ಶನಿವಾರ, ನವೆಂಬರ್ 15, 2025

ನ.15 ರಂದು ವಿದ್ಯುತ್ ಗ್ರಾಹಕರ ಕುಂದು-ಕೊರತೆ ಸಭೆ

ಬಳ್ಳಾರಿ,ನ.14(ಕರ್ನಾಟಕ ವಾರ್ತೆ): ಬಳ್ಳಾರಿ ನಗರ ಜೆಸ್ಕಾಂ ಉಪ ವಿಭಾಗ-1 ಮತ್ತು 2 ರ ವ್ಯಾಪ್ತಿಯ ವಿದ್ಯುತ್ ಸಂಬAಧಿಸಿದ ಸಮಸ್ಯೆಗಳನ್ನು ಆಲಿಸಲು ಮತ್ತು ಬಗೆಹರಿಸಲು ನ.15 ರಂದು ಬೆಳಿಗ್ಗೆ 11 ಗಂಟೆಗೆ ನಗರ ಜೆಸ್ಕಾಂ ಉಪ-ವಿಭಾಗದ ಸಭಾಂಗಣದಲ್ಲಿ ವಿದ್ಯುತ್ ಗ್ರಾಹಕರ ಕುಂದು-ಕೊರತೆ ಸಭೆ ಏರ್ಪಡಿಸಲಾಗಿದೆ. ಸಭೆಗೆ ಕುಂದು-ಕೊರತೆಗಳಿರುವ ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರು ಭಾಗವಹಿಸಬಹುದು ಎಂದು ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ