ಸೋಮವಾರ, ನವೆಂಬರ್ 3, 2025
ಯುವತಿ ಕಾಣೆ; ಪತ್ತೆಗೆ ಮನವಿ
ಬಳ್ಳಾರಿ,ನ.03(ಕರ್ನಾಟಕ ವಾರ್ತೆ):
ಸಿರುಗುಪ್ಪ ತಾಲ್ಲೂಕಿನ ಹಳೇಕೋಟೆ ಗ್ರಾಮದ ನಿವಾಸಿ ಜ್ಯೋತಿ ಎನ್ನುವ 19 ವರ್ಷದ ಯುವತಿ ಅ.28 ರಂದು ಕಾಣೆಯಾಗಿರುವ ಕುರಿತು ತೆಕ್ಕಲಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ತೆಕ್ಕಲಕೋಟೆ ಪೊಲೀಸ್ ಠಾಣೆಯ ಸಬ್‌ಇನ್ಸ್ ಪೆಕ್ಟರ್ ಮನವಿ ಮಾಡಿದ್ದಾರೆ.
ಚಹರೆ ಗುರುತು: ಎತ್ತರ 5.2 ಅಡಿ, ಧೃಡವಾದ ಮೈಕಟ್ಟು, ಗೋಧಿ ಮೈಬಣ್ಣ, ದುಂಡುಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾಳೆ. ಕಾಣೆಯಾದ ಸಂದರ್ಭದಲ್ಲಿ ತಿಳಿ ನೀಲಿ ಬಣ್ಣದ ಟಾಪ್, ಬಿಳಿ ಬಣ್ಣದ ಲೆಗ್ಗಿನ್ ಧರಿಸಿರುತ್ತಾಳೆ.
ಮೇಲ್ಕಂಡ ಚಹರೆಯುಳ್ಳ ಯುವತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ತೆಕ್ಕಲಕೋಟೆ ಪೊಲೀಸ್ ಠಾಣೆ ಪಿಎಸ್‌ಐ ದೂ.08396-248013, ಮೊ.9480803055, ತೆಕ್ಕಲಕೋಟೆ ವೃತ್ತದ ಸಿಪಿಐ ದೂ.08396-248044, ಬಳ್ಳಾರಿ ಗ್ರಾಮೀಣ ಉಪವಿಭಾಗ ಡಿಎಸ್‌ಪಿ ದೂ.08392-276000, ಬಳ್ಳಾರಿ ಎಸ್ಪಿ ದೂ.08932-258400 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ