ಬುಧವಾರ, ನವೆಂಬರ್ 26, 2025
ನ.26 ರಂದು ‘ಸಂವಿಧಾನ ದಿನಾಚರಣೆ’ ಕಾರ್ಯಕ್ರಮ
ಬಳ್ಳಾರಿ,ನ.25(ಕರ್ನಾಟಕ ವಾರ್ತೆ):
ಜಿಲ್ಲಾ ನ್ಯಾಯಾಂಗ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಂವಿಧಾನ ದಿನಾಚರಣೆ ಇವರ ಸಂಯುಕ್ತಾಶ್ರಯದಲ್ಲಿ ನ.26 ರಂದು ಸಂಜೆ 05 ಗಂಟೆಗೆ ನಗರದ ತಾಳೂರು ರಸ್ತೆಯ ಹೊಸ ನ್ಯಾಯಾಲಯ ಸಭಾಂಗಣದಲ್ಲಿ “ಸಂವಿಧಾನ ದಿನಾಚರಣೆ” ಕಾರ್ಯಕ್ರಮ ಏರ್ಪಡಿಸಲಾಗಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಆದ ಕೆ.ಜಿ.ಶಾಂತಿ ಕಾರ್ಯಕ್ರಮ ಉದ್ಘಾಟಿಸುವರು.
ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶ ವೆಂಕಟೇಶ್ ಅವರು ಸಂಪನ್ಮೂಲ ವ್ಯಕ್ತಿಗಳಾಗಿ, ಎಲ್ಲಾ ಗೌರವಾನ್ವಿತ ನ್ಯಾಯಾಧೀಶರು, ನ್ಯಾಯಾಲಯದ ಸಿಬ್ಬಂದಿ ವರ್ಗ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
-------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ