈಪಾಸ್ ರಸ್ತೆಯು ಆರಂಭಗೊಳ್ಳುವುದರಿAದ ಜನರಿಗೆ ಅನುಕೂಲವಾಗಲಿದೆ. ಹಾಗಾಗಿ ಮೊದಲು ಜಿಲ್ಲೆಯ ರಸ್ತೆಯ ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡಲಾಗಿದೆ ಎಂದು ಸಂಸದರು ಸ್ಪಷ್ಟಪಡಿಸಿದರು. ಅದೇರೀತಿಯಾಗಿ ನಗರದ ಹೊಸ ಬೈಪಾಸ್ ರಸ್ತೆಯಿಂದ ಸುಧಾಕ್ರಾಸ್ ಮೂಲಕ ಕೌಲ್ ಬಜಾರ್ ವರೆಗೆ 4ಲೇನ್ ರಸ್ತೆ ಮಾಡಲು ಈಗಾಗಲೇ ಡಿಪಿಆರ್ ಸಿದ್ದಗೊಳ್ಳುತ್ತಿದೆ. ಸುಂದರವಾದ ರಸ್ತೆ ನಿರ್ಮಾಣ ಮಾಡಲಾಗುವುದು ಮತ್ತು ಸುಧಾಕ್ರಾಸ್ ಬಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಈಗಾಗಲೇ ಆರಂಭಗೊAಡು ಪ್ರಗತಿಯಲ್ಲಿದೆ. ದುರ್ಗಮ್ಮ ಗುಡಿ ಬಳಿಯ ರೈಲ್ವೇ ಮೇಲ್ಸೇತುವೆ ಕಾಮಗಾರಿಗೆ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ರೈಲ್ವೇ ಇಲಾಖೆಗೆ ಈಗಾಗಲೇ 09 ಕೋಟಿ ರೂ. ನೀಡಿದ್ದು, ಈ ಕುರಿತು ಸಂಬAಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ತಿಳಿಸಿದರು. ಬಳ್ಳಾರಿಯಿಂದ ವೇಣಿ ವೀರಾಪುರ ಮೂಲಕ ಸಿರುಗುಪ್ಪ ರಸ್ತೆಗೆ ರಿಂಗ್ ರೋಡ್ ಮಾಡಲು ಡಿಪಿಆರ್ ಸಿದ್ಧಗೊಳ್ಳುತ್ತಿದೆ. 230 ಕೋಟಿ ರೂ. ವೆಚ್ಚದ ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಒಟ್ಟಾರೆಯಾಗಿ ಬಳ್ಳಾರಿಯಲ್ಲಿ ಪೂರ್ಣ ರಿಂಗ್ ರೋಡ್ ಮೂಲಕ ಅಖಂಡ ಬಳ್ಳಾರಿಯನ್ನು ಅಭಿವೃದ್ಧಿ ಪಡಿಸಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗುವುದು ಎಂದರು. ಕುಡತಿನಿ, ವೇಣಿವೀರಾಪುರ ಭಾಗದಲ್ಲಿ ಉದ್ಯಮ ಸ್ಥಾಪಿಸಲು ರೈತರಿಂದ ವಶಪಡಿಸಿಕೊಂಡ ಸುಮಾರು 2,659 ಎಕರೆ ಭೂಮಿಯಲ್ಲಿ ರ‍್ಸೆಲ್ಲರ್ ಮಿತ್ತಲ್ಕಂಪನಿಗಳು ಉದ್ಯಮ ಸ್ಥಾಪಿಸುವುದಿಲ್ಲ, ಭೂಮಿಯನ್ನು ಮರಳಿಸುತ್ತಾರೆ ಎಂದು ಸ್ಪಷ್ಟಪಡಿಸಿದ್ದಾರೆ. ಎನ್‌ಎಂಡಿಸಿ ಕಂಪನಿಯು ಡಿಸೆಂಬರ್ ಅಂತ್ಯಕ್ಕೆ ನೂತನ ಕೈಗಾರಿಕೆ ಆರಂಭಿಸಿ ಸ್ಥಳೀಯರಿಗೆ ಉದ್ಯೋಗ ನೀಡುತ್ತೇವೆ ಎಂದು ತಿಳಿಸಿದ್ದಾರೆ ಮತ್ತು ಉತ್ತಮ್ ಗಾಲ್ವಾ ಕಂಪನಿಯು ಮಾರ್ಚ್ ತಿಂಗಳಲ್ಲಿ ಪರಿಸರ ಸ್ನೇಹಿ ಉದ್ಯಮ ಸ್ಥಾಪಿಸಲು 36,000 ಕೋಟಿ ರೂ. ಇನ್‌ವೆಸ್ಟ್ ಮಾಡಲು ಯೋಜನೆ ರೂಪಿಸುತ್ತಿದ್ದಾರೆ ಎಂಬ ಚರ್ಚೆಗಳು ಇತ್ತೀಚೆಗೆ ಮುಖ್ಯಮಂತ್ರಿಯವರೊAದಿಗೆ ಸಚಿವರ ಸಮ್ಮುಖದಲ್ಲಿ ಸಭೆ ನಡೆಸಲಾಗಿದೆ ಎಂದರು. ಎನ್‌ಎAಡಿಸಿ ಕಂಪನಿಯಲ್ಲಿ ಸರೋಜಿನಿ ಮಹಿಷಿ ವರದಿ ಆಳವಡಿಸಿ ಸ್ಥಳೀಯರಿಗೆ ಉದ್ಯೋಗ ನೀಡುವ ಕುರಿತು ಕೇಂದ್ರಕ್ಕೆ ಪತ್ರ ಬರೆದು ಶಿಫಾರಸ್ಸು ಮಾಡಲಾಗಿದೆ ಎಂದರು. ಬಳಿಕ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಮುಂಭಾಗ 2024-25ನೇ ಸಾಲಿನ ಸಂಸದರ 10 ಲಕ್ಷ ರೂ. ಅನುದಾನದಲ್ಲಿ ಬಸ್ ತಂಗುದಾಣದ ಭೂಮಿಪೂಜೆ ನೆರವೇರಿಸಿದರು. ಇದೇ ವೇಳೆ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ವಿದ್ಯಾರ್ಥಿಗಳಿಗೆ ಕುಡಿಯಲು ನೀರಿಗಾಗಿ 2000 ಲೀ. ಸಾಮರ್ಥ್ಯದ ಕುಡಿಯುವ ನೀರಿನ ಆರ್‌ಓ ಘಟಕ ನಿರ್ಮಿಸಿಕೊಡಲಾಗುವುದು ಎಂದು ಭರವಸೆ ನೀಡಿದರು. ಈ ವೇಳೆ ಡಾ.ಬಾಬು ಜಗನ್ ಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಪಿ.ಗಾದೆಪ್ಪ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಚಾರ್ಯ ಆನಂದ ಸೇರಿದಂತೆ ಮಹಾನಗರ ಪಾಲಿಕೆಯ ಸದಸ್ಯರು, ರಾಷ್ಟಿçÃಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು-ಗುತ್ತಿಗೆದಾರರು, ನಿರ್ಮಿತಿ ಕೇಂದ್ರದ ಅಧಿಕಾರಿಗಳು ಹಾಗೂ ಇತರರು ಹಾಜರಿದ್ದರು. ----------------

ಬಳ್ಳಾರಿ: ಜಿಲ್ಲಾ ಆಸ್ಪತ್ರೆಯಲ್ಲಿ ಎಂಆರ್‌ಐ ಸ್ಕಾö್ಯನಿಂಗ್ ಸೆಂಟರ್ ಉದ್ಘಾಟಿಸಿದ ಸಂಸದ ಈ.ತುಕಾರಾಮ್ | ಆರೋಗ್ಯ ಸುಸ್ಥಿತಿಯಲ್ಲಿಟ್ಟುಕೊಳ್ಳಲು ಕರೆ

ಬಳ್ಳಾರಿ,ನ.28(ಕರ್ನಾಟಕ ವಾರ್ತೆ): ನಮ್ಮ ದೇಹವೇ ದೇಗುಲವಾಗಿದ್ದು, ಪ್ರತಿಯೊಬ್ಬರೂ ತಮ್ಮ ಆರೋಗ್ಯವನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳಬೇಕು ಎಂದು ಬಳ್ಳಾರಿ ಲೋಕಸಭಾ ಕ್ಷೇತ್ರ ಸಂಸದ ಈ.ತುಕಾರಾಮ್ ಅವರು ಹೇಳಿದರು. ಶುಕ್ರವಾರ ಜಿಲ್ಲಾ ಆಸ್ಪತ್ರೆಯಲ್ಲಿ ಎನ್.ಎಂ.ಡಿ.ಸಿ ಯ ಸಿ.ಎಸ್.ಆರ್ ಅನುದಾನದಲ್ಲಿ 12 ಕೋಟಿ ರೂ. ವೆಚ್ಚದ ಎಂ.ಆರ್.ಐ ಸ್ಕಾö್ಯನಿಂಗ್ ಸೆಂಟರ್ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ಪ್ರಸ್ತುತದಲ್ಲಿ ನಮ್ಮ ಜೀವನ ಶೈಲಿ ಬದಲಿಸಕೊಳ್ಳಬೇಕಿದೆ. ಪೌಷ್ಠಿಕ ಆಹಾರ ಸೇವನೆಯ ಜೊತೆಗೆ ನಿಯಮಿತ ವ್ಯಾಯಾಮ ಮಾಡುತ್ತಿರಬೇಕು. ಮನಸ್ಸನ್ನು ಆರೋಗ್ಯವಾಗಿಟ್ಟುಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. 2014 ರಲ್ಲಿ ಪ್ರಧಾನಮಂತ್ರಿಯಾಗಿದ್ದ ಡಾ.ಮನಮೋಹನ್ ಸಿಂಗ್ ಅವರ ಕಾಲಾವಧಿಯಲ್ಲಿ ಯಾವ ಉದ್ಯಮಗಳು ಲಾಭ ಪಡೆಯುತ್ತಿದ್ದವೋ, ಆ ಉದ್ಯಮಗಳಿಂದ ಶೇ.02 ರಷ್ಟು ಸಿಎಸ್‌ಆರ್ ಅನುದಾನವನ್ನು ಶೈಕ್ಷಣಿಕ ಅಭಿವೃದ್ಧಿ, ಆರೋಗ್ಯ, ಕೌಶಲಾಭಿವೃದ್ಧಿಗೆ ಬಳಕೆ ಮಾಡುವಂತೆ ಕಾಯ್ದೆ ಜಾರಿಗೆ ತಂದರು. ಅದರಡಿ ಈಗಾಗಲೇ ಸಾಕಷ್ಟು ಅನುದಾನ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ಬಳಕೆಯಾಗುತ್ತಿದೆ ಎಂದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಅತ್ಯುತ್ತಮ ಗುಣಮಟ್ಟದ ಎಂಆರ್‌ಐ ಸ್ಕಾö್ಯನಿಂಗ್ ಯಂತ್ರ ಜಿಲ್ಲಾಸ್ಪತ್ರೆಯಲ್ಲಿ ಕಾರ್ಯನಿರ್ವಹಿಸಲಿದ್ದು, ಬಿಪಿಎಲ್ ಕಾರ್ಡ್ ದಾರರಿಗೆ 1150 ರೂ. ಗಳಲ್ಲಿ ಸ್ಕಾö್ಯನಿಂಗ್ ಸೇವೆ ದೊರೆಯಲಿದೆ. ಈ ಕುರಿತು ಎಲ್ಲಾ ತಾಲ್ಲೂಕು ಮಟ್ಟದಲ್ಲಿಯು ಸಹ ಹೆಚ್ಚಿನ ಪ್ರಚಾರ ನೀಡಬೇಕು ಎಂದು ಹೇಳಿದರು. ಜಿಲ್ಲಾ ಶಸ್ತçಚಿಕಿತ್ಸಕ ಡಾ.ಬಸರೆಡ್ಡಿ ಅವರು ಮಾತನಾಡಿ, ಜಿಲ್ಲಾಡಳಿತದ ಸಹಕಾರದೊಂದಿಗೆ ಸಂಸದರ ಇಚ್ಛಾಶಕ್ತಿಯಿಂದ ಅತ್ಯಾಧುನಿಕ ತಂತ್ರಜ್ಞಾನದ ಎಂಆರ್‌ಐ ಸ್ಕಾö್ಯನಿಂಗ್ ಯಂತ್ರವನ್ನು ಸಿಎಸ್‌ಆರ್ ಅನುದಾನದಡಿ ಎನ್‌ಎಂಡಿಸಿ ಯಿಂದ ನೀಡಲಾಗಿದೆ. ಮಾನವದ ದೇಹದೊಳಗೆ ಮೂಳೆ ಮತ್ತು ನರಗಳಿಗೆ ಸಂಬAಧಿಸಿದAತೆ ಸ್ಕಾö್ಯನ್ ಮಾಡಲು ಇದು ಅನುಕೂಲವಾಗಲಿದೆ. ಇದು ಗಂಟೆಗಟ್ಟಲೆ ಸಮಯ ತೆಗೆದುಕೊಳ್ಳಲಿದ್ದು, ಪ್ರತಿದಿನ ನಿಯಮಿತವಾಗಿ ಸ್ಕಾö್ಯನಿಂಗ್ ಮಾಡಲಾಗುವುದು ಎಂದು ಹೇಳಿದರು. ಇದೇ ವೇಳೆ ಗುಣಮಟ್ಟದ ಸ್ಕಾö್ಯನಿಂಗ್ ಕವರ್ ಗಳನ್ನು ಗಣ್ಯರು ಬಿಡುಗಡೆಗೊಳಿಸಿದರು. ಈ ವೇಳೆ ಡಾ.ಬಾಬು ಜಗನ್ ಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಪಿ.ಗಾದೆಪ್ಪ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಎನ್‌ಎಂಡಿಸಿ ಯ ಜನರಲ್ ಮ್ಯಾನೇಜರ್ ಚಟರ್ಜಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಸೇರಿದಂತೆ ಮಹಾನಗರ ಪಾಲಿಕೆಯ ಸದಸ್ಯರು, ಜನಪ್ರತಿನಿಧಿಗಳು, ಜಿಲ್ಲಾ ಆಸ್ಪತ್ರೆಯ ಅಧಿಕಾರಿ-ಸಿಬ್ಬಂದಿ, ಸಾರ್ವಜನಿಕರು ಉಪಸ್ಥಿತರಿದ್ದರು. ನಂತರ ನಗರದ ರಾಘವೇಂದ್ರ ಕಾಲೋನಿಯಲ್ಲಿ 2024-25ನೇ ಸಾಲಿನ ಸಂಸದರ 25 ಲಕ್ಷ ರೂ. ಅನುದಾನದಲ್ಲಿ ನಿರ್ಮಿಸಿರುವ ಬಳ್ಳಾರಿಯ ಆದರ್ಶ ಪಾರ್ಕ್ ನಲ್ಲಿ ಪೇವರ್ಸ್ ಅಳವಡಿಕೆ ಮತ್ತು ಪಿರಾಮಿಡ್ ಯೋಗಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. -------------

ಗುರುವಾರ, ನವೆಂಬರ್ 27, 2025

ಮಾಹಿತಿ ನೀಡದ ಅಧಿಕಾರಿಗಳ ವಿರುದ್ಧ ಅಸಮಾಧಾನ | ಪ್ರಗತಿ ಪರಿಶೀಲನಾ ಸಭೆ ನಡೆಸಿ ಅಧ್ಯಕ್ಷ ಶಶಿಧರ ಕೋಸಂಬೆ ಹೇಳಿಕೆ | ಆರ್.ಟಿ.ಇ ಕಾಯ್ದೆ ಪ್ರಾಮಾಣಿಕವಾಗಿ ಅನುಷ್ಠಾನಗೊಳಿಸಿ

ಬಳ್ಳಾರಿ,ನ.27(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಉಚಿತ ಮತ್ತು ಕಡ್ಡಾಯ ಶಿಕ್ಷಣ ಕಾಯ್ದೆಯನ್ನು ಪ್ರಾಮಾಣಿಕವಾಗಿ ಅನುಷ್ಠಾನಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ ಕೋಸಂಬೆ ಅವರು ಅಧಿಕಾರಿಗಳಿಗೆ ಸೂಚಿಸಿದರು. ನಗರದ ಜಿಲ್ಲಾ ಪಂಚಾಯತ್‌ನ ಹಳೆಯ ನಜೀರ್ ಸಾಬ್ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಆರ್.ಟಿ.ಇ ಕಾಯ್ದೆ ಅನುಷ್ಠಾನ ಕುರಿತು ಶಿಕ್ಷಣ ಇಲಾಖೆಯ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು. ಉಚಿತ ಮತ್ತು ಕಡ್ಡಾಯ ಶಿಕ್ಷಣ ಕಾಯ್ದೆಯು 6 ರಿಂದ 14 ವಷÀð ವಯಸ್ಸಿನ ಎಲ್ಲಾ ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣವನ್ನು ಮೂಲಭೂತ ಹಕ್ಕು ಎಂದು ಗುರುತಿಸುತ್ತದೆ. ಎಲ್ಲಾ ಮಕ್ಕಳಿಗೆ ಶಿಕ್ಷಣದ ಪ್ರವೇಶಕ್ಕೆ ಇರುವ ಆರ್ಥಿಕ ಅಥವಾ ಇತರ ಅಡೆತಡೆಗಳನ್ನು ನಿವಾರಿಸುವುದು ಇದರ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು. ಜಿಲ್ಲೆಯಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ಆರ್.ಟಿ.ಇ ಕಾಯ್ದೆ ಅನುಷ್ಠಾನಕ್ಕಿರುವ ನಿಯಮಾವಳಿಗಳ ಬಗ್ಗೆ ಅರಿವು ಇಲ್ಲದೇ ಇರುವುದು ದುರ್ದೈವದ ಸಂಗತಿ. ಹಾಗಾಗಿ ಅಧಿಕಾರಿಗಳು ಕಾಯ್ದೆಯ ಸಮಗ್ರ ಮಾಹಿತಿ ಹೊಂದುವ ಮೂಲಕ ಮಕ್ಕಳ ಶಿಕ್ಷಣ ಭವಿಷ್ಯಕ್ಕೆ ಕಾರಣೀಭೂತರಾಗಬೇಕು ಎಂದರು. ಜಿಲ್ಲೆಯಲ್ಲಿ 2021-22 ನೇ ಸಾಲಿನಲ್ಲಿ ಕರೋನಾ ಸಂದರ್ಭದಲ್ಲಿ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಲು ಸರ್ಕಾರದಿಂದ ಅನುದಾನ ನೀಡಿದ್ದು, ಮಕ್ಕಳಿಗಾಗಿ ಪೂರ್ಣ ಪ್ರಮಾಣದಲ್ಲಿ ಖರ್ಚು ಮಾಡಲಾಗಿದೆಯೇ? ಮಾಹಿತಿ ಎಲ್ಲಿ? ಎಲ್ಲಾ ಶಾಲೆಗಳಲ್ಲಿ ಉಳಿದುಕೊಂಡಿರುವ ಅನುದಾನ ಎಷ್ಟು? ಶಾಲೆಗಳ ಬ್ಯಾಂಕ್ ಖಾತೆ ಪರಿಶೀಲಿಸಿಲ್ಲವೇ? ಎಂದು ಮಧ್ಯಾಹ್ನ ಬಿಸಿಯೂಟದ ಯೋಜನಾಧಿಕಾರಿಗಳ ಮೇಲೆ ಗರಂ ಆದ ಅವರು, ಕೂಡಲೇ ಮಾಹಿತಿ ನೀಡಬೇಕು. ಸರ್ಕಾರ ಮಕಳಿಗಾಗಿಯೇ ನೀಡಿರುವ ಹಣವಿದೆ. ಮಕ್ಕಳಿಗೆ ತಲುಪಿಸುವ ಕಾರ್ಯ ಏಕೆ ಮಾಡಲಿಲ್ಲ, ಇದಕ್ಕೆ ಯಾರು ಹೊಣೆ ಎಂದು ಕಳವಳ ವ್ಯಕ್ತಪಡಿಸಿದರು. ಜಿಲ್ಲೆಯಲ್ಲಿ 2021-22 ರಿಂದ 31.03.2025 ರ ಅಂತ್ಯಕ್ಕೆ ಶಾಲೆಗಳ ಎಲ್ಲಾ ಖಾತೆಗಳಲ್ಲಿ ಸೇರಿ ಒಟ್ಟು 2,24,71,138 ಹಣವಿದೆ ಎಂದು ಮಧ್ಯಾಹ್ನ ಬಿಸಿಯೂಟದ ಯೋಜನಾಧಿಕಾರಿಗಳು ಸಭೆಯ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಅಧ್ಯಕ್ಷರು, ಈ ಹಣ ಮಕ್ಕಳಿಗೆ ತಲುಪಬೇಕು, ಇಲ್ಲವೇ ಸರ್ಕಾರಕ್ಕೆ ತಲುಪಬೇಕು ಎಂದರು. ಕಂಪ್ಲಿ ತಾಲ್ಲೂಕಿನ ರಾಮಸಾಗರ ಗ್ರಾಮದ ಸರ್ಕಾರಿ ಶಾಲೆಯೊಂದರಲ್ಲಿ ಶಾಲಾ ಮುಖ್ಯೋಪಾಧ್ಯರು, ಎಸ್.ಡಿ.ಎಂ.ಸಿ ಸಮಿತಿ ಒಳಗೊಂಡು ಶಾಲಾ ಪ್ರವೇಶಾತಿ ನೆಪದಲ್ಲಿ ಹಣ ವಸೂಲಾತಿ ಮಾಡಲು ಅವಕಾಶವಿದೆಯೇ? ಎಂದು ಡಿಡಿಪಿಐ ಪ್ರಶ್ನಿಸಿದರು. ಇದರ ಸಮಗ್ರ ತನಿಖೆ ನಡೆಸಿ ಆಯೋಗಕ್ಕೆ ವರದಿ ಸಲ್ಲಿಸಬೇಕು ಎಂದು ಖಡಕ್ ಸೂಚನೆ ನೀಡಿದರು. ಅದೇ ರೀತಿಯಾಗಿ ಮೆಟ್ರಿ ಗ್ರಾಮದಲ್ಲಿ ಭೇಟಿ ನೀಡಿದಾಗ ಒಂದೇ ಶಾಲೆಯಲ್ಲಿ ಪ್ರಾಥಮಿಕ ಹಂತದ 5 ಮಕ್ಕಳು, ಪ್ರೌಢ ಹಂತದ 12 ಮಕ್ಕಳು ಗೈರಾಗಿರುವುದು ಕಂಡುಬAದಿದ್ದು, ಕಾರಣವೇನು? ಇದೇ ತರಹ ಜಿಲ್ಲೆಯ ಶಾಲೆಗಳಲ್ಲಿ ನಡೆಯುವ ಕಥೆ ಏನು? ಮಕ್ಕಳಿಗೆ ಏನಾದರೂ ಘಟನೆಗಳು ಸಂಭವಿಸಿದಲ್ಲಿ ಯಾರೂ ಉತ್ತರ ನೀಡಬೇಕು. ಶಿಕ್ಷಕರು ಮನೆ ಭೇಟಿ ನಡೆಸಬೇಕು. ಶಾಲೆಗೆ ಕರೆತರುವ ಪ್ರಯತ್ನ ಮಾಡಬೇಕು. ಶಾಲೆಯಲ್ಲಿ ಕುಡಿಯಲು ನೀರಿನ ವ್ಯವಸ್ಥೆ ಇಲ್ಲ, ಆಹಾರಧಾನ್ಯಗಳಲ್ಲಿ ಹುಳುಗಳು ಕಂಡುಬAದಿವೆ, ಶೌಚಾಲಯ ವ್ಯವಸ್ಥೆ ಇಲ್ಲ, ಈ ಕೂಡಲೇ ಕ್ರಮವಹಿಸಬೇಕು ಎಂದು ಸಂಬAಧಿಸಿದ ಅಧಿಕಾರಿಗಳಿಗೆ ತಿಳಿಸಿದರು. ಜಿಲ್ಲೆಯಲ್ಲಿ ಕಳೆದ ವರ್ಷದಲ್ಲಿ ಪ್ರೌಢ ಶಾಲೆಗಳಲ್ಲಿ (9 ಮತ್ತು 10 ತರಗತಿ) ಉತ್ತೀರ್ಣರಾದ ವಿದ್ಯಾರ್ಥಿಗಳಲ್ಲಿ ಸುಮಾರು 9,500 ವಿದ್ಯಾರ್ಥಿಗಳು ಹೊರಗುಳಿದಿದ್ದು, ಹಾಜರಾತಿಯಲ್ಲಿ ಮಾತ್ರ ಪ್ರೆಸೆಂಟ್ ಇದ್ದಾರೆ, ಆದರೆ ದೈಹಿಕವಾಗಿ ಶಾಲೆಯಲ್ಲಿಲ್ಲ. ಸರ್ಕಾರದಿಂದ ಅವರಿಗೆ ನೀಡಲಾಗುತ್ತಿರುವ ಸಮವಸ್ತç, ಶೂ-ಸಾಕ್ಸ್, ಊಟ, ಮೊಟ್ಟೆ, ಬಾಳೆಹಣ್ಣು ಎಲ್ಲಿಗೆ ಹೋಗುತ್ತಿವೆ ಎಂದು ಪ್ರಶ್ನಿಸಿದ ಅವರು, ಈ ಕುರಿತು ಆಯುಕ್ತರೊಂದಿಗೆ ಚರ್ಚಿಸಲಾಗುವುದು ಎಂದು ತಿಳಿಸಿದರು. ಶಾಲೆಗಳಲ್ಲಿ ಮಕ್ಕಳ ಆಧಾರ್ ಸೀಡಿಂಗ್ ಪ್ರಕ್ರಿಯೆ ಸಾಕಷ್ಟು ಬಾಕಿಯಿದೆ. ಇದರಿಂದ ಅವರಿಗೆ ವಿದ್ಯಾರ್ಥಿವೇತನ ಸೇರಿದಂತೆ ಇತರೆ ಕಾರ್ಯಗಳಿಗೆ ಸಮಸ್ಯೆಯಾಗಲಿದೆ. ಜಿಲ್ಲೆಯಲ್ಲಿ ಆಧಾರ್ ಕಾರ್ಡ್ ಪಡೆಯಲು ಜನ್ಮ ಪ್ರಮಾಣ ಪತ್ರ ವಿತರಣೆಗೆ ಇರುವ ತೊಡಕುಗಳ ಕುರಿತು ಡಿಸಿ ಮತ್ತು ಜಿಪಂ ಸಿಇಒ ಗಮನಕ್ಕೆ ತಂದು ಚರ್ಚಿಸಬೇಕು. ಇದರಿಂದ ಮಕ್ಕಳಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದರು. ಆರ್.ಬಿ.ಎಸ್.ಕೆ ತಂಡದ ಅಧಿಕಾರಿಗಳು ಜಿಲ್ಲಾ ಆರೋಗ್ಯಾಧಿಕಾರಿಗಳೊಂದಿಗೆ ಚರ್ಚಿಸಿ, ನಿಯಮಿತವಾಗಿ ಶಾಲೆಗಳಿಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ತಪಾಸಣೆ ನಡೆಸಬೇಕು. ಆಯೋಗಕ್ಕೆ ಜಿಪಿಎಸ್ ಪೋಟೋ ಸಹಿತ ಮಾಹಿತಿ ಸಲ್ಲಿಸಬೇಕು ಎಂದು ತಿಳಿಸಿದರು. ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ನಿಯಮಿತವಾಗಿ ಶಾಲೆಗಳಿಗೆ ಭೇಟಿ ನೀಡಬೇಕು. ಮಕ್ಕಳೊಂದಿಗೆ ಸಮಸ್ಯೆಗಳ ಕುರಿತು ಚರ್ಚಿಸಿ ಬೇಕಾದ ವ್ಯವಸ್ಥೆ ಕಲ್ಪಿಸಬೇಕು. ಇದು ಅಧಿಕಾರಿಗಳ ಕರ್ತವ್ಯವಾಗಿದೆ ಎಂದು ತಿಳಿಸಿದರು. ಕಳೆದ ಸಭೆಯಲ್ಲಿ ನಡೆದ ಚರ್ಚೆಗಳ ಕುರಿತು ನಡಾವಳಿಗಳ ಮಾಹಿತಿ ದಾಖಲಿಸದೇ ಇರುವುದರ ಕುರಿತು ಅಧ್ಯಕ್ಷರು ಅಸಮಾಧಾನ ವ್ಯಕ್ತಪಡಿಸಿದರು. ಸಭೆಯಲ್ಲಿ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ತ್ರಿವೇಣಿ ಪತ್ತಾರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸುಭದ್ರಾದೇವಿ, ಶಾಲಾ ಮತ್ತು ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಉಮಾದೇವಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸದಸ್ಯರಾದ ಚೆಟ್ಲಾ ವೆಂಕಟೇಶ್, ಗೌಸಿಯಾ, ಕಾನೂನು ಪರಿವೀಕ್ಷಕ ಈಶ್ವರ್ ರಾವ್ ಸೇರಿದಂತೆ ಜಿಲ್ಲೆಯ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಬಿಆರ್ಪಿ, ಸಿಆರ್ಪಿ, ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಇತರರು ಉಪಸ್ಥಿತರಿದ್ದರು. --------------

ಡಿ.01 ರಂದು ವಿಶ್ವ ಏಡ್ಸ್ ದಿನಾಚರಣೆ ಕಾರ್ಯಕ್ರಮ

ಬಳ್ಳಾರಿ,ನ.27(ಕರ್ನಾಟಕ ವಾರ್ತೆ): ರಾಜ್ಯ ಏಡ್ಸ್ ಪ್ರಿವೆನ್‌ಷನ್ ಸೊಸೈಟಿ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಪೋಲಿಸ್ ಇಲಾಖೆ, ಜಿಲ್ಲಾ ಆಸ್ಪತ್ರೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ “ಹೆಚ್‌ಐವಿ/ಏಡ್ಸ್ ಹರಡುವಿಕೆಯನ್ನು ನಿಯಂತ್ರಿಸಲು ಇರುವ ಅಡೆತಡೆಗಳನ್ನು ಕೊನೆಗಾಣಿಸೋಣ” ಎಂಬ ಘೋಷವಾಕ್ಯದಡಿ ಡಿ.01 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಸಭಾಂಗಣದಲ್ಲಿ ವಿಶ್ವ ಏಡ್ಸ್ ದಿನಾಚರಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ. ಅಂದು ಬೆಳಿಗ್ಗೆ 07 ಗಂಟೆಗೆ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ವಾಕ್‌ಥಾನ್ ಜಾಥಾ ಹಮ್ಮಿಕೊಳ್ಳಲಾಗಿದ್ದು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್.ಎನ್ ಹೊಸಮನೆ ಅವರು ಚಾಲನೆ ನೀಡುವರು. ಬಳಿಕ ಬೆಳಿಗ್ಗೆ 10.30 ಗಂಟೆಗೆ ವೇದಿಕೆ ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ ಬಾಬು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿ ಮತ್ತು ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳಾದ ಡಾ.ಇಂದ್ರಾಣಿ ವಿ ಅವರು ಪ್ರಾಸ್ತಾವಿಕವಾಗಿ ಮಾತನಾಡುವರು. ಜಿಲ್ಲಾ ಶಸ್ತçಚಿಕಿತ್ಸಕ ಡಾ.ಎನ್.ಬಸರೆಡ್ಡಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ತುಕಾರಾಂ ರಾವ್ ಬಿ.ವಿ, ಬಳ್ಳಾರಿ ತಾಲ್ಲೂಕು ಆರೋಗ್ಯ ಅಧಿಕಾರಿ ಹಾಗೂ ಯೋಜನಾ ಅಭಿವೃದ್ದಿ ಅಧಿಕಾರಿ ಡಾ.ಆರ್.ಅಬ್ದುಲ್ಲಾ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ.ವಿ.ಕೆ., ಜಾರಿ ಅಧಿಕಾರಿ ಡಾ.ಪೂರ್ಣಿಮಾ ಕಟ್ಟಿಮನಿ, ಜಿಲ್ಲಾ ಅಸಾಂಕ್ರಾಮಿಕ ಅಧಿಕಾರಿ ಡಾ.ವಿರೇಂದ್ರ ಕುಮಾರ್, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಹನುಮಂತಪ್ಪ, ಎಫ್‌ಪಿಎಐ ವ್ಯವಸ್ಥಾಪರಾದ ವಿಜಯಲಕ್ಷಿö್ಮ, ನಿತ್ಯಜೀವನ ಸಂಸ್ಥೆಯ ಅಧ್ಯಕ್ಷರಾದ ಹೇಮಲತ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಡ್ಯಾಪ್ಕು ಜಿಲ್ಲಾ ಮೇಲ್ವಿಚಾರಕ ಬಿ.ಗಿರೀಶ್, ಎಆರ್‌ಟಿ ಆಪ್ತ ಸಮಾಲೋಚಕ ಜಿ.ಎಮ್. ಗಣೇಶ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಖುರ್ಶಿದ್ ಬೇಗಮ್ ಸೇರಿದಂತೆ ಇಲಾಖೆಯ ಸಿಬ್ಬಂದಿಗಳು ಇತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ. -------------

ನ.29 ರಂದು ಬಳ್ಳಾರಿ ಗ್ರಾಮೀಣ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ

ಬಳ್ಳಾರಿ,ನ.27(ಕರ್ನಾಟಕ ವಾರ್ತೆ): ಬಳ್ಳಾರಿ ಗ್ರಾಮೀಣ ಜೆಸ್ಕಾಂ ಕಾರ್ಯ ಮತ್ತು ಪಾಲನಾ ಉಪ ವಿಭಾಗ ವ್ಯಾಪ್ತಿಯ ಎನ್‌ಹೆಚ್-63 ರಾಷ್ಟೀಯ ಹೆದ್ದಾರಿ ರಸ್ತೆ ಅಗಲೀಕರಣ ಕಾಮಗಾರಿ ಕಾರ್ಯ ಕೈಗೊಳ್ಳುತ್ತಿರುವುದರಿಂದ ನ.29 ರಂದು ಬೆೆಳಗ್ಗೆ 09 ಗಂಟೆಯಿAದ ಸಂಜೆ 05 ಗಂಟೆಯವರೆಗೆ 110/11 ಕೆ.ವಿ ಶ್ರೀಧರಗಡ್ಡೆ ವಿದ್ಯುತ್ ಉಪ-ಕೇಂದ್ರ‍್ರದ ಎಫ್-10 ಸಿಟಿ ಮಾರ್ಗದ ವಕ್ರಾಣಿ ಕ್ಯಾಂಪ್ ಮತ್ತು ಎಫ್-10 ಶ್ರೀಧರಗಡ್ಡೆ ಎನ್‌ಜೆವೈ ಫೀಡರ್ ಮಾರ್ಗದ ಸೋಮಸಮುದ್ರ, ಲಕ್ಷಿö್ಮನಗರ ಕ್ಯಾಂಪ್, ವೀರಾಂಜಿನೇಯ್ಯ ಕ್ಯಾಂಪ್, ಕೋಳೂರು, ಮಧುರೆ, ಭಾಗ್ಯನಗರ ಕ್ಯಾಂಪ್, ಮಲ್ಲಾರೆಡ್ಡಿ ಕ್ಯಾಂಪ್ ಗ್ರಾಮ, ಕೋಳೂರು ಕ್ರಾಸ್, ದಮ್ಮೂರು, ಡಿ.ಕಗ್ಗಲ್ ವಿ.ಟಿ.ಕ್ಯಾಂಪ್, ವಕ್ರಾಣಿ ಕ್ಯಾಂಪ್ ಸೇರಿದಂತೆ ಮುಂತಾದ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಮೋಹನಬಾಬು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------------

ಬಾಲಕ ಕಾಣೆ: ಪತ್ತೆಗೆ ಮನವಿ

ಬಳ್ಳಾರಿ,ನ.27(ಕರ್ನಾಟಕ ವಾರ್ತೆ): ನಗರದ ಅಲ್ಲಿಪುರ ಗ್ರಾಮದ ಸುಗ್ಗಲಮ್ಮ ಗುಡಿ ಹತ್ತಿರ ಶಂಕರ.ಕೆ ಎನ್ನುವ 11 ವರ್ಷದ ಬಾಲಕನು ನ.22 ರಂದು ಮನೆಯಿಂದ ಆಟವಾಡಲು ಹೋಗಿ ಬರುವುದಾಗಿ ಹೇಳಿ ಮರಳಿ ಬಾರದೇ ಕಾಣೆಯಾಗಿರುವ ಕುರಿತು ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ ಮನವಿ ಮಾಡಿದ್ದಾರೆ. *ಚಹರೆ ಗುರುತು:* ಅಂದಾಜು 04 ಅಡಿ ಎತ್ತರ, ಕೋಲು ಮುಖ, ಕಪ್ಪು ಮೈಬಣ್ಣ, ಕಪ್ಪು ಕೂದಲು, ತೆಳುವಾದ ಮೈಕಟ್ಟು ಹೊಂದಿದ್ದು, ಮೂಗಿನ ಹತ್ತಿರ ಗಾಯ ಇರುತ್ತದೆ. ಕಾಣೆಯಾದ ಸಂದರ್ಭದಲ್ಲಿ ಹಸಿರು ಬಣ್ಣದ ಅರ್ಧ ತೋಳಿನ ಟಿ-ಶರ್ಟ್ ಹಾಗೂ ನೀಲಿ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ ಮತ್ತು ತೆಲುಗು ಭಾಷೆ ಮಾತನಾಡುತ್ತಾನೆ. ಬಾಲಕನ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯ ದೂ.08392-276461, ಮೊ.9480803049 ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------------

ಬಳ್ಳಾರಿ: ಸಂಸದ ಈ.ತುಕಾರಾಮ್ ಅವರ ಪ್ರವಾಸ

ಬಳ್ಳಾರಿ,ನ.27(ಕರ್ನಾಟಕ ವಾರ್ತೆ): ಬಳ್ಳಾರಿ ಲೋಕಸಭಾ ಕ್ಷೇತ್ರದ ಸಂಸದರಾದ ಈ.ತುಕಾರಾಮ್ ಅವರು ನ.28 ರಂದು ಬಳ್ಳಾರಿಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ನ.28 ರಂದು ಬೆಳಿಗ್ಗೆ 10.30 ಗಂಟೆಗೆ ಬಳ್ಳಾರಿ ಹೊರವಲಯದ ಹೊಸ ಬೈಪಾಸ್‌ಯ ವೇಣಿವೀರಾಪುರ ಹತ್ತಿರದ ರಾಷ್ಟಿçÃಯ ಹೆದ್ದಾರಿ (ಎನ್‌ಹೆಚ್-67) ಯೋಜನೆಯಡಿ ವೇಣಿವೀರಾಪುರ ದಿಂದ ಹಗರಿ ವರೆಗೆ ನಿರ್ಮಿಸಲಾದ ಬಳ್ಳಾರಿ ಬೈಪಾಸ್ ರಸ್ತೆಯ ಉದ್ಘಾಟನೆ ನೆರವೇರಿಸುವರು. ಮಧ್ಯಾಹ್ನ 12 ಗಂಟೆಗೆ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಹತ್ತಿರ 2024-25ನೇ ಸಾಲಿನ ಸಂಸದರ 10 ಲಕ್ಷ ರೂ. ಅನುದಾನದಲ್ಲಿ ಬಸ್ ತಂಗುದಾಣದ ಭೂಮಿಪೂಜೆಯಲ್ಲಿ ಭಾಗವಹಿಸುವರು. ಬಳಿಕ ಮಧ್ಯಾಹ್ನ 12.30 ಕ್ಕೆ ಜಿಲ್ಲಾ ಆಸ್ಪತ್ರೆಯಲ್ಲಿ ಎನ್.ಎಂ.ಡಿ.ಸಿ ಸಿ.ಎಸ್.ಆರ್ 1200 ಲಕ್ಷ ರೂ. ಅನುದಾನದಲ್ಲಿ ಎಂ.ಆರ್.ಐ ಸ್ಕಾö್ಯನಿಂಗ್ ಸೆಂಟರ್ ಉದ್ಘಾಟನೆ ಮಾಡುವರು. ನಂತರ ನಗರದ ರಾಘವೇಂದ್ರ ಕಾಲೋನಿಯಲ್ಲಿ 2024-25ನೇ ಸಾಲಿನ ಸಂಸದರ 25 ಲಕ್ಷ ರೂ. ಅನುದಾನದಲ್ಲಿ ನಿರ್ಮಿಸಿರುವ ಬಳ್ಳಾರಿಯ ಆದರ್ಶ ಪಾರ್ಕ್ನಲ್ಲಿ ಪೇವರ್ಸ್ ಅಳವಡಿಕೆ ಮತ್ತು ಪಿರಾಮಿಡ್ ಯೋಗಕೇಂದ್ರಕ್ಕೆ ಭೇಟಿ ನೀಡುವರು. ನಂತರ ಮಧ್ಯಾಹ್ನ 02.15 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಕಚೇರಿ ಆವರಣದಲ್ಲಿ ವಿಶ್ವಕರ್ಮ ಯೋಜನೆಯಡಿ ಫಲಾನುಭವಿಗಳಿಗೆ ಕಿಟ್ ವಿತರಣೆ ಮಾಡುವರು. ಬಳಿಕ ಜಿಪಂ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಬಳ್ಳಾರಿ ಜಿಲ್ಲಾ ಮಟ್ಟದ ಲೀಡ್ ಬ್ಯಾಂಕ್‌ನ ತ್ರೆöÊಮಾಸಿಕ ಡಿ.ಎಲ್.ಆರ್.ಸಿ/ಡಿ.ಸಿ.ಸಿ ಸಭೆಯಲ್ಲಿ ಭಾಗವಹಿಸುವರು ಎಂದು ಸಂಸದರ ಆಪ್ತ ಸಹಾಯಕರು ತಿಳಿಸಿದ್ದಾರೆ. ---------------

ಕಾರ್ಯಾಗಾರದಲ್ಲಿ ಮಕ್ಕಳ ಆಯೋಗದ ಅಧ್ಯಕ್ಷ ಶಶಿಧರ ಕೋಸಂಬೆ ಕಳವಳ | ಸಾಮಾಜಿಕ ಜಾಲತಾಣಗಳಿಂದ ಶೇ.99 ರಷ್ಟು ಮಕ್ಕಳಿಗೆ ಮಾನಸಿಕ ಖಿನ್ನತೆ

ಬಳ್ಳಾರಿ,ನ.27(ಕರ್ನಾಟಕ ವಾರ್ತೆ): ಕೇಂದ್ರ ಮತ್ತು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಿಂದ ರಾಜ್ಯದ ಬೆಂಗಳೂರು, ಚಿಕ್ಕಮಗಳೂರು, ಬೆಳಗಾವಿ, ರಾಯಚೂರು ಮತ್ತು ಚಾಮರಾಜನಗರ ಸೇರಿ ಐದು ಜಿಲ್ಲೆಗಳಲ್ಲಿ ನಡೆಸಲಾದ ಸಮೀಕ್ಷೆಯಿಂದ ಶೇ.99 ರಷ್ಟು ಮಕ್ಕಳು ಸಾಮಾಜಿಕ ಜಾಲತಾಣಗಳಿಗೆ ವ್ಯಸನಿಗಳಾಗಿದ್ದು, ಮಾನಸಿಕವಾಗಿ ಸದೃಢರಾಗಿಲ್ಲ, ಖಿನ್ನತೆಗೆ ಒಳಗಾಗಿದ್ದಾರೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ ಕೋಸಂಬೆ ಅವರು ಹೇಳಿದರು. ಗುರುವಾರ ನಗರದ ಬಿಡಿಎಎ ಸಭಾಂಗಣದಲ್ಲಿ ರೀಡ್ಸ್ ಸಂಸ್ಥೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಸಿಎಸಿಎಲ್-ಕೆ ಇವರ ಸಂಯುಕ್ತಾಶ್ರಯದಲ್ಲಿ ‘ಬಾಲ್ಯವಿವಾಹ ತಡೆಗಟ್ಟುವಲ್ಲಿ ಸವಾಲುಗಳು ಮತ್ತು ಪರಿಹಾರಗಳು’ ಎಂಬ ವಿಷಯದ ಕುರಿತು ಏರ್ಪಡಿಸಿದ್ದ ಒಂದು ದಿನದ ರಾಜ್ಯಮಟ್ಟದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದ ಅವರು, ಪೋಷಕರು ಪ್ರಸ್ತುತದಲ್ಲಿ ಮಕ್ಕಳಿಗೆ ಒಳ್ಳೆಯ ಚಿಂತನೆಗಳನ್ನು ಬಿತ್ತಬೇಕಿದೆ. ಅವರ ಚಲನ-ವಲನಗಳ ಮೇಲೆ ನಿಗಾವಹಿಸಬೇಕು. ಉತ್ತಮ ನಾಗರಿಕರಾನ್ನಾಗಿಸಬೇಕು ಎಂದು ಹೇಳಿದರು. ಸರ್ಕಾರ ಮತ್ತು ಇಲಾಖೆಗಳಿಂದ ಎಲ್ಲಾ ಕಾರ್ಯ ನಿರ್ವಹಿಸುವುದು ಕಷ್ಟಸಾಧ್ಯ. ಸಮಾಜದಲ್ಲಿ ಸರ್ಕಾರ ಮತ್ತು ಸಾರ್ವಜನಿಕ ವಲಯಗಳಲ್ಲಿ ಸಂಪರ್ಕ ಸೇತುವೆಯಂತೆ ಸಂಘ-ಸAಸ್ಥೆಗಳು ಕಾರ್ಯನಿರ್ವಹಿಸುತ್ತಿವೆ ಎಂದರು. ಮುAದಿನ 2030 ರೊಳಗೆ ದೇಶದಲ್ಲಿ ಬಾಲ್ಯವಿವಾಹ ಮುಕ್ತ ಭಾರತವನ್ನಾಗಿಸಲು ಎಲ್ಲಾ ಇಲಾಖೆ, ಸಂಘ-ಸAಸ್ಥೆಗಳು, ಸಾರ್ವಜನಿಕರು ಕೈಜೋಡಿಸಬೇಕು ಎಂದು ಕೇಂದ್ರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಅನ್ನಪೂರ್ಣದೇವಿ ಅವರು ಕರೆ ನೀಡಿದ್ದಾರೆ ಎಂದರು. ಬಾಲ್ಯವಿವಾಹ ನಿಷೇಧಕ್ಕೆ ರಾಜ್ಯ ಸರ್ಕಾರವು ಅನೇಕ ಎಸ್‌ಓಪಿ ಗಳನ್ನು ಜಾರಿತಂದಿದೆ. ಸಮಾಜದಲ್ಲಿ ಅನಿಷ್ಠ ಪಿಡುಗಾಗಿ ಬೇರೂರಿರುವ ಬಾಲ್ಯವಿವಾಹ ಪದ್ಧತಿಯನ್ನು ಸಂಪೂರ್ಣವಾಗಿ ಕಿತ್ತೊಗೆಯಬೇಕಿದೆ. ಹಾಗಾಗಿ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಅರಿತು ಕಾರ್ಯನಿರ್ವಹಿಸಬೇಕಿದೆ. ಇದಕ್ಕೆ ಪ್ರತಿಯೊಬ್ಬರ ಸಹಕಾರ ಅಗತ್ಯವಾಗಿದೆ ಎಂದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಮಾತನಾಡಿ, ರಾಜ್ಯದಲ್ಲಿ 60 ಸಾವಿರಕ್ಕೂ ಹೆಚ್ಚು ಬಾಲ್ಯ ವಿವಾಹ ನಿಷೇಧಾಧಿಕಾರಿಗಳು ಇದ್ದು, ಅಂದರೆ ಸರಿ-ಸುಮಾರು ಪ್ರತಿ ಜಿಲ್ಲೆಯಲ್ಲಿ 2,000 ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಆದರೂ ಬಾಲ್ಯವಿವಾಹ, ಪೋಕ್ಸೋ ಪ್ರಕರಣಗಳು ಕಂಡುಬರುತ್ತಿವೆ. ಈ ಕುರಿತು ಪ್ರತಿಯೊಬ್ಬರೂ ವಿಮರ್ಶೆ ಮಾಡಿಕೊಳ್ಳಬೇಕಿದೆ. ಬಾಲ್ಯವಿವಾಹ, ಪೋಕ್ಸೋ ಕಾಯ್ದೆಗಳ ಕುರಿತು ಅರಿವು ಹೊಂದಬೇಕಿದೆ. ಸರ್ಕಾರ, ಇಲಾಖೆ ಮತ್ತು ಸ್ವಯಂ ಸೇವಾ ಸಂಸ್ಥೆಗಳೊAದಿಗೆ ಸಾರ್ವಜನಿಕರು ಸಹ ಕೈಜೋಡಿಸಬೇಕು ಎಂದು ಹೇಳಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ ಅವರು ಮಾತನಾಡಿ, ಸರ್ಕಾರ ಶಿಕ್ಷಣಕ್ಕಾಗಿ ಹಲವು ರೀತಿಯ ಸೌಲಭ್ಯಗಳನ್ನು ನೀಡುತ್ತಿದೆ. ಇವುಗಳನ್ನು ಮಕ್ಕಳು ಬಳಸಿಕೊಳ್ಳಬೇಕು. ಜ್ಞಾನದಿಂದ ಮಾತ್ರ ಎಲ್ಲವನ್ನು ಪಡೆಯಲು ಸಾಧ್ಯ. ಹಾಗಾಗಿ ಮಕ್ಕಳು ಓದುವ ವಯಸ್ಸಿನಲ್ಲಿ ಓದಬೇಕು. ಪ್ರೀತಿ-ಪ್ರೇಮ, ಸಾಮಾಜಿಕ ಜಾಲತಾಣಗಳು ಹಾಗೂ ಇನ್ನೀತರೆ ಚಟುವಟಿಕೆಗಳಿಗೆ ಆಕರ್ಷಿತರಾಗಬಾರದು ಎಂದು ಕಿವಿಮಾತು ಹೇಳಿದರು. ಸಾಮಾನ್ಯವಾಗಿ ಮಕ್ಕಳು ತಪ್ಪು ಮಾಡುವುದು ಸಹಜ, ಅದನ್ನು ತಿದ್ದಿಕೊಂಡು ಆದರ್ಶ ಜೀವನ ರೂಪಿಸಿಕೊಳ್ಳಬೇಕು. ಚಿಕ್ಕ ವಯಸ್ಸಿನಲ್ಲಿ ಜೀವನದ ಸ್ವಾರಸ್ಯ ಕಳೆದುಕೊಂಡಲ್ಲಿ ಇಡೀ ಜೀವನ ಕತ್ತಲೆಯಲ್ಲಿ ಕಳೆಯಬೇಕಾಗುತ್ತದೆ. ಹಾಗಾಗಿ ಶಿಕ್ಷಣ ಪಡೆಡುಕೊಳ್ಳಬೇಕು. ಯಾರೂ ಶಾಲೆಯಿಂದ ಹೊರಗುಳಿಯಬಾರದು. ಕಾನೂನು ಅರಿವು ಹೊಂದಬೇಕು ಎಂದು ತಿಳಿಸಿದರು. ರೀಡ್ಸ್ ಸಂಸ್ಥೆ ಕಾರ್ಯನಿರ್ವಾಹಕ ನಿರ್ದೇಶಕ ಸಿ.ತಿಪ್ಪೇಶಪ್ಪ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ದೇಶದ ಭವಿಷ್ಯ ಮಕ್ಕಳು. ಮಕ್ಕಳ ಮೇಲೆ ಹಲವಾರು ರೀತಿಯ ಶೋಷಣೆಗಳಾಗುತ್ತಿರುವುದು ಶೋಷನೀಯ ಸಂಗತಿ. ಬಾಲ್ಯವಿವಾಹ, ಪೋಕ್ಸೋ ಘಟನೆಗಳಲ್ಲಿ ಅಪ್ರಾಪ್ತೆಯರು ಬಾಲಗರ್ಭೀಣಿಯರಾಗುತ್ತಿದ್ದಾರೆ. ಇದಕ್ಕೆ ಪ್ರಮುಖ ಕಾರಣ ಬಡತನ, ಅನಕ್ಷರತೆ. ಸರ್ಕಾರ, ಇಲಾಖೆಗಳ ಜೊತೆಗೂಡಿ ಸ್ವಯಂ-ಸೇವಾ ಸಂಸ್ಥೆಗಳು ಸಮುದಾಯಗಳಲ್ಲಿ ಜಾಗೃತಿ ಅರಿವು ಮೂಡಿಸಲಾಗುತ್ತಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಮಕ್ಕಳ ರಕ್ಷಣೆಗಾಗಿ ಕಾನೂನು ಪುಸ್ತಕ (2ನೇ ಆವೃತ್ತಿ) ಪುಸ್ತಕ, ಮಕ್ಕಳ ಸ್ನೇಹಿ ಕಿರುಪುಸ್ತಕ ಮತ್ತು ಬಾಲ್ಯವಿವಾಹ ನಿಷೇಧ ಕುರಿತು ಪೋಸ್ಟರ್ ಬಿಡುಗಡೆಗೊಳಿಸಿದರು. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ನಿಕಟಪೂರ್ವ ಅಧ್ಯಕ್ಷ ಹೆಚ್.ಸಿ ರಾಘವೇಂದ್ರ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ‘ಬಾಲ್ಯವಿವಾಹ ತಡೆಗಟ್ಟುವಲ್ಲಿ ಸವಾಲುಗಳು ಮತ್ತು ಪರಿಹಾರಗಳು’ ಎಂಬ ವಿಷಯ ಕುರಿತು ವಿಸ್ತಾರವಾದ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಬಳ್ಳಾರಿ ನಗರ ಡಿವೈಎಸ್‌ಪಿ ಹಾಗೂ ಎಸ್.ಜೆ.ಪಿ.ಯು ಹಿರಿಯ ಮಕ್ಕಳ ಕಲ್ಯಾಣ ಪೊಲೀಸ್ ಅಧಿಕಾರಿ ಚಂದ್ರಕಾAತ ನಂದಾರೆಡ್ಡಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಮಕ್ಕಳ ರಕ್ಷಣಾಧಿಕಾರಿ ಸುಭದ್ರಾದೇವಿ, ರೀಡ್ಸ್ ಸಂಸ್ಥೆಯ ಕಾರ್ಯಕಾರಿ ಸಮಿತಿಯ ಸದಸ್ಯ ಹನುಮಂತ ರೆಡ್ಡಿ, ಸ್ವಯಂ ಸೇವಾ ಸಂಸ್ಥೆಯ ಮುಖ್ಯಸ್ಥ ಸುರೇಶ್ ಸೇರಿದಂತೆ ಸಹಾಯವಾಣಿಯ ಸಂಯೋಜಕರು 1098 ಮತ್ತು ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ಯುವಕ-ಯುವತಿಯರು, ಸಾರ್ವಜನಿಕರು ಉಪಸ್ಥಿತರಿದ್ದರು. ರೀಡ್ಸ್ ಸಂಸ್ಥೆಯ ಸಂಯೋಜಕ ಕೆ.ಎಂ.ತಿಪ್ಪೇಸ್ವಾಮಿ ಸ್ವಾಗತಿಸಿ, ಕಾರ್ಯಾಗಾರ ನಿರೂಪಿಸಿದರು. ಯೋಜನಾ ವ್ಯವಸ್ಥಾಪಕಿ ಕೆ.ಸೀತಾಮಹಾಲಕ್ಷಿö್ಮ ವಂದಿಸಿದರು. --------------

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ ಕೋಸಂಬೆ ಅವರಿಂದ ವಸತಿ ನಿಲಯ ಮತ್ತು ಶಾಲೆಗೆ ಭೇಟಿ ಪರಿಶೀಲನೆ

ಬಳ್ಳಾರಿ,ನ.27(ಕರ್ನಾಟಕ ವಾರ್ತೆ): ನಗರದ ಬಸವ ಭವನ ಹತ್ತಿರದ ಹಿಂದುಳಿದ ವರ್ಗಗಳ ಬಾಲಕಿಯರ ವಸತಿ ನಿಲಯಕ್ಕೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ ಕೋಸಂಬೆ ಅವರು ಗುರುವಾರ ಭೇಟಿ ನೀಡಿ ವಸತಿ ನಿಲಯದಲ್ಲಿ ಕೊಠಡಿ, ಶೌಚಾಲಯ, ಉಗ್ರಾಣ ಕೊಠಡಿ, ಕುಡಿಯುವ ನೀರಿನ ಘಟಕ, ಅಡುಗೆ ಕೊಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ವಸತಿ ನಿಲಯದಲ್ಲಿ ಅಡುಗೆ ಬಳಸುವ ಕಳಪೆ ತರಕಾರಿ ಮತ್ತು ಆಹಾರ ಧಾನ್ಯ ಕಂಡು ವಾರ್ಡನ್ ವಿರುದ್ಧ ಅಸಮಾಧಾನ ವ್ಯಪಡಿಸಿದರು. ಮುಂದಿನ ದಿನಗಳಲ್ಲಿ ಗುಣಮಟ್ಟ ಕಾಪಾಡುವಂತೆ ಸೂಚನೆ ನೀಡಿದರು. ವಿದ್ಯಾರ್ಥಿನಿಯರಿಗೆ ಏನಾದರೂ ಸಮಸ್ಯೆ ಇದ್ದಲ್ಲಿ ಹಾಗೂ ತೊಂದರೆ ಆದಲ್ಲಿ 1098 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದು ಕಿವಿಮಾತು ಹೇಳಿದರು. ಬಳಿಕ ನಗರದ ಹೊರವಲಯದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಗತ್ಯ ಸಲಹೆ-ಸೂಚನೆ ನೀಡಿದರು. ನಂತರ ಜಿಲ್ಲಾ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ, ದಿನನಿತ್ಯದ ಆಹಾರ ನೀಡುವ ವೇಳಾಪಟ್ಟಿ, ಕಾಲಕಾಲಕ್ಕೆ ಖೈದಿಗಳ ಆರೋಗ್ಯ ತಪಾಸಣೆ, ಅವರಿಗೆ ಒದಗಿಸಲಾದ ಕೆಲಸ ಕುರಿತು ಕಾರಾಗೃಹ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ಜಿಲ್ಲಾ ಕೇಂದ್ರ ಕಾರಾಗೃಹದ ಅಧೀಕ್ಷಕಿ ಲತಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು, ಜಿಲ್ಲಾ ಶಸ್ತçಚಿಕಿತ್ಸಕ ಡಾ.ಬಸರೆಡ್ಡಿ, ಜಿಲ್ಲಾ ನಿರೂಪಣಾಧಿಕಾರಿ ಸವಿತಾ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣ ಘಟಕದ ಅಧಿಕಾರಿಗಳು ಹಾಜರಿದ್ದರು. -------------