ಸೋಮವಾರ, ನವೆಂಬರ್ 24, 2025

ನ.25 ರಂದು ಮಹಿಳೆಯರ ಮೇಲಿನ ದೌರ್ಜನ್ಯ ನಿರ್ಮೂಲನೆಗೆ ಅಂತರಾಷ್ಟಿçÃಯ ದಿನ ಕಾರ್ಯಕ್ರಮ

ಬಳ್ಳಾರಿ,ನ.24(ಕರ್ನಾಟಕ ವಾರ್ತೆ): ಜಿಲ್ಲಾ ನ್ಯಾಯಾಂಗ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಇವರ ಸಂಯುಕ್ತಾಶ್ರಯದಲ್ಲಿ ನ.25 ರಂದು ಸಂಜೆ 05 ಗಂಟೆಗೆ ನಗರದ ತಾಳೂರು ರಸ್ತೆಯ ಹೊಸ ನ್ಯಾಯಾಲಯದ ಸಭಾಂಗಣದಲ್ಲಿ ‘ಮಹಿಳೆಯರ ಮೇಲಿನ ದೌರ್ಜನ್ಯ ನಿರ್ಮೂಲನೆಗೆ ಅಂತರಾಷ್ಟಿçÃಯ ದಿನ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಕೆ.ಜಿ.ಶಾಂತಿ ಅವರು ಕಾರ್ಯಕ್ರಮ ಉದ್ಘಾಟಿಸುವರು. ಸಂಪನ್ಮೂಲ ವ್ಯಕ್ತಿಗಳಾಗಿ ಜಿಲ್ಲಾ ವಕೀಲರ ಸಂಘದ ವಕೀಲರಾದ ಶಿವಲೀಲ ಅವರು ಭಾಗವಹಿಸುವರು. ಕಾರ್ಯಕ್ರಮದಲ್ಲಿ ಜಿಲ್ಲಾ ನ್ಯಾಯಾಲಯದ ಎಲ್ಲಾ ನ್ಯಾಯಾಧೀಶರು ಹಾಗೂ ನ್ಯಾಯಾಲಯದ ಸಿಬ್ಬಂದಿ ವರ್ಗ ಉಪಸ್ಥಿತರಿರುವರು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ತಿಳಿಸಿದ್ದಾರೆ. --------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ