ಮಂಗಳವಾರ, ನವೆಂಬರ್ 4, 2025
ನ.11 ರಂದು ವೀರ ವನಿತೆ ಓನಕೆ ಓಬವ್ವ ಜಯಂತಿ ಕಾರ್ಯಕ್ರಮ
ಬಳ್ಳಾರಿ,ನ.04(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ವೀರ ವನಿತೆ ಓನಕೆ ಓಬವ್ವ ಜಯಂತಿ ಕಾರ್ಯಕ್ರಮವನ್ನು ನ.11 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಡಾ.ರಾಜ್ ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಚಯದ ಹೊಂಗಿರಣ ಸಭಾಂಗಣÀದಲ್ಲಿ ಆಯೋಜಿಸಲಾಗಿದೆ.
ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.
ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಬಿ.ನಾಗೇಂದ್ರ, ಜೆ.ಎನ್.ಗಣೇಶ್, ಬಿ.ಎಂ.ನಾಗರಾಜ, ಈ.ಅನ್ನಪೂರ್ಣ, ವಿಧಾನಪರಿಷತ್ ಶಾಸಕರಾದ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಶೀಲ್ ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತದ ಉಪಾಧ್ಯಕ್ಷ ಹೆಚ್.ಲಕ್ಷö್ಮಣ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಛಲವಾದಿ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಶಿವಕುಮಾರ್ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಬಳ್ಳಾರಿಯ ಸಾಹಿತಿ ಎನ್.ಡಿ.ವೆಂಕಮ್ಮ ಅವರು ಜಯಂತಿ ಕುರಿತು ವಿಶೇಷ ಉಪನ್ಯಾಸ ನೀಡುವರು. ಕಾರ್ಯಕ್ರಮದಲ್ಲಿ ಬಳ್ಳಾರಿಯ ಎಸ್.ಲಕ್ಷಿö್ಮÃ ಪವನ್ ಕುಮಾರ್ ಅವರಿಂದ ಸುಗಮ ಸಂಗೀತ ಕಾರ್ಯಕ್ರಮ ಇರಲಿದೆ.
ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ., ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರಿಸ್ ಸುಮೇರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್, ಮಹಾನಗರ ಪಾಲಿಕೆಯ ಆಯುಕ್ತ ಮಂಜುನಾಥ ಪಿ.ಎಸ್., ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
-----------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)


ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ