ಬುಧವಾರ, ನವೆಂಬರ್ 26, 2025
ವ್ಯಕ್ತಿ ಕಾಣೆ: ಪತ್ತೆಗೆ ಮನವಿ
ಬಳ್ಳಾರಿ,ನ.25(ಕರ್ನಾಟಕ ವಾರ್ತೆ):
ಸಂಡೂರು ತಾಲ್ಲೂಕಿನ ಗೊಲ್ಲಲಿಂಗಮ್ಮನಹಳ್ಳಿ ಗ್ರಾಮದ ಗಿರಿಯಪ್ಪ ಎನ್ನುವ 85 ವರ್ಷದ ವ್ಯಕ್ತಿಯು ನ.17 ರಂದು ಮಗಳ ಮನೆಯಿಂದ ರಾಂಪುರಕ್ಕೆ ಹೋಗಿ ಬರುವುದಾಗಿ ಹೇಳಿ ಕಾಣೆಯಾಗಿರುವ ಕುರಿತು ಚೋರನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ಮನವಿ ಮಾಡಿದ್ದಾರೆ.
*ಚಹರೆ ಗುರುತು:*
ಅಂದಾಜು 5.7 ಅಡಿ ಎತ್ತರ, ಕೋಲು ಮುಖ, ಗೋಧಿ ಮೈಬಣ್ಣ ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ಬಿಳಿ ಬಣ್ಣದ ತುಂಬು ತೋಳಿನ ಅಂಗಿ ಹಾಗೂ ಬಿಳಿ ಬಣ್ಣದ ಲುಂಗಿ ಧರಿಸಿರುತ್ತಾನೆ.
ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಚೋರನೂರು ಪೊಲೀಸ್ ಠಾಣೆಯ ದೂ.08395-295100, ಪಿಎಸ್‌ಐ ಮೊ.9480803063, ಸಂಡೂರು ಸಿಪಿಐ ಮೊ.9480803036, ತೋರಣಗಲ್ಲು ಡಿಎಸ್‌ಪಿ ಮೊ.9480803010 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ