ಶನಿವಾರ, ನವೆಂಬರ್ 15, 2025
ನ.19 ರಂದು ಬಳ್ಳಾರಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ
ಬಳ್ಳಾರಿ,ನ.14(ಕರ್ನಾಟಕ ವಾರ್ತೆ):
ಜಿಲ್ಲಾ ಪೊಲೀಸ್ ಇಲಾಖೆಯ ವಾರ್ಷಿಕ ಕ್ರೀಡಾಕೂಟಗಳನ್ನು ನ.19 ರಂದು ನಗರದ ಡಿಎಆರ್ ಪೊಲೀಸ್ ಕವಾಯತು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.
ವಾರ್ಷಿಕ ಕ್ರೀಡಾಕೂಟಗಳ ಉದ್ಘಾಟನಾ ಸಮಾರಂಭ ನ.19 ರಂದು ಬೆಳಿಗ್ಗೆ 08 ಗಂಟೆಗೆ ನಡೆಯಲಿದ್ದು, ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಉದ್ಘಾಟನೆ ಮಾಡುವರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಬಳ್ಳಾರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಬಸವರಾಜ ಕೆ.ಎನ್ ಅವರು ಭಾಗವಹಿಸುವರು.
ವಾರ್ಷಿಕ ಕ್ರೀಡಾಕೂಟಗಳ ಸಮಾರೋಪ ಸಮಾರಂಭ ನ.21 ರಂದು ಸಂಜೆ 04.30 ಗಂಟೆಗೆ ನಗರದ ಡಿಎಆರ್ ಪೊಲೀಸ್ ಕವಾಯತು ಮೈದಾನದಲ್ಲಿ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಬಳ್ಳಾರಿ ವಲಯ ಪೊಲೀಸ್ ಮಹಾನಿರೀಕ್ಷಕರಾದ ವರ್ತಿಕಾ ಕಟಿಯಾರ್ ಅವರು ಭಾಗವಹಿಸುವರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ., ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ನವೀನ್ ಕುಮಾರ್, ಕೆ.ಪಿ.ರವಿಕುಮಾರ್ ಸೇರಿದಂತೆ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
---------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)


ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ