ಬುಧವಾರ, ನವೆಂಬರ್ 26, 2025
ವ್ಯಕ್ತಿ ಕಾಣೆ: ಪತ್ತೆಗೆ ಮನವಿ
ಬಳ್ಳಾರಿ,ನ.26(ಕರ್ನಾಟಕ ವಾರ್ತೆ):
ಸಂಡೂರು ತಾಲ್ಲೂಕಿನ ದೊಡ್ಡ ಅಂತಾಪುರ ಗ್ರಾಮದ ನಿವಾಸಿ ಕೆ.ಕರಿಯಪ್ಪ ಎನ್ನುವ 25 ವರ್ಷದ ವ್ಯಕ್ತಿಯು ನ.10 ರಂದು ಊರಿಗೆ ಹೋಗುತ್ತೇನೆ ಎಂದು ಕಾಣೆಯಾಗಿದ್ದು, ಈ ಕುರಿತು ತೋರಣಗಲ್ಲು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ಮನವಿ ಮಾಡಿದ್ದಾರೆ.
ಚಹರೆ ಗುರುತು:
ಅಂದಾಜು 5.4 ಅಡಿ ಎತ್ತರ, ಸಾಧಾರಣ ಗೋಧಿ ಮೈಬಣ್ಣ, ದುಂಡು ಮುಖ ಹೊಂದಿರುತ್ತಾನೆ. ಕಾಣೆಯಾದ ಸಂದರ್ಭದಲ್ಲಿ ಮೇರುನ್ ಕಲರ್ ತುಂಬು ತೋಳಿನ ಶರ್ಟ್ ಮತ್ತು ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ, ತೆಲುಗು, ಹಿಂದಿ ಭಾಷೆ ಮಾತನಾಡುತ್ತಾನೆ.
ಕಾಣೆಯಾದ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100 ಬಳ್ಳಾರಿ ಎಸ್.ಪಿ ಅವರ ಕಚೇರಿ ದೂ.08392-258300, ತೋರಣಗಲ್ಲು ಡಿವೈಎಸ್‌ಪಿ ದೂ.9480803010, ಸಂಡೂರು ವೃತ್ತ ಸಿ.ಪಿ.ಐ ದೂ.08395-260100, 9480803036, ತೋರಣಗಲ್ಲು ಪೊಲೀಸ್ ಠಾಣೆ ದೂ.08395-250100, ಮೊ.9480803062 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ