ಬುಧವಾರ, ನವೆಂಬರ್ 26, 2025

ಬಳ್ಳಾರಿ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ 3 ಜನ ಕ್ರೀಡಾಪಟುಗಳು ಖೇಲೊ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ 2025

ಬಳ್ಳಾರಿ,ನ.25(ಕರ್ನಾಟಕ ವಾರ್ತೆ): ಭಾರತ ಸರ್ಕಾರದ ಕ್ರೀಡಾ ಮಂತ್ರಾಲಯ, ಭಾರತೀಯ ಕ್ರೀಡಾ ಪ್ರಾಧಿಕಾರ ಮತ್ತು ಅಸೋಸಿಯೇಷನ್ ಆಫ್ ಇಂಡಿಯನ್ ಯೂನಿವರ್ಸಿಟಿಸ್ ಹಾಗೂ ರಾಜಸ್ತಾನ್ ಸರ್ಕಾರದ ಕ್ರೀಡಾ ಸಚಿವಾಲಯದ ಸಹಯೋಗದೊಂದಿಗೆ ರಾಜಸ್ಥಾನದ ಜೈಪುರದಲ್ಲಿ ನವೆಂಬರ್ 25 ರಿಂದ ಡಿಸೆಂಬರ್ 5 ರವರೆಗೆ ನಡೆಯುತ್ತಿರುವ ಖೇಲೋ ಇಂಡಿಯಾ ಯುನಿವರ್ಸಿಟಿ ಗೇಮ್ಸ್ ನಲ್ಲಿ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ 3 ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ, ಫ್ರೀ ಸ್ಟೆöÊಲ್ ಕುಸ್ತಿಯಲ್ಲಿ ಹೊಸಪೇಟೆ ಶ್ರೀ ಮಾತಾ ಕಾಲೇಜ್‌ನ ಮಂಜುನಾಥ್, ಅಥ್ಲೆಟಿಕ್ಸ್ನಲ್ಲಿ ಲೋಕೇಶ್ ರಾಥೋಡ್ ಡೆಕಾಥ್ಲಾನ್, ಹೂವಿನಹಡಗಲಿ ಜಿಬಿಆರ್ ಕಾಲೇಜ್‌ನ ಸಚಿನ್ ಹ್ಯಾಮರ್ ಥ್ರೋ, ಮೂರು ಜನ ಕ್ರೀಡಾಪಟುಗಳು ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಕ್ರೀಡಾಕೂಟದಲ್ಲಿ ಶ್ರೇಷ್ಠಸ್ಥಾನ ಪಡೆದಿರುತ್ತಾರೆ, ಬಳ್ಳಾರಿ ವಿವಿಯ ಭರವಸೆಯ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ ಇವರಿಗೆ ವಿಶ್ವವಿದ್ಯಾಲಯದ ಕುಲಪತಿಗಳು, ಕುಲಸಚಿವರು, ಮೌಲ್ಯಮಾಪನ ಕುಲಸಚಿವರು, ಹಣಕಾಸು ಅಧಿಕಾರಿಗಳು, ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗ ಹಾಗೂ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆ. ---------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ