ಗುರುವಾರ, ನವೆಂಬರ್ 20, 2025

ನ.21 ರಂದು ನಿಮ್ಮ ಹಣ-ನಿಮ್ಮ ಹಕ್ಕು, ನಿಷ್ಕಿçಯ ಖಾತೆಗಳು, ಹಕ್ಕು ಪಡೆಯದ ಠೇವಣಿಗಳ ಕುರಿತು ಜಾಗೃತಿ ಕಾರ್ಯಕ್ರಮ

ಬಳ್ಳಾರಿ,ನ.20(ಕರ್ನಾಟಕ ವಾರ್ತೆ): ಹಣಕಾಸು ಸೇವೆಗಳ ಇಲಾಖೆ, ಹಣಕಾಸು ಸಚಿವಾಲಯ, ಆರ್‌ಬಿಐ, ಎಸ್‌ಎಲ್‌ಬಿಸಿ ಮತ್ತು ಬಳ್ಳಾರಿ ಜಿಲ್ಲಾಡಳಿತ ನಿರ್ದೇಶನದಂತೆ ಹಕ್ಕು ಪಡೆಯದ ನಿಷ್ಕಿçಯ ಖಾತೆಗಳ ಮುಚ್ಚುವಿಕೆ ಮತ್ತು ಮರು-ಸಕ್ರಿಯಗೊಳಿಸುವಿಕೆಗಾಗಿ ನ.21 ರಂದು ಮಧ್ಯಾಹ್ನ 12.30 ಗಂಟೆಗೆ ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಿಮ್ಮ ಹಣ-ನಿಮ್ಮ ಹಕ್ಕು, ನಿಷ್ಕಿçಯ ಖಾತೆಗಳು, ಹಕ್ಕು ಪಡೆಯದ ಠೇವಣಿಗಳ ಕುರಿತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಲೀಡ್ ಬ್ಯಾಂಕ್ ನ ಜಿಲ್ಲಾ ಮುಖ್ಯ ವ್ಯವಸ್ಥಾಪಕ ಗಿರೀಶ್ ವಿ.ಕುಲಕರ್ಣಿ ಅವರು ತಿಳಿಸಿದ್ದಾರೆ. ಹಣಕಾಸು ಸೇವೆಗಳ ಇಲಾಖೆಯು ಅಕ್ಟೋಬರ್ 03 ರಿಂದ ಡಿಸೆಂಬರ್ 31 ರವರೆಗೆ ನಿಷ್ಕಿçಯ ಖಾತೆಗಳು, ಹಕ್ಕು ಪಡೆಯದ ಠೇವಣಿಗಳು, ವಿಮಾ ಪಾಲಿಸಿ ಮೊತ್ತ, ಷೇರುಗಳನ್ನು ಇತ್ಯರ್ಥಪಡಿಸಲು ಅಭಿಯಾನ ಪ್ರಾರಂಭಿಸಿದೆ. ದಾಖಲೆಗಳ ಪ್ರಕಾರ ಬಳ್ಳಾರಿ ಜಿಲ್ಲೆಯಲ್ಲಿ 2,73,484 ನಿಷ್ಕಿçಯ ಖಾತೆಗಳಿದ್ದು, ಒಟ್ಟು 73.54 ಕೋಟಿ ರೂ. ಮೊತ್ತವಿದೆ. 10 ವರ್ಷಗಳಿಗೂ ಹೆಚ್ಚು ಕಾಲದಿಂದ ಬಾಕಿ ಇರುವ ನಿಷ್ಕಿçಯ ಖಾತೆಗಳನ್ನು ಮುಚ್ಚುವ ಅಥವಾ ಕೆವೈಸಿ ದಾಖಲೆಗಳನ್ನು ಸಲ್ಲಿಸುವ ಮೂಲಕ ನಿಷ್ಕಿçಯ ಖಾತೆಗಳನ್ನು ಮರು-ಸಕ್ರಿಯಗೊಳಿಸಿಕೊಳ್ಳಬೇಕು. ಆನ್‌ಲೈನ್ https://udgam.rbi.org.in ವೆಬ್‌ಸೈಟ್ ಗೆ ಭೇಟಿ ನೀಡಿ ಪರಿಶೀಲಿಸಬಹುದು ಅಥವಾ ಗ್ರಾಹಕರು ತಮ್ಮ ಹತ್ತಿರದ ಬ್ಯಾಂಕ್ ಶಾಖೆ, ಎಲ್‌ಐಸಿ ಕಚೇರಿಗೆ ಭೇಟಿ ನೀಡಿ, ಕೆವೈಸಿ ದಾಖಲೆಗಳನ್ನು ಸಲ್ಲಿಸುವ ಮೂಲಕ ನಿಷ್ಕಿçಯ ಖಾತೆಗಳ ಮುಚ್ಚುವಿಕೆ ಮತ್ತು ಮರು-ಸಕ್ರಿಯಗೊಳಿಸುವಿಕೆಗಾಗಿ ಇತ್ಯರ್ಥಪಡಿಸಿಕೊಳ್ಳಬೇಕು. ಬಳ್ಳಾರಿಯ ಸಾರ್ವಜನಿಕರು ಈ ಸೌಲಭ್ಯವನ್ನು ಬಳಸಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ. ----------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ