ಮಂಗಳವಾರ, ನವೆಂಬರ್ 4, 2025

ಕನ್ನಡ ಮತ್ತು ಸಂಸ್ಕೃತಿ ಇಲಾಖೆ: ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ

ಬಳ್ಳಾರಿ,ನ.04(ಕರ್ನಾಟಕ ವಾರ್ತೆ): ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಮಕ್ಕಳು ಮತ್ತು ಯುವಜನರಲ್ಲಿರುವ ಕಲಾ ಪ್ರತಿಭೆ ಗುರುತಿಸಿ, ಅವರಿಗೆ ಉತ್ತೇಜನ ನೀಡುವ ಮತ್ತು ತಮ್ಮ ಕಲಾ ನೈಪುಣ್ಯವನ್ನು ವೃದ್ಧಿಗೊಳಿಸುವಂತೆ ಪ್ರೋತ್ಸಾಯಿಸಲು ಜಿಲ್ಲಾ ಮಟ್ಟದ ಕಲಾಪ್ರತಿಭೋತ್ಸವ ಕಾರ್ಯಕ್ರಮಕ್ಕಾಗಿ ವಿವಿಧ ಪ್ರಕಾರಗಳ ಪ್ರತಿಭೆಗಳಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸುವ ಅವಧಿಯನ್ನು ನ.20 ರ ವರೆಗೆ ವಿಸ್ತರಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. ಇದೇ ನ.26 ಮತ್ತು 27 ರಂದು ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದಲ್ಲಿ ಜಿಲ್ಲಾಮಟ್ಟದ ಕಲಾಪ್ರತಿಭೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ. ಬಾಲಪ್ರತಿಭೆ ಹಾಗೂ ಕಿಶೋರ ಪ್ರತಿಭೆ ವಿಭಾಗದಲ್ಲಿ ಏಕ ವ್ಯಕ್ತಿಯ ಸ್ಪರ್ಧೆಯಲ್ಲಿ ಶಾಸ್ತಿçÃಯ ನೃತ್ಯ, ಸುಗಮ ಸಂಗೀತ, ಚಿತ್ರಕಲೆ, ಜನಪದ ಗೀತೆ, ಕರ್ನಾಟಕ/ ಹಿಂದೂಸ್ತಾನಿ ವಾದ್ಯ ಸಂಗೀತ, ಹಿಂದೂಸ್ತಾನಿ ಮತ್ತು ಶಾಸ್ತಿçÃಯ ಸಂಗೀತ ಗಾಯನ ಸೇರಿದಂತೆ ಹಲವಾರು ಕಲಾ ಪ್ರಕಾರಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಬಾಲ ಪ್ರತಿಭೆ 08 ರಿಂದ 14 ವರ್ಷದ ಒಳಗಿನ ಹಾಗೂ ಕಿಶೋರ ಪ್ರತಿಭೆ 14 ರಿಂದ 18 ವರ್ಷದ ಒಳಗಿನ ಯುವ ಪ್ರತಿಭೆ ವಿಭಾಗದಲ್ಲಿ ಏಕ ವ್ಯಕ್ತಿಯ ಸ್ಪರ್ಧೆಯಲ್ಲಿ ನನ್ನ ಮೆಚ್ಚಿನ ಸಾಹಿತಿ (ಆಶುಭಾಷಣ), ಶಾಸ್ತಿçÃಯ ನೃತ್ಯ, ಸುಗಮ ಸಂಗೀತ, ಚಿತ್ರಕಲೆ, ಕರ್ನಾಟಕ/ಹಿಂದೂಸ್ತಾನಿ ಶಾಸ್ತಿçÃಯ ಸಂಗೀತ ಹಾಗೂ ವಾದ್ಯ ಸಂಗೀತ ಕಲಾ ಪ್ರಕಾರಗಳಿವೆ. ಯುವ ಪ್ರತಿಭೆ 18 ರಿಂದ 30 ವರ್ಷಕ್ಕಿಂತ ಕಡಿಮೆಯಾಗಿರಬೇಕು. ಸಮೂಹ ಸ್ಪರ್ಧೆಯಲ್ಲಿ ನಾಟಕ ಕಲಾ ಪ್ರಕಾರ ಇದ್ದು, ಈ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ತಂಡದ ಸದಸ್ಯರ ಸಂಖ್ಯೆ ಕನಿಷ್ಠ 10 ಮತ್ತು ಗರಿಷ್ಠ 15 ಮೀರಬಾರದು. ಸ್ಪರ್ಧೆಯಲ್ಲಿ ಭಾಗವಹಿಸುವ ಸ್ಪರ್ಧಿಗಳು ವಯಸ್ಸಿನ ದೃಢೀಕರಣಕ್ಕಾಗಿ ದಾಖಲೆಗಳನ್ನು ತಾವು ವ್ಯಾಸಂಗ ಮಾಡುತ್ತಿರುವ ವಿದ್ಯಾ ಸಂಸ್ಥೆಯಿAದ ಪಡೆದು ಅರ್ಜಿಯ ಜೊತೆಗೆ ಲಗತ್ತಿಸಬೇಕು. ಒಬ್ಬರಿಗೆ ಒಂದು ಕಲಾ ಪ್ರಕಾರದಲ್ಲಿ ಮಾತ್ರ ಸ್ಪರ್ಧಿಸಲು ಅವಕಾಶವಿದ್ದು, ಶಾಲಾ ಮುಖ್ಯಸ್ಥರು ತಮ್ಮ ಶಾಲಾ ಮೂಲಕ ಸ್ಪರ್ಧಿಗಳು ಅರ್ಜಿ ಸಲ್ಲಿಸುವಾಗ ಪ್ರತಿ ಕಲಾ ಪ್ರಕಾರ ಹಾಗೂ ಪ್ರತಿ ವಿಭಾಗದ ಸ್ಪರ್ಧಿಗಳ ಜನ್ಮ ದಿನಾಂಕವನ್ನು ದೃಢೀಕರಿಸಿದ ಪಟ್ಟಿಯನ್ನು ಪ್ರತ್ಯೇಕವಾಗಿ ಕಳುಹಿಸಬೇಕು. ಖಾಸಗಿ ಸ್ಪರ್ಧಿಯಾಗಿದ್ದಲ್ಲಿ ಶಾಲಾ-ಕಾಲೇಜಿನ ಜನ್ಮ ದಿನಾಂಕ ದೃಢೀಕರಣ ಪತ್ರ ಅಥವಾ ಪಂಚಾಯಿತಿ, ಪುರಸಭೆ, ನಗರಸಭೆ ಕಚೇರಿಗಳಿಂದ ನೀಡುವ ಜನನ ಪ್ರಮಾಣ ಪತ್ರವನ್ನು ಸಲ್ಲಿಸಬೇಕು. ಸ್ಪರ್ಧೆಗಳಲ್ಲಿ ಭಾಗವಹಿಸುವವರು ಅರ್ಜಿಯನ್ನು ನ.20 ರೊಳಗಾಗಿ ನಗರದ ಡಾ.ರಾಜ್‌ಕುಮಾರ್ ರಸ್ತೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು, ದೂ.08392-275182 ಗೆ ಅಥವಾ ಈ ವಿಳಾಸಕ್ಕೆ ನೇರವಾಗಿ ಅಂಚೆಯ ಮೂಲಕ ಸಲ್ಲಿಸಬಹುದು. ನಿಯಮಗಳು ಮತ್ತು ನಿಬಂಧನೆಗಳಿದ್ದಲ್ಲಿ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ