ಶನಿವಾರ, ನವೆಂಬರ್ 15, 2025

ಬೀದಿ ನಾಯಿಗಳು ವಾಸವಿರುವ ಬಗ್ಗೆ ಮಾಹಿತಿ ನೀಡಲು ಸೂಚನೆ

ಬಳ್ಳಾರಿ,ನ.14(ಕರ್ನಾಟಕ ವಾರ್ತೆ): ಕುರುಗೋಡು ಪುರಸಭೆ ಮತ್ತು ಕುರೇಕುಪ್ಪ ಪುರಸಭೆ ವ್ಯಾಪ್ತಿಗೆ ಬರುವ ಸರ್ಕಾರಿ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣಗಳ ಮುಖ್ಯಸ್ಥರು ಸರ್ವೋಚ್ಚ ನ್ಯಾಯಾಲಯ ನಿರ್ದೇಶನದಂತೆ ತಮ್ಮ ಸಂಸ್ಥೆಯ ಆವರಣದಲ್ಲಿ ಬೀದಿ ನಾಯಿಗಳು ವಾಸವಿದ್ದಲ್ಲಿ, ಪರಿಶೀಲಿಸಿ ಬೀದಿ ನಾಯಿಗಳ ಸಂಖ್ಯೆಯ ಮಾಹಿತಿಯನ್ನು ಕುರುಗೋಡು ಪುರಸಭೆ ಮತ್ತು ಕುರೇಕುಪ್ಪ ಪುರಸಭೆ ಕಚೇರಿಗೆ ಸಲ್ಲಿಸಬೇಕು ಎಂದು ಮುಖ್ಯಾಧಿಕಾರಿಗಳು ತಿಳಿಸಿದ್ದಾರೆ. *ಸೂಚನೆ:* ಸರ್ಕಾರಿ ಮತ್ತು ಖಾಸಗಿ ಸಂಸ್ಥೆಯ ಆವರಣದಲ್ಲಿ ಬೀದಿ ನಾಯಿಗಳ ಉಪಟಳ ತಡೆಯಲು ಹಾಗೂ ಅವುಗಳ ಪ್ರದೇಶ ನಿಯಂತ್ರಿಸಲು ಕ್ರಮ ವಹಿಸಬೇಕು. ನಗರ ಸ್ಥಳೀಯ ಸಂಸ್ಥೆಗಳಿAದ ಬೀದಿ ನಾಯಿಗಳನ್ನು ಸ್ಥಳಾಂತರಿಸಲು ಸಹಕರಿಸಲು ಹಾಗೂ ಅವುಗಳ ಪ್ರವೇಶ ನಿರ್ಭಂಧಿಸುವದನ್ನು ಮೇಲ್ವಿಚಾರಣೆ ಮಾಡಲು ತಮ್ಮ ಸಂಸ್ಥೆ ವತಿಯಿಂದ ಒಬ್ಬ ಜವಾಬ್ದಾರಿಯುತ ನೌಕರರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಬೇಕು. ತಮ್ಮ ಸಂಸ್ಥೆಯ ವ್ಯಾಪ್ತಿಯಲ್ಲಿ ಪುನಃ ನಾಯಿಗಳು ವಾಸ ಮಾಡಲು ಅವಕಾಶ ಕೊಟ್ಟಲ್ಲಿ ಅದನ್ನು ಸ್ಥಳಾಂತರಿಸುವ ವೆಚ್ಚವನ್ನು ತಮ್ಮ ಸಂಸ್ಥೆಯಿAದ ವಸೂಲಿ ಮಾಡಲಾಗುವುದು. ಸರ್ವೋಚ್ಚ ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿದ್ದಲ್ಲಿ ನ್ಯಾಯಾಲಯದ ಆದೇಶದಂತೆ ತಮ್ಮ ವಿರುದ್ಧ ಕಾನೂನು ಕ್ರಮ ವಹಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ