ಬುಧವಾರ, ಡಿಸೆಂಬರ್ 31, 2025
ಜ.01ರಿಂದ 30ರವರೆಗೆ ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನ | ಪ್ರತಿಯೊಬ್ಬರೂ ರಸ್ತೆ ಸುರಕ್ಷತಾ ಜಾಗೃತಿ ಹೊಂದುವುದು ಮುಖ್ಯ: ಶಶಿಧರ ಶೆಟ್ಟಿ
ಬಳ್ಳಾರಿ,ಡಿ.31(ಕರ್ನಾಟಕ ವಾರ್ತೆ):
ಸಾರ್ವಜನಿಕರು ರಸ್ತೆ ಸಂಚಾರ ನಿಯಮಗಳ ಅರಿವು, ರಸ್ತೆಗಳಲ್ಲಿ ಸುರಕ್ಷಿತ ಸಂಚಾರ ಕುರಿತು ಜಾಗೃತಿ ಹೊಂದಬೇಕು ಎಂದು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶಶಿಧರ ಶೆಟ್ಟಿ ಅವರು ಹೇಳಿದರು.
ಬುಧವಾರದಂದು ಎಲ್ಲಾ ಜಿಲ್ಲೆಗಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು, ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ವರ್ಚುವಲ್ ಮೂಲಕ ಏರ್ಪಡಿಸಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.
ಅಪಘಾತ ಪ್ರಕರಣಗಳನ್ನು ಕಡಿಮೆಗೊಳಿಸಲು ಮತ್ತು ರಸ್ತೆಗಳಲ್ಲಿ ಸುರಕ್ಷಿತವಾಗಿ ಸಂಚರಿಸುವ ಬಗ್ಗೆ ಜಾಗೃತಿ ಮೂಡಿಸಲು ರಾಜ್ಯಾದಾದ್ಯಂತ ವಿವಿಧ ಇಲಾಖೆಗಳ ಸಹಭಾಗಿತ್ವದೊಂದಿಗೆ ಜ.01 ರಿಂದ 30 ರ ವರೆಗೆ ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ರಾಜ್ಯದಲ್ಲಿ ರಸ್ತೆ ಅಪಘಾತಗಳಿಂದಾಗಿ ಪ್ರತಿ ವರ್ಷ ಲಕ್ಷಾಂತರ ಜನರು ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಅತಿವೇಗ, ಕುಡಿದು ವಾಹನ ಚಲಾಯಿಸುವುದು. ಹೆಲ್ಮೆಟ್ ಧರಿಸದೇ ವಾಹನ ಚಲಾಯಿಸುವುದು, ಸಂಚಾರ ನಿಯಮಗಳ ಉಲ್ಲಂಘನೆ, ಅಜಾಗರೂಕ ಚಾಲನೆ ಮತ್ತು ಅರಿವಿನ ಕೊರತೆ ಅಪಘಾತಗಳಿಗೆ ಪ್ರಮುಖ ಕಾರಣಗಳಾಗಿವೆ. ನಾಗರಿಕರಲ್ಲಿ ಜವಾಬ್ದಾರಿಯುತವಾದ ಅರಿವು ಮೂಡಿಸಲು ಈ ಅಭಿಯಾನದ ಉದ್ದೇಶವಾಗಿದೆ ಎಂದರು.
ವಿಶೇಷವಾಗಿ ಶಾಲಾ-ಕಾಲೇಜು ಮಕ್ಕಳಲ್ಲಿ ಸಂಚಾರ ನಿಯಮಗಳ ಕುರಿತು ಅರಿವು ಮೂಡಿಸಲಾಗುವುದು. 18 ವರ್ಷದೊಳಗಿನ ಮಕ್ಕಳು ವಾಹನಗಳನ್ನು ಚಲಾಯಿಸುತ್ತಿರುವುದು ಕಂಡುಬರುತ್ತಿದ್ದು, ವಾಹನ ನೀಡುವ ಪೋಷಕರ ಮೇಲೆ ಕ್ರಮ ಜರುಗಿಸಲಾಗುವುದು. ರಾಷ್ಟಿçÃಯ ಹೆದ್ದಾರಿ ರಸ್ತೆಯಲ್ಲಿ ಕೆಟ್ಟುನಿಂತ ವಾಹನಗಳನ್ನು ರಸ್ತೆಯ ಮಧ್ಯದಲ್ಲಿ ನಿಲ್ಲಿಸದೇ ರಸ್ತೆ ಬದಿಗೆ ಹಾಕಿ ರಿಪೇರಿ ಮಾಡಬೇಕು. ಈ ಎಲ್ಲಾ ರಸ್ತೆ ಸುರಕ್ಷತೆಯ ಬಗ್ಗೆ ಇರುವ ಎಲ್ಲಾ ವಿಷಯಗಳ ಕುರಿತು ಜನವರಿ-1 ರಿಂದ 30 ರವರೆಗೆ ನಡೆಯುವ ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನದ ಮೂಲಕ ಎಲ್ಲಾರಿಗೂ ತಿಳುವಳಿಕೆ ನೀಡಲಾಗುವುದು.
ಇದರ ಸಂಬAಧವಾಗಿ ಶಾಲಾ-ಕಾಲೇಜುಗಳು, ಪೊಲೀಸ್ ಠಾಣೆಗಳು, ಸರ್ಕಾರಿ ಕಚೇರಿಗಳು ಹಾಗೂ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಅಭಿಯಾನ ಕಾರ್ಯಕ್ರಮ, ಬೀದಿ ನಾಟಕ ಮತ್ತು ಜಾಥಾ ಹಮ್ಮಿಕೊಳ್ಳಬೇಕು. ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಹಾಗೂ ಭಾಷಣ ಸ್ಪರ್ಧೆ ಆಯೋಜಿಸಲಾಗುವುದು ಎಂದು ಅವರು ತಿಳಿಸಿದರು.
ಸಾರಿಗೆ ಇಲಾಖೆ, ಪೊಲೀಸ್, ಸಂಚಾರ ಇಲಾಖೆ, ಶಿಕ್ಷಣ ಇಲಾಖೆ, ಆರೋಗ್ಯ ಮತ್ತು ಕಲ್ಯಾಣ ಕುಟುಂಬ ಸೇವೆಗಳು, ರಾಷ್ಟಿçÃಯ ಹೆದ್ದಾರಿ ಪ್ರಾಧಿಕಾರ, ಲೋಕೋಪಯೋಗಿ ಇಲಾಖೆ, ವಕೀಲರ ಸಂಘ, ವಿಮಾ ಕಂಪನಿಗಳು ಮತ್ತು ಎನ್‌ಜಿಓ ಸಂಸ್ಥೆಗಳಲ್ಲಿ ಎಲ್ಲಾ ಶಾಲೆಗಳು, ಕಾಲೇಜುಗಳು, ಸಾರ್ವಜನಿಕ/ಖಾಸಗಿ ಸಂಸ್ಥೆಗಳು, ಸಮುದಾಯ ಕೇಂದ್ರಗಳು, ಕ್ಲಬ್, ಆಸ್ಪತ್ರೆಗಳು, ಪೊಲೀಸ್ ಮತ್ತು ಸಂಚಾರ ಕಚೇರಿಗಳಲ್ಲಿ ಪಿಎಲ್‌ವಿ ಮತ್ತು ಎನ್‌ಜಿಓ ಪ್ರತಿನಿಧಿಗಳನ್ನು ಒಳಗೊಂಡAತೆ ರಸ್ತೆ ಸುರಕ್ಷತಾ ಕ್ರಮಗಳ ಕುರಿತು ಅಭಿಯಾನ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಗುವುದು ಎಂದರು.
ರಸ್ತೆ ನಿಯಮಗಳ ಪಾಲನೆ, ಅಪಘಾತ ತಡೆಗಟ್ಟುವಿಕೆ ಮತ್ತು ಸುರಕ್ಷಿತ ರಸ್ತೆ ಸಂಚಾರದ ಕುರಿತು ಜನಸಾಮಾನ್ಯರು, ಯುವಜನರು ಸೇರಿದಂತೆ ಪ್ರತಿಯೊಬ್ಬರಿಗೂ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಾಗೃತಿ ಜಾಥಾ, ಬೀದಿ ನಾಟಕ ಮತ್ತು ಎಲ್ಲಾ ಶಾಲಾ-ಕಾಲೇಜುಗಳಲ್ಲಿ ರಸ್ತೆ ಸುರಕ್ಷತಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.
ಬೆAಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ ರೆಡ್ಡಿ ಅವರು ಮಾತನಾಡಿ, ಅಪಘಾತಗಳನ್ನು ಕಡಿಮೆಗೊಳಿಸಲು ಎಲ್ಲರೂ ಒಗ್ಗೂಡಿ ಅರಿವು ಮೂಡಿಸುವ ಮೂಲಕ ಜಾಗೃತಿ ಹೊಂದಬೇಕಿದೆ. ಇದರಿಂದ ಅಪಘಾತಗಳನ್ನು ಶೂನ್ಯಕ್ಕೆ ತರಬಹುದಾಗಿದೆ ಎಂದು ತಿಳಿಸಿದರು.
ಅಪಘಾತಗಳಿಂದಾಗಿ ಆಗುವ ಅಂಗವಿಲತೆ ವೈಫಲ್ಯವು ಕುಟುಂಬಗಳನ್ನು ಬಹಳಷ್ಟು ಸಂಕಷ್ಟಕ್ಕೇ ದೂಡಲಿದೆ. ಸಂಚಾರಿ ಮಾರ್ಗಸೂಚಿಗಳನ್ನು ಪಾಲನೆ ಮಾಡುವುದರಿಂದ ಅಪಘಾತ ಘಟನೆಗಳನ್ನು ಕಡಿಮೆ ಮಾಡಬಹುದಾಗಿದ್ದು, ಇದರಿಂದ ಸಮಾಜಕ್ಕೆ ಕೊಡುಗೆ ನೀಡಿದಂತಾಗುತ್ತದೆ ಎಂದರು.
ವಿಡಿಯೋ ಸಂವಾದದ ಬಳಿಕ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಮಾತನಾಡಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಎಲ್ಲಾ ತಾಲ್ಲೂಕು ಕಾನೂನು ಸೇವಾ ಸಮಿತಿ ಮತ್ತು ಇತರೆ ಪಾಲುದಾರ ಇಲಾಖೆಗಳ ಸಹಯೋಗದೊಂದಿಗೆ ಜ.01 ರಿಂದ 30 ರ ವರೆಗೆ ಜಿಲ್ಲೆಯಲ್ಲಿ ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಡಿ ಹಮ್ಮಿಕೊಂಡಿರುವ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮಗಳಿಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಸಾರಿಗೆ ಇಲಾಖೆ, ಶಿಕ್ಷಣ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳು ಸೇರಿದಂತೆ ಸಂಬAಧಪಟ್ಟ ಇಲಾಖೆಗಳ ಅಧಿಕಾರಿಗಳ ಅಗತ್ಯ ಸಹಕಾರದೊಂದಿಗೆ ಅಭಿಯಾನ ಯಶಸ್ವಿಗೊಳಿಸಲಾಗುವುದು ಎಂದರು.
ವಿಡಿಯೋ ಸಂವಾದದಲ್ಲಿ ವಾರ್ತಾ ಇಲಾಖೆಯ ವಾರ್ತಾ ಸಹಾಯಕ ವಿ.ಸಿ.ಗುರುರಾಜ ಹಾಗೂ ಇತರರು ಭಾಗವಹಿಸಿದ್ದರು.
------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)



ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ