ಬುಧವಾರ, ನವೆಂಬರ್ 26, 2025

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಅಧ್ಯಕ್ಷ ಶಶಿಧರ್ ಕೋಸಂಬೆ ನ.27 ರಂದು ಬಳ್ಳಾರಿಗೆ

ಬಳ್ಳಾರಿ,ನ.25(ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷರಾದ ಶಶಿಧರ್ ಕೋಸಂಬೆ ಅವರು ನವೆಂಬರ್ 27 ರಂದು ಬಳ್ಳಾರಿಗೆ ಆಗಮಿಸಲಿದ್ದಾರೆ. ನ.27 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಬಿಡಿಎಎ ಸಭಾಂಗಣದಲ್ಲಿ ಏರ್ಪಡಿಸಿರುವ ಬಾಲ್ಯವಿವಾಹ ತಡೆಗಟ್ಟುವಲ್ಲಿ ಸವಾಲುಗಳು ಮತ್ತು ಪರಿಹಾರಗಳು ಎಂಬ ವಿಷಯದ ಕುರಿತು ಒಂದು ದಿನದ ರಾಜ್ಯಮಟ್ಟದ ಕಾರ್ಯಾಗಾರ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಬಳಿಕ ಮಧ್ಯಾಹ್ನ 02 ಗಂಟೆಗೆ ಬಳ್ಳಾರಿ ನಗರದ ವಿವಿಧ ಅಂಗನವಾಡಿ ಕೇಂದ್ರಗಳು, ಪೊಲೀಸ್ ಠಾಣೆ, ಮಕ್ಕಳ ಪಾಲನಾ ಸಂಸ್ಥೆ, ದತ್ತು ಕೇಂದ್ರ, ವಸತಿ ನಿಲಯ, ಶಾಲೆ, ಜಿಲ್ಲಾ ಆಸ್ಪತ್ರೆ ಭೇಟಿ ನೀಡಿ ಪರಿಶೀಲನೆ ನಡೆಸುವರು. ನಂತರ ರಾತ್ರಿ 08 ಗಂಟೆಗೆ ಬಳ್ಳಾರಿಯಿಂದ ಬೆಂಗಳೂರಿಗೆ ಪ್ರಯಾಣಿಸುವರು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಕಾರ್ಯದರ್ಶಿಗಳು ತಿಳಿಸಿದ್ದಾರೆ. -----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ