ಬುಧವಾರ, ನವೆಂಬರ್ 26, 2025
ವ್ಯಕ್ತಿ ಕಾಣೆ: ಪತ್ತೆಗೆ ಮನವಿ
ಬಳ್ಳಾರಿ,ನ.25(ಕರ್ನಾಟಕ ವಾರ್ತೆ):
ತಾಲ್ಲೂಕಿನ ಸಿಡಿಗಿನಮೊಳ ಗ್ರಾಮದ ಶಾಕೀರ್ ಭಾಷಾ ಎನ್ನುವ 27 ವರ್ಷದ ವ್ಯಕ್ತಿಯು ಬಿ.ಡಿ.ಹಳ್ಳಿಯಿಂದ ಹೊಸ ಮೋಕಗೆ ಬಂದು ಮನೆಗೆ ಹೋಗುತ್ತೇನೆ ಎಂದು ನ.11 ರಂದು ಹೇಳಿಹೋದವನು ಮನೆಗೆ ಬಾರದೇ ಕಾಣೆಯಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಮೋಕ ಪೊಲೀಸ್ ಠಾಣೆಯ ಸಬ್‌ಇನ್ಸ್ ಪೆಕ್ಟರ್ ಮನವಿ ಮಾಡಿದ್ದಾರೆ.
ಕಾಣೆಯಾದ ವ್ಯಕ್ತಿಯ ಚಹರೆ ಗುರುತು: ಎತ್ತರ 5.4 ಅಡಿ, ದೃಢ ಮೈಕಟ್ಟು, ಕಪ್ಪು ಮೈ ಬಣ್ಣ, ಕಪ್ಪು ಕೂದಲು ಹೊಂದಿದ್ದು, ತೆಲುಗು, ಕನ್ನಡ, ಹಿಂದಿ ಭಾಷೆ ಮಾತನಾಡುತ್ತಾನೆ.
ಮೇಲ್ಕಂಡ ಚಹರೆಯುಳ್ಳ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಮೋಕ ಪೊಲೀಸ್ ಠಾಣೆಯ ಪಿ.ಎಸ್.ಐ ಮೊ.9480803050, ಬಳ್ಳಾರಿ ಎಸ್.ಪಿ ಮೊ.9480803000, ಸಿರುಗುಪ್ಪ ಉಪವಿಭಾಗ ಡಿಎಸ್‌ಪಿ ಅವರ ಮೊ.9480803021, ಪಿಡಿ ಹಳ್ಳಿ ವೃತ್ತ ಸಿಪಿಐ ಅವರ ಮೊ.9480803031 ಅಥವಾ ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ