ಬುಧವಾರ, ನವೆಂಬರ್ 26, 2025

ಜಾನಪದ ಕಲಾತಂಡ ಆಯ್ಕೆ: ಅರ್ಜಿ ಆಹ್ವಾನ

ಬಳ್ಳಾರಿ,ನ.26(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳನ್ನು ಜಾನಪದ ಪ್ರದರ್ಶನದ ಮೂಲಕ ಜನಜಾಗೃತಿ ನೀಡಲು ಜಾನಪದ ಕಲಾತಂಡ ಆಯ್ಕೆ ಮಾಡಲು ಉದ್ದೇಶಿಸಲಾಗಿದ್ದು, ಆಸಕ್ತ ಕಲಾ ತಂಡಗಳು ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಆಹ್ವಾನಿಸಲಾಗಿದೆ. ರಾಷ್ಟಿçÃಯ ಆರೋಗ್ಯ ಅಭಿಯಾನದಡಿ ಪ್ರಸ್ತಕ ಸಾಲಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಾರ್ಯಕ್ರಮಗಳು, ವಿವಿಧ ರಾಷ್ಟಿçÃಯ ಕಾರ್ಯಕ್ರಮಗಳ ಕುರಿತು ಬಳ್ಳಾರಿ ಜಿಲ್ಲೆಯಲ್ಲಿ ಜಾನಪದ ಕಲಾ ಪ್ರರ್ದಶನದ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಗುರಿ ಹೊಂದಲಾಗಿದ್ದು, ಈಗಾಗಲೇ ಬೇರೆ ಬೇರೆ ಇಲಾಖೆಗಳ ಕಾರ್ಯಕ್ರಮಗಳನ್ನು ಪ್ರದರ್ಶನ ಮಾಡಿರುವ ಮತ್ತು ಅರ್ಜಿ ನಮೂನೆಯಲ್ಲಿ ಉಲ್ಲೇಖಿಸಿರುವ ದಾಖಲಾತಿಗಳನ್ನು ಸಲ್ಲಿಸುವ ತಂಡಗಳನ್ನು ಜಿಲ್ಲಾ ಜಾನಪದ ಕಲಾ ತಂಡದ ಆಯ್ಕೆ ಸಮಿತಿ ಮೂಲಕ ಆಯ್ಕೆ ಮಾಡಲಾಗುತ್ತ್ತದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಾರ್ತಾ ಇಲಾಖೆ, ಸಂಗೀತ ಮತ್ತು ನಾಟಕ ಅಕಾಡೆಮಿ ಅಡಿ ನೋಂದಣಿಯಾಗಿ ಈಗಾಗಲೇ ಸರ್ಕಾರಿ ಕಾರ್ಯಕ್ರಮಗಳ ಅನುಷ್ಟಾನದಲ್ಲಿ ಜಾನಪದ ಕಲಾತಂಡದ ಮೂಲಕ ಪ್ರರ್ದಶನವನ್ನು ನೀಡಿರುವ ಹಾಗೂ ಪ್ರಸ್ತುತ ಆರೋಗ್ಯ ಇಲಾಖೆಯ ಕಾರ್ಯಕ್ರಮಗಳನ್ನು ಪ್ರಚಾರ ಮಾಡುವ ಇಚ್ಛೆಯುಳ್ಳ ಬಳ್ಳಾರಿ ಜಿಲ್ಲೆಯ ನೋಂದಣಿ ಹೊಂದಿರುವ ಕಲಾತಂಡಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಗಳನ್ನು ಕಚೇರಿಯ ಅವಧಿಯಲ್ಲಿ ಐಇಸಿ ವಿಭಾಗ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯ, ಬಳ್ಳಾರಿ, ಇಲ್ಲಿ ಖುದ್ದು ಪಡೆಯಬಹುದಾಗಿದ್ದು, ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಲಗತ್ತಿಸಿ ಐಇಸಿ ವಿಭಾಗ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು, ಬಳ್ಳಾರಿ ಇಲ್ಲಿಗೆ ಡಿಸೆಂಬರ್ 03 ರೊಳಗಾಗಿ ಸಲ್ಲಿಸಬಹುದು. ದಾಖಲಾತಿಗಳು ನಿಯಮಾನುಸಾರ ಇದ್ದ ತಂಡಗಳಿಗೆ ಜಿಲ್ಲಾ ಮಟ್ಟದಲ್ಲಿ ಆಯ್ಕೆ ಸಮಿತಿಯ ಉಪಸ್ಥಿತಿಯಲ್ಲಿ ಕಲಾಪ್ರರ್ದಶನ ಮೂಲಕ ಆಯ್ಕೆ ಮಾಡಲಾಗುವುದು. *ಸೂಚನೆ:* ಕಲಾತಂಡದ ಅಧೀಕೃತ ನೋಂದಣಿ, ಆರೋಗ್ಯ ಇಲಾಖೆಯವರು ಸೂಚಿಸಿದ ಹಳ್ಳಿಗಳಲ್ಲಿ ಕಾರ್ಯಕ್ರಮ ನಡೆಸುವುದು. ಪ್ರತಿ ದಿನ 2 ಕಾರ್ಯಕ್ರಮಗಳನ್ನು ನಡೆಸುವುದು. ಪ್ರತಿ ತಂಡದಲ್ಲಿ 8 ಜನ ಇರಬೇಕು (ಕನಿಷ್ಟ ಇಬ್ಬರು ಮಹಿಳಾ ಕಲಾವಿದರು ಕಡ್ಡಾಯ). ರಾಷ್ಟಿçÃಕೃತ ಬ್ಯಾಂಕ್‌ನಲ್ಲಿ ತಂಡದ ಬ್ಯಾಂಕ್ ಖಾತೆ ಪಾಸ್ ಬುಕ್ ನೋಂದಣಿಯಾಗಿರಬೇಕು. ಕಲಾ ತಂಡದ ಪಾನ್‌ಕಾರ್ಡ್ ಕಡ್ಡಾಯ. ಹೆಚ್ಚಿನ ಮಾಹಿತಿಗಾಗಿ ಮೊ.8722151697 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ