ಶುಕ್ರವಾರ, ನವೆಂಬರ್ 21, 2025
ವ್ಯಕ್ತಿ ಕಾಣೆ: ಪತ್ತೆಗೆ ಮನವಿ
ಬಳ್ಳಾರಿ,ನ.21(ಕರ್ನಾಟಕ ವಾರ್ತೆ):
ನಗರದ ಸಿರುಗುಪ್ಪ ರಸ್ತೆಯ ಗಾಯತ್ರಿ ನಗರ ನಿವಾಸಿಯಾದ ಎಂ.ಸುಧಾಕರ್ ಎನ್ನುವ 48 ವರ್ಷದ ವ್ಯಕ್ತಿಯು ಬಿಎಮ್‌ಸಿಆರ್‌ಸಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದು, ನ.19 ರಂದು ಆಸ್ಪತ್ರೆ ಆವರಣದ ಇಂದಿರಾ ಕ್ಯಾಂಟೀನ್ ಹತ್ತಿರ ಕಾಣೆಯಾಗಿಯಾಗಿದ್ದಾರೆ. ಈ ಕುರಿತು ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಪೋಲಿಸ್ ಸಬ್ ಇನ್ಸ್ಪೆಕ್ಟರ್ ಅವರು ತಿಳಿಸಿದ್ದಾರೆ.
ಚಹರೆ ಗುರುತು:
ಅಂದಾಜು 5.4 ಅಡಿ ಎತ್ತರ, ಕೋಲು ಮುಖ, ಎಣ್ಣೆಗೆಂಪು ಮೈಬಣ್ಣ, ತೆಳುವಾದ ಮೈಕಟ್ಟು ಹೊಂದಿರುತ್ತಾನೆ. ಕಾಣೆಯಾದ ಸಂದರ್ಭದಲ್ಲಿ ಕಪ್ಪು ಬಣ್ಣದ ಅಂಗಿ, ಕಪ್ಪು ಬಣ್ಣದ ಜೀನ್ಸ್ ಪ್ಯಾಂಟ್ ಮತ್ತು ನೀಲಿ ಬಣ್ಣದ ಟಾವೆಲ್, ತಲೆಗೆ ಕೆಂಪು ಬಣ್ಣದ ಕ್ಯಾಪ್ ಧರಿಸಿರುತ್ತಾನೆ.
ವ್ಯಕ್ತಿಯ ಬಗ್ಗೆ ಸುಳಿವು ಸಿಕ್ಕಲ್ಲಿ ಕೌಲ್‌ಬಜಾರ್ ಪೊಲೀಸ್ ಠಾಣೆಯ ದೂ.08392-240731, 244145, ಪಿಐ ಮೊ.9480803047, ಪಿಎಸ್‌ಐ ಮೊ.94808203085 ಅಥವಾ ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ