ಗುರುವಾರ, ನವೆಂಬರ್ 27, 2025
ಬಾಲಕ ಕಾಣೆ: ಪತ್ತೆಗೆ ಮನವಿ
ಬಳ್ಳಾರಿ,ನ.27(ಕರ್ನಾಟಕ ವಾರ್ತೆ):
ನಗರದ ಅಲ್ಲಿಪುರ ಗ್ರಾಮದ ಸುಗ್ಗಲಮ್ಮ ಗುಡಿ ಹತ್ತಿರ ಶಂಕರ.ಕೆ ಎನ್ನುವ 11 ವರ್ಷದ ಬಾಲಕನು ನ.22 ರಂದು ಮನೆಯಿಂದ ಆಟವಾಡಲು ಹೋಗಿ ಬರುವುದಾಗಿ ಹೇಳಿ ಮರಳಿ ಬಾರದೇ ಕಾಣೆಯಾಗಿರುವ ಕುರಿತು ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ ಮನವಿ ಮಾಡಿದ್ದಾರೆ.
*ಚಹರೆ ಗುರುತು:*
ಅಂದಾಜು 04 ಅಡಿ ಎತ್ತರ, ಕೋಲು ಮುಖ, ಕಪ್ಪು ಮೈಬಣ್ಣ, ಕಪ್ಪು ಕೂದಲು, ತೆಳುವಾದ ಮೈಕಟ್ಟು ಹೊಂದಿದ್ದು, ಮೂಗಿನ ಹತ್ತಿರ ಗಾಯ ಇರುತ್ತದೆ. ಕಾಣೆಯಾದ ಸಂದರ್ಭದಲ್ಲಿ ಹಸಿರು ಬಣ್ಣದ ಅರ್ಧ ತೋಳಿನ ಟಿ-ಶರ್ಟ್ ಹಾಗೂ ನೀಲಿ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ ಮತ್ತು ತೆಲುಗು ಭಾಷೆ ಮಾತನಾಡುತ್ತಾನೆ.
ಬಾಲಕನ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯ ದೂ.08392-276461, ಮೊ.9480803049 ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ